ಬೆಂಗಳೂರು: ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ಅವರ ತಂದೆಗೆ ಜ್ವರ, ಕೆಮ್ಮು ಸಮಸ್ಯೆ ಕಾಣಿಸಿಕೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಲಾಗುತ್ತಿದೆ.
ಈ ಕುರಿತು ಟ್ವೀಟ್ ಮಾಡಿರುವ ಸಚಿವರು, ಜ್ವರ, ಕೆಮ್ಮು ಸಮಸ್ಯೆ ಕಂಡುಬಂದ ಹಿನ್ನೆಲೆಯಲ್ಲಿ 82 ವರ್ಷದ ನನ್ನ ಪೂಜ್ಯ ತಂದೆಯವರು ಆಸ್ಪತ್ರೆಗೆ ದಾಖಲಾಗಿದ್ದು, ಕೋವಿಡ್-19 ಪರೀಕ್ಷೆಗೂ ಒಳಗಾಗಿದ್ದಾರೆ. ವರದಿಯ ಫಲಿತಾಂಶವನ್ನು ಕಾಯುತ್ತಿದ್ದೇವೆ. ಅವರು ಶೀಘ್ರ ಗುಣಮುಖರಾಗುವಂತೆ ನೀವೂ ಪ್ರಾರ್ಥಿಸಿ ಎಂದು ಕೋರಿಕೊಳ್ಳುತ್ತಿದ್ದೇನೆ. ನಿಮ್ಮ ಶುಭ ಹಾರೈಕೆಗಳಿರಲಿ ಎಂದು ಕೇಳಿಕೊಂಡಿದ್ದಾರೆ.
Advertisement
ಜ್ವರ, ಕೆಮ್ಮು ಸಮಸ್ಯೆ ಕಂಡುಬಂದ ಹಿನ್ನಲೆಯಲ್ಲಿ 82 ವರ್ಷದ ನನ್ನ ಪೂಜ್ಯ ತಂದೆಯವರು ಆಸ್ಪತ್ರೆಗೆ ದಾಖಲಾಗಿದ್ದು, ಕೋವಿಡ್ ಪರೀಕ್ಷೆಗೂ ಒಳಗಾಗಿದ್ದಾರೆ. ವರದಿಯ ಫಲಿತಾಂಶವನ್ನು ಕಾಯುತ್ತಿದ್ದೇವೆ. ಅವರು ಶೀಘ್ರ ಗುಣಮುಖರಾಗುವಂತೆ ನೀವೂ ಪ್ರಾರ್ಥಿಸಿ ಎಂದು ಕೋರಿಕೊಳ್ಳುತ್ತಿದ್ದೇನೆ. ನಿಮ್ಮ ಶುಭ ಹಾರೈಕೆಗಳಿರಲಿ.
— Dr Sudhakar K (@mla_sudhakar) June 22, 2020
Advertisement
ಇದಕ್ಕೆ ಪ್ರತಿಕ್ರಿಯೆ ನೀಡಿರುವ ಹೊನ್ನಾಳಿ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರು, ಆದಷ್ಟು ಬೇಗ ಚೇತರಿಸಿಕೊಳ್ಳಲೆಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ. ಕೆ.ಸುಧಾಕರ್ ಅಭಿಮಾನಿಗಳು ಪ್ರತಿಕ್ರಿಯೆ ನೀಡಿ, ಆತಂಕ ಪಡಬೇಡಿ, ತಂದೆಯವರಿಗೆ ಏನು ಆಗುವುದಿಲ್ಲ ಅಣ್ಣಾ. ಅವರು ಆರೋಗ್ಯವಾಗಿ ಆಸ್ಪತ್ರೆಯಿಂದ ಗುಣಮುಖರಾಗಿ ಬರಲೆಂದು ದೇವರ ಬಳಿ ನಾವೆಲ್ಲ ಪ್ರಾರ್ಥಿಸುತ್ತೇವೆ ಎಂದು ಹೇಳಿದ್ದಾರೆ.
Advertisement
ಆದಷ್ಟು ಬೇಗ ಚೇತರಿಸಿಕೊಳ್ಳಲೆಂದು ಪ್ರಾಥಿ೯ಸುತ್ತೇನೆ.
— M P Renukacharya (@MPRBJP) June 22, 2020