– ಊಹಾಪೋಹಗಳಿಗೆ ಉತ್ತರಿಸಲ್ಲ
ಬೆಂಗಳೂರು: ಸಿಎಂ ರಾಜಕೀಯ ಕಾರ್ಯದರ್ಶಿ ಎನ್. ಆರ್ ಸಂತೋಷ್ ಆತ್ಮಹತ್ಯೆ ಯತ್ನ ಮಾಡಿರುವುದು ನಮಗೂ ಶಾಕ್ ತಂದಿದೆ. ಅವರು ಗುಣಮುಖರಾದ ಮೇಲೆ ಕೂತು ಚರ್ಚೆ ಮಾಡ್ತೇವೆ ಎಂದು ಬಿಜೆಪಿ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದ್ದಾರೆ.
ನಗರದ ಕಾವೇರಿ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜೀನಾಮೆ ಕೊಟ್ಟಿದ್ದಾರೆ ಅಂತ ಊಹಾಪೋಹಗಳು ಹಬ್ಬಿದೆ. ಹೀಗಾಗಿ ಸಂತೋಷ್ ಬಗೆಗಿನ ಊಹಾಪೋಗಗಳಿಗೆ ಉತ್ತರ ಕೊಡಲ್ಲ ಎಂದು ಖಡಕ್ಕಾಗಿ ನುಡಿದಿದ್ದಾರೆ.
Advertisement
Advertisement
ನಿನ್ನೆ ಸಿಎಂ ಅವರು ಆಸ್ಪತ್ರೆಗೆ ಭೇಟಿ ಮಾಡಿ ಬಂದಿದ್ದಾರೆ. ಸಂತೋಷ್ ಚೇತರಿಸಿಕೊಂಡಿದ್ದಾರೆ. ಇಂದು ಜನರಲ್ ವಾರ್ಡ್ ಗೆ ಶಿಫ್ಟ್ ಮಾಡುತ್ತಾರೆ. ಅವರು ಗುಣಮುಖರಾದ ಮೇಲೆ ಕೂತು ಚರ್ಚೆ ಮಾಡ್ತೇವೆ. ಆದರೆ ಅವರ ಬಗೆಗಿನ ಊಹಾಪೋಗಗಳಿಗೆ ಉತ್ತರ ಕೊಡಲ್ಲ ಎಂದರು. ಇದನ್ನೂ ಓದಿ: ಕೌಟುಂಬಿಕವಾಗಿ ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ: ಸಂತೋಷ್ ಪತ್ನಿ
Advertisement
Advertisement
ಮರಿಸ್ವಾಮಿ ಕಾವೇರಿಗೆ ನಿವಾಸಕ್ಕೆ ಬರೋದು ಹೊಸದಲ್ಲ. ಊಹಾಪೋಹಗಳಿಗೆ ಉತ್ತರ ಕೊಡೋಕೆ ನಂಗೆ ಇಷ್ಟವಿಲ್ಲ. ಮಾಧ್ಯಮಗಳಲ್ಲಿ ರಾಜೀನಾಮೆ ವಿಚಾರ ಬರುತ್ತಿರುವುದು ನೋಡಿದೆ. ಸಂತೋಷ್ ಗೆ ರಾಜೀನಾಮೆ ಕೊಡಿ ಅಂತ ಯಾರೂ ಹೇಳಿಲ್ಲ. ಯಾರಿಗೆ ಯಾವ ಸ್ಥಾನವನ್ನ ಕೊಡಬೇಕು ಅನ್ನೋದು ಮುಖ್ಯಮಂತ್ರಿಗಳಿಗೆ ಗೊತ್ತಿದೆ ಎಂದು ವಿಜಯೇಂದ್ರ ತಿಳಿಸಿದರು. ಇದನ್ನೂ ಓದಿ: ಆತ್ಮಹತ್ಯೆಗೆ ಯತ್ನಿಸಿದ್ದ ಸಂತೋಷ್ ವಿರುದ್ಧ ಎಫ್‍ಐಆರ್ ದಾಖಲು
ಸಿಎಂ ರಾಜಕೀಯ ಕಾರ್ಯದರ್ಶಿ ಸಂತೋಷ್ ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕೂಡಲೇ ಕುಟುಂಬಸ್ಥರು ಅವರನ್ನು ನಗರ ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂತೋಷ್, ಆರೋಗ್ಯ ಸ್ಥಿರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ನಿನ್ನೆ ರಾತ್ರಿಯೇ ಆಸ್ಪತ್ರೆಗೆ ಭೇಟಿ ನೀಡಿ ಸಂತೋಷ್ ಆರೋಗ್ಯ ವಿಚಾರಿಸಿದ್ದಾರೆ.