ದಾವಣಗೆರೆ: ನಾನು ಯಾವುದೇ ಕಾರಣಕ್ಕೂ ಸಚಿವ ಸ್ಥಾನಕ್ಕಾಗಿ ಲಾಬಿ ಮಾಡಿಲ್ಲ, ಸಚಿವ ಸ್ಥಾನ ಲಾಬಿಗಾಗಿ ದೆಹಲಿಗೆ ತೆರಳುವ ಬದಲಿಗೆ ಹಳ್ಳಿ ಕಡೆ ಮುಖ ಮಾಡಿದ್ದೇನೆ ಎಂದು ಶಾಸಕ ಎಂ.ಪಿ.ರೇಣುಕಾಚಾರ್ಯ ತಿಳಿಸಿದರು.
Advertisement
ಜಿಲ್ಲೆಯ ಹೊನ್ನಾಳಿ ತಾಲೂಕಿನ ಹತ್ತೂರು ಗ್ರಾಮದಲ್ಲಿ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಬಳಿಕ ಮಾತನಾಡಿದ ಅವರು, ಜಿಲ್ಲೆಯ ಐದು ಜನ ಶಾಸಕರ ಪೈಕಿ ಒಬ್ಬರಿಗೆ ಸಚಿವ ಸ್ಥಾನ ನೀಡುವಂತೆ ವರಿಷ್ಠರಿಗೆ ಮನವಿ ಮಾಡಿದ್ದೇವೆ. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹಾಗೂ ನೂತನ ಸಿಎಂ ಬಸವರಾಜ್ ಬೊಮ್ಮಾಯಿಯವರ ಗಮನಕ್ಕೆ ತರಲಾಗಿದೆ. ಆದರೆ ಯಡಿಯೂರಪ್ಪನವರನ್ನು ಮಾಜಿ ಸಿಎಂ ಎಂದು ಕರೆಯಲ್ಲ ಎಂದು ತಿಳಿಸಿದರು.
Advertisement
Advertisement
ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ಸ್ವ ಕ್ಷೇತ್ರದಲ್ಲಿ ಅತಿವೃಷ್ಟಿ ಪೀಡಿತ ಪ್ರದೇಶಗಳ ಪ್ರವಾಸದಲ್ಲಿ ಬ್ಯೂಸಿಯಾಗಿದ್ದಾರೆ. ರೇಣುಕಾಚಾರ್ಯ ಹೊನ್ನಾಳಿ-ನ್ಯಾಮತಿ ಅವಳಿ ತಾಲೂಕಿನಲ್ಲಿ ಅತಿವೃಷ್ಟಿಯಾಗಿರುವ ಪ್ರದೇಶಳಾದ ಮಾರಿಕೊಪ್ಪ, ಹತ್ತೂತು, ದೊಡ್ಡೇರಹಳ್ಳಿ, ಮಾದೇನಹಳ್ಳಿ ಸೇರಿದಂತೆ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಸರ್ಕಾರ ನಿಮ್ಮೊಂದಿಗೆ ಇದೆ ಎಂದು ಜನರಿಗೆ ಭರವಸೆ ನೀಡಿದರು.
Advertisement
ಕ್ಷೇತ್ರ ಸುತ್ತುತ್ತಿರುವ ರೇಣುಕಚಾರ್ಯ ಅವರು, ಅಧಿಕಾರಿಗಳೊಂದಿಗೆ ಹಳ್ಳಿಗಳನ್ನು ಸುತ್ತಿ ಜಂಟಿ ಸಮೀಕ್ಷೆ ನಡೆಸಿ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಅತಿವೃಷ್ಠಿ ಬಗ್ಗೆ ನಾಳೆ ಅಧಿಕಾರಗಳೊಂದಿಗೆ ಸಭೆ ನಡೆಸಲಿದ್ದು, ವರದಿ ಪಡೆದು ಮುಖ್ಯಮಂತ್ರಿಯನ್ನು ಭೇಟಿ ಮಾಡಿ, ಅತಿವೃಷ್ಟಿ ಪೀಡಿತ ತಾಲೂಕು ಎಂದು ಘೋಷಣೆ ಮಾಡುವಂತೆ ಮನವಿ ಮಾಡಲಾಗುವುದು ಎಂದರು.