ಸಚಿವ ಶಿವರಾಮ್ ಹೆಬ್ಬಾರ್, ಪತ್ನಿಗೆ ಕರೊನಾ ಸೋಂಕು ದೃಢ

Public TV
1 Min Read
shivaram hebbar

ಕಾರವಾರ: ಕಾರ್ಮಿಕ ಮತ್ತು ಸಕ್ಕರೆ ಖಾತೆ ಹಾಗೂ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ ಹಾಗೂ ಅವರ ಪತ್ನಿ ವನಜಾಕ್ಷಿ ಹೆಬ್ಬಾರ್ ಅವರಿಗೆ ಕೊರೊನಾ ಸೋಂಕು ತಗುಲಿರುವುದು ಇಂದು ದೃಢಪಟ್ಟಿದೆ.

CORONA 1 2

ಈ ಕುರಿತು ತಮ್ಮ ಫೇಸ್ಬುಕ್ ಖಾತೆಯಲ್ಲಿ ಸಚಿವ ಹೆಬ್ಬಾರ್ ಪೋಸ್ಟ್ ಮಾಡುವ ಮೂಲಕ ಸ್ಪಷ್ಟಪಡಿಸಿದ್ದು, ತಮಗೆ ಹಾಗೂ ತಮ್ಮ ಪತ್ನಿಗೆ ಕೋವಿಡ್ ಸೋಂಕು ತಗುಲಿರುವ ಬಗ್ಗೆ ದೃಢಪಡಿಸಿದ್ದಾರೆ. ಶುಕ್ರವಾರ ಯಲ್ಲಾಪುರ ಸರಕಾರಿ ಆಸ್ಪತ್ರೆಯಲ್ಲಿ ಕೋವಿಡ್ ಪರೀಕ್ಷೆಗೆ ಒಳಗಾಗಿದ್ದ ಸಚಿವರಿಗೆ ಇಂದು ವರದಿ ಬಂದಿದ್ದು, ಇಬ್ಬರಿಗೂ ಸೋಂಕು ದೃಢಪಟ್ಟಿದೆ. ಕಳೆದ 2 ದಿನಗಳಿಂದ ಸಚಿವರ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕದಲ್ಲಿರುವವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳುವಂತೆ ಸಚಿವರು ಫೇಸ್ಬುಕ್ ಮೂಲಕ ವಿನಂತಿಸಿದ್ದಾರೆ.

ಈ ಕುರಿತು ಬರೆದುಕೊಂಡಿರುವ ಅವರು, ಇಂದು ನಾನು ನನ್ನ ಧರ್ಮಪತ್ನಿ ಕೋವಿಡ್ ಪರೀಕ್ಷೆಗೆ ಒಳಗಾಗಿದ್ದು, ಪರೀಕ್ಷಾ ವರದಿಯಲ್ಲಿ ಇಬ್ಬರಿಗೂ ಪಾಸಿಟಿವ್ ಬಂದಿದೆ. ಯಾವುದೇ ಹೆಚ್ಚಿನ ರೋಗ ಲಕ್ಷಣಗಳು ಇಲ್ಲದ ಕಾರಣ ವೈದ್ಯರ ಸಲಹೆಯಂತೆ ಹೋಮ್ ಕ್ವಾರಂಟೈನ್‍ನಲ್ಲಿದ್ದು, ಚಿಕಿತ್ಸೆ ತೆಗೆದುಕೊಳ್ಳುತ್ತೇನೆ. ನಿಮ್ಮೆಲ್ಲರ ಆಶೀರ್ವಾದ, ಹಾರೈಕೆಯಿಂದ ಅತೀ ಶೀಘ್ರ ಗುಣಮುಖವಾಗಿ ಜನತೆಯ ಸೇವೆಯ ಕಾರ್ಯದಲ್ಲಿ ತೊಡಗಿಕೊಳ್ಳುವ ವಿಶ್ವಾಸವಿದೆ ಎಂದು ಬರೆದುಕೊಂಡಿದ್ದಾರೆ.

ಇಂದು ನಾನು ಹಾಗೂ ನನ್ನ ಧರ್ಮಪತ್ನಿ ಕೋವಿಡ್ ಪರೀಕ್ಷೆಗೆ ಒಳಗಾಗಿದ್ದು, ಪರೀಕ್ಷಾ ವರದಿಯಲ್ಲಿ ಇಬ್ಬರಿಗೂ ಸಹ ಪಾಸಿಟಿವ್ ಎಂದು ಬಂದಿದೆ. ಯಾವುದೇ…

Posted by Shivaram Hebbar on Saturday, September 5, 2020

ಸಚಿವರು ಇಂದು ಜಿಲ್ಲೆಯ ಶಿರಸಿ, ಸಿದ್ದಾಪುರ ಭಾಗದ ಕಾರ್ಯಕ್ರಮದಲ್ಲಿ ಭಾಗವಹಿಸಬೇಕಿತ್ತು. ಆದರೆ ಕೋವಿಡ್ ಪಾಸಿಟಿವ್ ಬಂದ ಹಿನ್ನಲೆಯಲ್ಲಿ ಅವರ ಎಲ್ಲ ಕಾರ್ಯಕ್ರಮಗಳು ರದ್ದಾಗಿದ್ದು. ಹೋಮ್ ಕ್ವಾರಂಟೈನ್ ನಲ್ಲಿ ಇದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *