ಸಂಸದೆ ಸುಮಲತಾ ಅಂಬರೀಷ್‌ಗೆ ಕೊರೊನಾ ಪಾಸಿಟಿವ್‌

Public TV
1 Min Read
SUMALATHA

ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದ ಸಂಸದೆ ಸುಮಲತಾ ಅಂಬರೀಷ್‌ ಅವರಿಗೆ ಕೊರೊನಾ ಪಾಸಿಟಿವ್‌ ದೃಢಪಟ್ಟಿದೆ.

ತನಗೆ ಪಾಸಿಟಿವ್‌ ಬಂದಿರುವ ವಿಚಾರವನ್ನು ಫೇಸ್‌ಬುಕ್‌ನಲ್ಲಿ ಸುಮಲತಾ ಅವರು ಪ್ರಕಟಿಸಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

mnd sumalatha 2

ಪೋಸ್ಟ್‌ನಲ್ಲಿ ಏನಿದೆ?
ಶನಿವಾರ, ಜುಲೈ 4ರಂದು, ನನಗೆ ಸ್ವಲ್ಪ ತಲೆನೋವು ಮತ್ತು ಗಂಟಲು ನೋವು ಕಾಣಿಸಿಕೊಂಡಿತ್ತು. ನಿರಂತರವಾಗಿ ನನ್ನ ಕ್ಷೇತ್ರದ ಕಾರ್ಯಗಳಲ್ಲಿ ತೊಡಗಿದ್ದರಿಂದ ಮತ್ತು ಕೊರೊನಾ ಪೀಡಿತ ಪ್ರದೇಶಗಳಿಗೂ ಭೇಟಿ ಕೊಟ್ಟಿದ್ದರಿಂದ, ಕೋವಿಡ್ 19 ಪರೀಕ್ಷೆಗೆ ಒಳಗಾದೆ.

ಇವತ್ತು ಪಾಸಿಟಿವ್ ಎಂದು ಫಲಿತಾಂಶ ಬಂದಿದೆ. ಹಾಗಾಗಿ ವೈದ್ಯರ ಸಲಹೆ ಪಡೆದುಕೊಂಡು ಅಗತ್ಯ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದೇನೆ. ಮನೆಯಲ್ಲಿಯೇ ಕ್ವಾರಂಟೈನ್ ಗೆ ಒಳಪಟ್ಟಿದ್ದೇನೆ.

 

https://www.facebook.com/SumalathaAmbi/posts/900728177071075

ರೋಗನಿರೋಧಕ ಶಕ್ತಿಯು ನನ್ನಲ್ಲಿ ಪ್ರಬಲವಾಗಿದೆ ಮತ್ತು ನಿಮ್ಮ ಆಶೀರ್ವಾದ ನನ್ನ ಮೇಲೆ ಇರುವುದರಿಂದ ಬೇಗ ಗುಣಮುಖ ಆಗುತ್ತೇನೆ. ಈಗಾಗಲೇ ನನ್ನನ್ನು ಭೇಟಿಯಾದ ವ್ಯಕ್ತಿಗಳ ವಿವರವನ್ನು ಸರಕಾರಿ ಅಧಿಕಾರಿಗಳಿಗೆ ಕೊಟ್ಟಿರುವೆ. ಆದರೂ ನನ್ನನ್ನು ಭೇಟಿಯಾದವರಲ್ಲಿ ಯಾರಿಗಾದರೂ ಕೋವಿಡ್‌ ಲಕ್ಷಣಗಳು ಕಂಡುಬಂದಲ್ಲಿ ಕೂಡಲೇ ಪರೀಕ್ಷೆ ಮಾಡಿಸಲು ವಿನಂತಿಸುತ್ತೇನೆ. ನಿಮ್ಮ ಹಾರೈಕೆ ಇರಲಿ.

Share This Article
Leave a Comment

Leave a Reply

Your email address will not be published. Required fields are marked *