ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಸಹೋದರ ಮತ್ತು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಿಕೆ ಸುರೇಶ್ ಕುಮಾರ್ ಅವರಿಗೆ ಕೊರೊನಾ ಪಾಸಿಟಿವ್ ಬಂದಿದೆ.
ಈ ಹಿಂದೆ ಡಿಕೆ ಶಿವಕುಮಾರ್ ಅವರಿಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿತ್ತು. ಇದಾದ ನಂತರ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿ ಬಂದಿದ್ದರು. ಈಗ ಅವರ ತಮ್ಮ ಡಿ.ಕೆ ಸುರೇಶ್ ಅವರಿಗೂ ಕೂಡ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದೆ. ಇದನ್ನು ಸ್ವತಃ ಸುರೇಶ್ ಅವರೇ ಟ್ವೀಟ್ ಮಾಡುವ ಮೂಲಕ ಖಚಿತಪಡಿಸಿದ್ದಾರೆ. ಇದನ್ನು ಓದಿ: ಎರಡು ಮನೆಯಿಂದ ಸೇರಿ ಒಟ್ಟು 6.78 ಲಕ್ಷ ಸಿಕ್ಕಿದೆ – ಡಿ.ಕೆ.ಸುರೇಶ್ ಸ್ಪಷ್ಟನೆ
#Covid19 ಪರೀಕ್ಷೆಯಲ್ಲಿ ನನಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಸಧ್ಯಕ್ಕೆ ನನ್ನ ಆರೋಗ್ಯ ಸ್ಥಿರವಾಗಿದೆ ಹಾಗೂ ಸುರಕ್ಷಿತವಾಗಿ ಇದ್ದೇನೆ. ಕೆಲವು ದಿನಗಳಿಂದ ನನ್ನ ಸಂಪರ್ಕದಲ್ಲಿ ಇದ್ದ ಸ್ನೇಹಿತರು, ಬಂಧುಗಳು ಹಾಗೂ ನನ್ನ ಜೊತೆಗೆ ಇದ್ದ CBI ಅಧಿಕಾರಿಗಳು, ಮಾಧ್ಯಮ ಮಿತ್ರರಿಗೆ #Corona ಪರೀಕ್ಷೆ ಮಾಡಿಸಿಕೊಳ್ಳಲು ವಿನಂತಿಸಿಕೊಳ್ಳುತ್ತೇನೆ.
— DK Suresh (@DKSureshINC) October 6, 2020
ಈ ವಿಚಾರವಾಗಿ ಟ್ವೀಟ್ ಮಾಡಿರುವ ಸುರೇಶ್ ಅವರು, ಕೋವಿಡ್ ಪರೀಕ್ಷೆಯಲ್ಲಿ ನನಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಸದ್ಯಕ್ಕೆ ನನ್ನ ಆರೋಗ್ಯ ಸ್ಥಿರವಾಗಿದೆ ಹಾಗೂ ಸುರಕ್ಷಿತವಾಗಿ ಇದ್ದೇನೆ. ಕೆಲವು ದಿನಗಳಿಂದ ನನ್ನ ಸಂಪರ್ಕದಲ್ಲಿ ಇದ್ದ ಸ್ನೇಹಿತರು, ಬಂಧುಗಳು ಹಾಗೂ ನನ್ನ ಜೊತೆಗೆ ಇದ್ದ ಸಿಬಿಐ ಅಧಿಕಾರಿಗಳು, ಮಾಧ್ಯಮ ಮಿತ್ರರಿಗೆ ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಲು ವಿನಂತಿಸಿಕೊಳ್ಳುತ್ತೇನೆ ಎಂದು ತಿಳಿಸಿದ್ದಾರೆ.