ಉಜಿರೆ: ಆರೋಗ್ಯ ಸಚಿವಡಾ. ಸುಧಾಕರ್ ಸಕುಟುಂಬಿಕರಾಗಿ ಗುರುವಾರ ಧರ್ಮಸ್ಥಳಕ್ಕೆ ಬಂದು ಮಂಜುನಾಥ ದೇವರ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಇದೇ ವೇಳೆ ಹೆಗ್ಗಡೆಯವರು ಸಚಿವರನ್ನು ಗೌರವಿಸಿದರು.
ಕೊರೋನಾ ಹತೋಟಿಯಲ್ಲಿದೆ: ರಾಜ್ಯದಲ್ಲಿ ಕೊರೋನಾ ಈಗ ಹತೋಟಿಯಲ್ಲಿದ್ದು ಸೋಂಕಿತರ ಸಂಖ್ಯೆ ಇಳಿಮುಖವಾಗುತ್ತಿದೆ. ಒಂದು ವರ್ಷದೊಳಗೆ ಕೊರೋನಾ ಸಂಪೂರ್ಣ ನಿರ್ಮೂಲನೆಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಸಚಿವರು ಸರ್ಕಾರದ ಮಾರ್ಗಸೂಚಿ ನಿಯಮಗಳನ್ನು ಎಲ್ಲರೂ ಕಡ್ಡಾಯವಾಗಿ ಪಾಲಿಸಿ ಸಹಕರಿಸಬೇಕು ಎಂದು ಸಲಹೆ ನೀಡಿದರು.
ಧರ್ಮಸ್ಥಳದ ಮಹೋತ್ಸವ ಸಭಾಭವನದಲ್ಲಿ ಅವರ ಹತ್ತಿರದ ಸಂಬಂಧಿಯೊಬ್ಬರ ಮದುವೆಯಲ್ಲಿ ಭಾಗವಹಿಸಿದ ಬಳಿಕ ಸಚಿವರು ಬೆಂಗಳೂರಿಗೆ ಪ್ರಯಾಣ ಮುಂದುವರಿಸಿದರು. ಸಚಿವರ ಪತ್ನಿ ಡಾ.ಪ್ರೀತಿ, ಹಾಗೂ ಮಕ್ಕಳಾದ ಸಮನ್ಯು, ಪ್ರದ್ಯುನ್ ಮತ್ತು ಸಾನ್ವಿ ಇದ್ದರು.