ಚಿಕ್ಕೋಡಿ: ಸಚಿವೆ ಶಶಿಕಲಾ ಜೊಲ್ಲೆ ಒಡೆತನದ ಶಿವಶಂಕರ ಜೊಲ್ಲೆ ಪಬ್ಲಿಕ್ ಶಾಲೆಯಲ್ಲಿ ಕೋವಿಡ್ ಕೇರ್ ಆಸ್ಪತ್ರೆ ಆರಂಭಿಸಲಾಗಿದ್ದು, ಸೋಂಕಿತರಿಗೆ ಆಕ್ಸಿಜನ್ ಬೆಡ್ ಸಹಿತ ಉಚಿತ ಚಿಕಿತ್ಸೆ ನೀಡಲಾಗುತ್ತಿದೆ.
Advertisement
ಜಿಲ್ಲೆಯ ನಿಪ್ಪಾಣಿ ಪಟ್ಟಣದಲ್ಲಿ ಜೊಲ್ಲೆ ಉದ್ಯೋಗ ಸಮೂಹ ಸಂಸ್ಥೆ ವತಿಯಿಂದ ಆರಂಭಿಸಿರುವ ಕೋವಿಡ್ ಕೇರ್ ಆಸ್ಪತ್ರೆಗೆ ಡಿಸಿಎಂ ಲಕ್ಷ್ಮಣ ಸವದಿ ಚಾಲನೆ ನೀಡಿದರು. ಜೊಲ್ಲೆ ಒಡೆತನದ ಶಿವಶಂಕರ ಜೊಲ್ಲೆ ಪಬ್ಲಿಕ್ ಶಾಲೆಯಲ್ಲಿ ಕೋವಿಡ್ ಕೇರ್ ಆಸ್ಪತ್ರೆ ತೆರೆಯಲಾಗಿದೆ. ಈ ಆಸ್ಪತ್ರೆಯಲ್ಲಿ ಕೊವಿಡ್ ರೋಗಿಗಳಿಗೆ ಉಚಿತವಾಗಿ ಚಿಕಿತ್ಸೆ ನೀಡಲಾಗುತ್ತಿದೆ.
Advertisement
ಒಟ್ಟು 16 ಆಕ್ಸಿಜನ್ ಬೆಡ್ ಸೇರಿದಂತೆ 50 ಬೆಡ್ ಗಳ ಆಸ್ಪತ್ರೆಯನ್ನು ಸಚಿವೆ ಶಶಿಕಲಾ ಜೊಲ್ಲೆ ಹಾಗೂ ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಅವರ ವಿಶೇಷ ಕಾಳಜಿಯಿಂದ ಆರಂಭಿಸಲಾಗಿದೆ.
Advertisement
Advertisement
ಸರ್ಕಾರದ ಸಹಭಾಗಿತ್ವದಲ್ಲಿ ಈ ಆಸ್ಪತ್ರೆ ಆರಂಭಿಸಿದರೂ ರೋಗಿಗಳ ಊಟೋಪಚಾರ, ನುರಿತ ವೈದ್ಯರ ವೇತನ ಹಾಗೂ ಆಸ್ಪತ್ರೆಯ ಸಿಬ್ಬಂದಿಗಳ ಖರ್ಚು ವೆಚ್ಚವನ್ನ ಜೊಲ್ಲೆ ಉದ್ಯೋಗ ಸಮೂಹ ಭರಿಸಲಿದೆ. ಬಡ ರೋಗಿಗಳೂ ಆಸ್ಪತ್ರೆಯ ಲಾಭ ಪಡೆಯುವಂತೆ ಸಚಿವೆ ಶಶಿಕಲಾ ಜೊಲ್ಲೆ ವಿನಂತಿಸಿದ್ದಾರೆ. ಶಶಿಕಲಾ ಜೊಲ್ಲೆ ಅವರ ಕಾರ್ಯಕ್ಕೆ ಸಾರ್ವಜನಿಕ ಪ್ರಶಂಸೆ ವ್ಯಕ್ತವಾಗಿದೆ.