– ಅಮ್ಮ, ಅಕ್ಕನ ಒಡವೆ ಯಾರದ್ರೂ ಬಿಡಿಸಿಕೊಡಿ
ಚಿಕ್ಕಬಳ್ಳಾಪುರ: ಕೊರೊನಾ ಸಂಕಷ್ಟದ ಸಮಯದಲ್ಲಿ ಜೀವನ ನಡೆಸಲು ಕೆಲಸದಿಂದ ಸಿಗುವ ಸಂಬಳ ಸಾಕಾಗುತ್ತಿಲ್ಲ ಎಂದು ಮನನೊಂದ ಕಾರ್ಮಿಕನೋರ್ವ ಡೆತ್‍ನೋಟ್ ಬರೆದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯಲ್ಲಿ ವರದಿಯಾಗಿದೆ.
Advertisement
ಶಿವರಾಜ್(28) ಆತ್ಮಹತ್ಯೆಗೆ ಶರಣಾದ ಕಾರ್ಮಿಕ. ಶಿವರಾಜ್ ದಾವಣಗೆರೆಯ ಮೂಲದವನಾಗಿದ್ದು, ಸ್ಯಾಲರಿ ಹೈಕ್ ಆಗಿಲ್ಲದೆ ಕಡಿಮೆ ಸಂಬಳದಲ್ಲಿ ಮನೆ ಸಂಭಾಳಿಸುವುದು ಕಷ್ಟವಾಗಿದೆ. ಇದರ ಜೊತೆ ಕಂಪನಿ ಮ್ಯಾನೇಜ್ಮೆಂಟ್ ಕಿರುಕುಳಕ್ಕೆ ಬೇಸತ್ತು ಡೆತ್‍ನೋಟ್ ಬರೆದು ಬೆಂಗಳೂರು ಉತ್ತರ ತಾಲೂಕಿನ ಅದ್ದಿಗಾನಹಳ್ಳಿಯ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಇದನ್ನೂ ಓದಿ: ಮಗಳ ಜೊತೆ ಅಕ್ರಮ ಸಂಬಂಧ ಶಂಕೆ – ಯುವಕನ ಕೊಲೆಗೆ ಯತ್ನ
Advertisement
Advertisement
ದೊಡ್ಡಬಳ್ಳಾಪುರ ಕೈಗಾರಿಕಾ ಪ್ರದೇಶದ ಇಂಡೋ ಮಿಮ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಶಿವರಾಜ್, ತನ್ನ ಸಂಬಳ ಕೇವಲ 18,000 ರೂ.ಗಳಾಗಿದ್ದು ಅದರಲ್ಲಿ ಮನೆ ಸಂಭಾಳಿಸಲು ಸಾಧ್ಯವಾಗುತ್ತಿಲ್ಲ. ಸಂಬಳ ಹೆಚ್ಚಿಸಿ ಎಂಬ ಬೇಡಿಕೆಯನ್ನು ಕಾರ್ಖಾನೆಯವರು ಈಡೇರಿಸುತ್ತಿಲ್ಲ. ಜೊತೆಗೆ ಕಂಪನಿಯ ವೆಂಕಟರಾಮು, ಬಾಲು ಮತ್ತು ರಾಮು ಎಂಬುವರು ಮಾನಸಿಕ ಕಿರುಕುಳ ನೀಡುತ್ತಿರುವ ಬಗ್ಗೆ ಬರೆದಿದ್ದಾನೆ. ಇದರ ಜೊತೆಗೆ ತನ್ನ ಕುಟುಂಬ ಬಗ್ಗೆ ಬರೆದಿರುವ ಆತ ಕಂಪನಿಯಲ್ಲಿ ಸಿಗುವ ಇನ್ಸೂರೆನ್ಸ್ ಹಣವನ್ನು ತನ್ನ ಮನೆಯವರಿಗೆ ನೀಡಿ. ಅಡ ಇಟ್ಟಿರುವ ತನ್ನ ತಾಯಿ ಮತ್ತು ಅಕ್ಕನ ಒಡವೆಯನ್ನು ಯಾರಾದರೂ ಬಿಡಿಸಿಕೊಡಿ ಎಂದು ಕೇಳಿಕೊಂಡಿದ್ದಾನೆ. ಸಾಯುತ್ತಿರುವುದಕ್ಕೆ ಮನೆಯವರಿಗೆಲ್ಲ ಸ್ವಾರಿ ಎಂದು ಪತ್ರದಲ್ಲಿ ಬರೆದಿದ್ದಾನೆ. ಈ ಸಂಬಂಧ ರಾಜಾನುಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement