ಸಚಿವರು, ಶಾಸಕರ 1 ತಿಂಗಳ ವೇತನ ಕೋವಿಡ್ ಪರಿಹಾರ ನಿಧಿಗೆ – ಸಿಎಂ ಸಭೆಯಲ್ಲಿ ಏನು ಚರ್ಚೆ ಆಯ್ತು?

Public TV
2 Min Read
bsy meeting e1619696443842

– ಹಾಸ್ಟೆಲ್, ವಸತಿ ಶಾಲೆಗಳಲ್ಲಿ ಕೋವಿಡ್ ಸೆಂಟರ್
– ಗ್ರಾಮ ಪಂಚಾಯತ್‍ಗಳಲ್ಲಿ ಟಾಸ್ಕ್ ಫೋರ್ಸ್

ಬೆಂಗಳೂರು: ಸಚಿವರ ಒಂದು ವರ್ಷದ ವೇತನ ಹಾಗೂ ಶಾಸಕರ ಒಂದು ತಿಂಗಳ ವೇತನವನ್ನು ಕೋವಿಡ್ ಪರಿಹಾರ ನಿಧಿಗೆ ದೇಣಿಗೆ ನೀಡಲು ಮುಖ್ಯಮಂತ್ರಿಗಳು ಸಲಹೆ ನೀಡಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಎಲ್ಲ ಜಿಲ್ಲೆಗಳ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮಾಡಿ ಚರ್ಚಿಸಿದರು.

ಸಭೆಯ ಮುಖ್ಯಾಂಶಗಳು
1. ಕೋವಿಡ್ ಸೋಂಕು ತಡೆಗಟ್ಟುವ ಕ್ರಮಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ.
2. ಸರ್ಕಾರದ ಮಾರ್ಗಸೂಚಿಗಳ ಕಟ್ಟುನಿಟ್ಟಿನ ಅನುಷ್ಠಾನ, ಉಲ್ಲಂಘಿಸಿದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕ್ಕೆ ಸೂಚಿಸಲಾಗಿದೆ, ಸಾರ್ವಜನಿಕರು ಮಾಸ್ಕ್ ಧಾರಣೆ, ಸಾರ್ವಜನಿಕ ಅಂತರ ಕಾಯ್ದುಕೂಳ್ಳಬೇಕು
3. ಕೆಲವು ಜಿಲ್ಲೆಗಳಲ್ಲಿ ಇನ್ನೂ ಕೋವಿಡ್ ಕೇರ್ ಸೆಂಟರುಗಳನ್ನು ತೆರೆದಿಲ್ಲ, ಅಂತಹ ಜಿಲ್ಲೆಗಳಲ್ಲಿ ಕೋವಿಡ್ ಕೇರ್ ಸೆಂಟರುಗಳನ್ನು ಆದ್ಯತೆಯ ಮೇರೆಗೆ ತೆರೆಯುಬೇಕು. ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಹಾಗೂ ತಾಲೂಕು ಕೇಂದ್ರಗಳಲ್ಲಿ ಕೋವಿಡ್ ಕೇರ್ ಸೆಂಟರಗಳನ್ನು ತೆರೆಯಬೇಕು. ಇದಕ್ಕಾಗಿ ವಸತಿ ಶಾಲೆಗಳು, ಹಾಸ್ಟೆಲ್ ಗಳನ್ನು ಬಳಸಿಕೂಳ್ಳಲು ಸೂಚಿಸಿದೆ.

corona virus 2 2

4. ಗ್ರಾಮ ಪಂಚಾಯಿತಿಗಳಲ್ಲಿ ಹಾಗೂ ತಾಲ್ಲೂಕುಗಳಲ್ಲಿ ಟಾಸ್ಕ್ ಫೋರ್ಸ್ ರಚನೆ ಮಾಡಿ ರೋಗಿಗಳಿಗೆ ಹಳ್ಳಿಗಳಲ್ಲಿ ಸರಿಯಾದ ಕಾಳಜಿ ವಹಿಸಲು ನಿರ್ದೇಶನ.
5. ಜಿಲ್ಲಾಧಿಕಾರಿಗಳಿಗೆ ಈಗಾಗಲೇ ಹಣ ಬಿಡುಗಡೆ ಆಗಿದ್ದು, ಮನೆಯಲ್ಲೇ ಇದ್ದು ಚಿಕಿತ್ಸೆ ಪಡೆಯುತ್ತಿರುವವರಿಗೆ ಮೆಡಿಕಲ್ ಕಿಟ್ ಗಳನ್ನು ವಿತರಿಸಲು ಕ್ರಮ ವಹಿಸುವಂತೆ ಹಾಗೂ ಇವರ ಆರೋಗ್ಯ ಮೇಲ್ವಿಚಾರಣೆಗಾಗಿ ತಂಡಗಳನ್ನು ರಚಿಸುವಂತೆ ಸೂಚನೆ.
6. ಪರೀಕ್ಷೆಗಳನ್ನು ಕೇವಲ ರೋಗಲಕ್ಷಣ ಇದ್ದವರಿಗೆ ಸೀಮಿತ ಮಾಡಿ ಮತ್ತು ಪರೀಕ್ಷಾ ಫಲಿತಾಂಶ 24 ಗಂಟೆಗಳಲ್ಲಿ ಕೊಡುವ ವ್ಯವಸ್ಥೆ ಮಾಡಬೇಕು. ಬಾಕಿ ಇರುವ ಪರೀಕ್ಷೆಗಳನ್ನು ಕೂಡಲೇ ಪೂರ್ಣಗೊಳಿಸುವಂತೆ ಸೂಚನೆ.

