ಮಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಗ್ಗೆ ರಾಷ್ಟ್ರೀಯ ಅಧ್ಯಕ್ಷರ ಜೊತೆ ಮಾತನಾಡಿ ಮುಖ್ಯಮಂತ್ರಿಯೇ ನಿರ್ಧಾರ ಕೈಗೊಳ್ಳುತ್ತಾರೆ. ಇದರಲ್ಲಿ ಯಾವುದೇ ಗೊಂದಲವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅಭಿಪ್ರಾಯಪಟ್ಟಿದ್ದಾರೆ.
Advertisement
ಮಂಗಳೂರಿನಲ್ಲಿ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆಯಾದಾಗ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಶಾಸಕ, ಹಿರಿಯರೂ ಆದ ಎಸ್ ಅಂಗಾರ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ನನ್ನ ಅಭಿಪ್ರಾಯ ಹಾಗೂ ಬೇಡಿಕೆ ಇದೆ. ಮುಖ್ಯಮಂತ್ರಿಯವರ ಮುಂದೆ ನನ್ನ ಅಭಿಪ್ರಾಯವನ್ನು ಇಟ್ಟಿದ್ದೇನೆ. ಮಂತ್ರಿ ಸ್ಥಾನ ಕೊಡೋದು ಮುಖ್ಯಮಂತ್ರಿಯವರ ವಿವೇಚನೆಗೆ ಬಿಟ್ಟ ವಿಚಾರ. ಅವರೇ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದರು.
Advertisement
Advertisement
ಶುಕ್ರವಾರವಷ್ಟೇ ರಾಜ್ಯ ಬಿಜೆಪಿ ಪದಾಧಿಕಾರಿಗಳ ನೇಮಕ ಮಾಡಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರಕಟಿಸಿದ್ದರು. ಉಪಾಧ್ಯಕ್ಷರಾಗಿ ವಿಜಯೇಂದ್ರ, ತೇಜಸ್ವಿನಿ ಅನಂತಕುಮಾರ್, ಶೋಭಾ ಕರಂದ್ಲಾಜೆ, ಪ್ರತಾಪ್ ಸಿಂಹ, ಅರವಿಂದ ಲಿಂಬಾವಳಿ, ನಿರ್ಮಲಾ ಕುಮಾರ್ ಸುರಾನಾ, ಮಾಲೀಕಯ್ಯ ಗುತ್ತೇದಾರ್ ಅವರನ್ನು ನೇಮಿಸಲಾಗಿದೆ.
Advertisement
ರಾಜ್ಯ ಬಿಜೆಪಿಯ ನೂತನ ರಾಜ್ಯ ಪದಾಧಿಕಾರಿಗಳಾಗಿ ಆಯ್ಕೆಯಾದ ಎಲ್ಲ ನನ್ನ ಸಹೋದ್ಯೋಗಿಗಳಿಗೆ ಹಾರ್ದಿಕ ಅಭಿನಂದನೆಗಳು. ತಮ್ಮೆಲರ ಮುಂದಿನ ಕಾರ್ಯಯೋಜನೆಗಳು ಯಶಸ್ವಿಯಾಗಿ ರಾಜ್ಯದಲ್ಲಿ ನಮ್ಮ ಪಕ್ಷ, ಸಂಘಟನೆ, ಕಾರ್ಯಕರ್ತರ ಶಕ್ತಿ ಮತ್ತಷ್ಟು ಬಲಿಷ್ಠವಾಗಿ ಜನತೆಗೆ ಉತ್ತಮ ಆಡಳಿತ ನೀಡುವಲ್ಲಿ ಫಲಕಾರಿಯಾಗಲಿ ಎಂದು ಆಶಿಸುತ್ತೇನೆ. pic.twitter.com/OwMSZi0neL
— C T Ravi ???????? ಸಿ ಟಿ ರವಿ (@CTRavi_BJP) July 31, 2020
ಪ್ರಧಾನ ಕಾರ್ಯದರ್ಶಿಗಳಾಗಿ ರವಿಕುಮಾರ್, ಮಾಜಿ ಎಂಎಲ್‍ಸಿ ಅಶ್ವಥ್ ನಾರಾಯಣ, ಸಿದ್ದರಾಜು, ಮಹೇಶ್ ಟೆಂಗಿನ ಕಾಯಿ ಅವರಿಗೆ ಹೊಣೆ ನೀಡಲಾಗಿದೆ. ವಕ್ತಾರರಾಗಿ ಗಣೇಶ್ ಕಾರ್ಣಿಕ್‍ರನ್ನು ನೇಮಿಸಲಾಗಿದೆ. ಮಹಿಳಾ ಮೋರ್ಚಾ ಅಧ್ಯಕ್ಷೆಯಾಗಿ ಗೀತಾ ವಿವೇಕಾನಂದ, ಯುವ ಮೋರ್ಚಾದ ಅಧ್ಯಕ್ಷ ಸಂದೀಪ್ ಅನ್ನೋವ್ರನ್ನು ನೇಮಿಸಲಾಗಿದೆ.