ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಅವರಿಗೆ ಕೋವಿಡ್ 19 ಪಾಸಿಟಿವ್ ಇರುವುದು ದೃಢಪಟ್ಟಿದೆ.
ಈ ಸಂಬಂಧ ಟ್ವೀಟ್ ಮಾಡಿರುವ ಸಚಿವೆ, ನನಗೆ ಕೋವಿಡ್ ಪಾಸಿಟಿವ್ ಧೃಡಪಟ್ಟಿದ್ದು, ವೈದ್ಯರ ಸಲಹೆಯ ಮೇರೆಗೆ 14 ದಿನಗಳ ಕಾಲ ಮನೆಯಲ್ಲಿಯೇ ಕ್ವಾರೆಂಟೇನ್ ಆಗಲಿದ್ದೇನೆ. ನನ್ನ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕದಲ್ಲಿದ್ದವರು, ಕೊವಿಡ್ ಪರೀಕ್ಷೆ ಮಾಡಿಸಿಕೊಂಡು ಕ್ವಾರೆಂಟೇನ್ ಆಗಬೇಕಾಗಿ ವಿನಂತಿ ಎಂದು ಮನವಿ ಮಾಡಿಕೊಂಡಿದ್ದಾರೆ.
ನನಗೆ ಕೊವಿಡ್ ಪಾಸಿಟಿವ್ ಧೃಡಪಟ್ಟಿದ್ದು , ವೈದ್ಯರ ಸಲಹೆಯ ಮೇರೆಗೆ 14 ದಿನಗಳ ಕಾಲ ಮನೆಯಲ್ಲಿಯೇ ಕ್ವಾರೆಂಟೇನ್ ಆಗಲಿದ್ದೇನೆ.
ನನ್ನ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕದಲ್ಲಿದ್ದವರು, ಕೊವಿಡ್ ಪರೀಕ್ಷೆ ಮಾಡಿಸಿಕೊಂಡು ಕ್ವಾರೆಂಟೇನ್ ಆಗಬೇಕಾಗಿ ವಿನಂತಿ.@Karnataka_DIPR@DHFWKA
— Shashikala Jolle (@ShashikalaJolle) August 31, 2020
ಸಚಿವೆ ಕೊರೊನಾ ಬಂದಿರುವ ಸುದ್ದಿ ತಿಳಿದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಬೇಗ ಗುಣಮುರಾಗುವಂತೆ ಹಾರೈಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿಎಂ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಅವರು ಶೀಘ್ರದಲ್ಲಿ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಕರ್ತವ್ಯಕ್ಕೆ ಮರಳಲಿ ಎಂದು ಹಾರೈಸುತ್ತೇನೆ ಎಂದು ಬರೆದುಕೊಂಡಿದ್ದಾರೆ.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶ್ರೀಮತಿ ಶಶಿಕಲಾ ಜೊಲ್ಲೆ ಅವರು ಶೀಘ್ರದಲ್ಲಿ ಕೊರೋನಾ ಸೋಂಕಿನಿಂದ ಗುಣಮುಖರಾಗಿ ಕರ್ತವ್ಯಕ್ಕೆ ಮರಳಲಿ ಎಂದು ಹಾರೈಸುತ್ತೇನೆ.@ShashikalaJolle https://t.co/iz2n0eEWvL
— B.S.Yediyurappa (@BSYBJP) September 1, 2020