7. ಎಲ್ಲಾ ಆಸ್ಪತ್ರೆಗಳಿಗೆ ಆಕ್ಸಿಜನ್ ಪೂರೈಕೆ ಸರಿಯಾದ ಸಮಯದಲ್ಲಿ ತಲುಪುವಂತೆ ಮಾಡಬೇಕು.
8. ಪ್ರತಿ ಆಸ್ಪತ್ರೆಯಲ್ಲಿ ರೆಮಿಡಿಸಿವರ್ ಔಷಧ ಹಾಗೂ ಆಕ್ಸಿಜನ್ ಬಗ್ಗೆ ಆಡಿಟ್ ಆಗಬೇಕು. ಯಾರು ಯಾರಿಗೆ ಅತೀ ಅವಶ್ಯವಿದೆಯೋ ಅವರಿಗೆ ಕೊಡುವ ವ್ಯವಸ್ಥೆ ಮಾಡಬೇಕು.
9. ರೆಮ್‍ಡಿಸಿವರ್ ಮತ್ತು ಆಕ್ಸಿಜನೇಟೆಡ್ ಬೆಡ್ ಗಳ ವಿವೇಚನಾರಹಿತ ಬಳಕೆಯಾಗದಂತೆ ತಡೆಗಟ್ಟಬೇಕು. ಅಗತ್ಯವಿರುವವರಿಗೆ ಮಾತ್ರ ಈ ಇಂಜೆಕ್ಷನ್ ಹಾಗೂ ಆಕ್ಸಿಜನೇಟೆಡ್ ಬೆಡ್ ಗಳನ್ನು ಒದಗಿಸುವ ಮೂಲಕ ಕೃತಕ ಅಭಾವ ಸೃಷ್ಟಿಯಾಗದಂತೆ ಎಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಸೂಚನೆ.

Corona 1q.jpeg

10. ವೆಂಟಿಲೇಟರ್ ಬೆಡ್ ಗಳನ್ನು ಸಹ ಅತ್ಯಂತ ವಿವೇಚನೆಯಿಂದ ಬಳಸಬೇಕು.
11. ಯಾವುದಾದರೂ ಜಿಲ್ಲೆಯಲ್ಲಿ ಆಕ್ಸಿಜನ್ ಕೊರತೆಯಾದರೆ, ತುರ್ತು ಸಂದರ್ಭದಲ್ಲಿ ನೆರೆಯ ಜಿಲ್ಲೆಯಿಂದ ಪಡೆದುಕೊಳ್ಳುವಂತೆ, ಜಿಲ್ಲಾಧಿಕಾರಿಗಳು ಪರಸ್ಪರ ಸಹಕಾರದಿಂದ ಕಾರ್ಯನಿರ್ವಹಿಸುವಂತೆ ಸೂಚನೆ.
12. ಎಲ್ಲಾ ಇಲಾಖೆಯ ಅಧಿಕಾರಿಗಳನ್ನು ಹಾಗೂ ಇತರೆ ಸಂಪನ್ಮೂಲಗಳನ್ನು ಕೋವಿಡ್ ನಿರ್ವಹಣೆಗಾಗಿ ಬಳಸಿಕೊಳ್ಳುವಂತೆ ಸೂಚಿಸಲಾಯಿತು.

13. ಮೈಸೂರಿನಲ್ಲಿ ಆಕ್ಸಿಜನ್ ಉತ್ಪಾದನಾ ಪ್ಲಾಂಟ್ ನಲ್ಲಿ ಇರುವ ಒಟ್ಟು 5 ಆಕ್ಸಿಜನ್ ಜನರೇಟಿಂಗ್ ಘಟಕಗಳ ಪೈಕಿ ಎರಡು ಮಾತ್ರ ಕಾರ್ಯನಿರ್ವಹಿಸುತ್ತಿದ್ದು, ಉಳಿದ ಮೂರು ಘಟಕಗಳ ದುರಸ್ತಿಗೆ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿಗೆ ಸೂಚಿಸಲಾಯಿತು.
14. ಕೃಷಿ ಚಟುವಟಿಕೆಗಳು, ಸರ್ಕಾರ ಅನುಮತಿಸಿರುವ ಕೈಗಾರಿಕೆ ಮತ್ತಿತರ ಚಟುವಟಿಕೆಗಳು ಸೂಕ್ತ ಮುನ್ನೆಚ್ಚರಿಕೆಯೊಂದಿಗೆ ಅಬಾಧಿತವಾಗಿ ನಡೆಯುವಂತೆ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ನಿರ್ದೇಶನ.
15. ಸಚಿವರ ಒಂದು ವರ್ಷದ ವೇತನ ಹಾಗೂ ಶಾಸಕರ ಒಂದು ತಿಂಗಳ ವೇತನವನ್ನು ಕೋವಿಡ್ ಪರಿಹಾರ ನಿಧಿಗೆ ದೇಣಿಗೆ ನೀಡಲು ಮುಖ್ಯಮಂತ್ರಿಗಳು ಸಲಹೆ ನೀಡಿದರು.

Share This Article
Leave a Comment

Leave a Reply

Your email address will not be published. Required fields are marked *