ಕೊಪ್ಪಳ: ರಾಜ್ಯದಲ್ಲಿ ಬಸವರಾಜ್ ಬೊಮ್ಮಾಯಿ ಸರ್ಕಾರದ ಸಚಿವ ಸಂಪುಟ ವಿಸ್ತರಣೆಯಾಗಿದೆ. ಈ ಸಂದರ್ಭದಲ್ಲಿ ಹಲವು ಬಿಜೆಪಿ ಶಾಸಕರು ಸಚಿವಾಕಾಂಕ್ಷಿಯಾಗಿದ್ದರು. ಇದರಲ್ಲಿ ಕೆಲವರಿಗೆ ಅಸಮಾಧಾನ ಉಂಟಾಗಿದೆ. ಈ ಮಧ್ಯೆ ಕೊಪ್ಪಳ ಜಿಲ್ಲೆಯಲ್ಲಿ ಮೂರು ಜನ ಶಾಸಕರು ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದರು. ಅದರಲ್ಲಿ ಗಂಗಾವತಿ ಶಾಸಕ ಪರಣ್ಣ ಮುನವಳ್ಳಿ ಪ್ರಬಲ ಆಕಾಂಕ್ಷಿಯಾಗಿದ್ದರು. ಆದರೆ ಬಿಜೆಪಿ ಹೈಕಮಾಂಡ್, ಸಿಎಂ ಜಿಲ್ಲೆಯಿಂದ ಹಾಲಪ್ಪ ಆಚಾರರನ್ನು ಸಚಿವರನ್ನಾಗಿ ಮಾಡಿದ್ದಾರೆ. ಈ ನಿರ್ಧಾರವನ್ನು ಪರಣ್ಣ ಮುನವಳ್ಳಿ ಸ್ವಾಗತಿಸಿದ್ದಾರೆ.
Advertisement
ಇಂದು ಗಂಗಾವತಿಯಲ್ಲಿ ಮಾತನಾಡಿದ ಪರಣ್ಣ ಮುನವಳ್ಳಿ, ನಾನು ಸಚಿವ ಆಕಾಂಕ್ಷಿಯಾಗಿದ್ದೆ ಆದರೆ ಹೈಕಮಾಂಡ್, ಸಿಎಂ ತೆಗೆದುಕೊಂಡ ನಿರ್ಧಾರಕ್ಕೆ ಸ್ವಾಗತಿಸುತ್ತೇನೆ. ಎಂ ತೆಗೆದುಕೊಂಡ ನಿರ್ಧಾರಕ್ಕೆ ಬದ್ಧ, ಈ ಮಧ್ಯೆ ಕೊಪ್ಪಳ ಜಿಲ್ಲೆಗೆ ಸಚಿವ ಸ್ಥಾನ ನೀಡಿದ್ದು ಸ್ವಾಗತ ಎಂದರು.
Advertisement
Advertisement
ನಾನು ಎರಡು ಬಾರಿ ಶಾಸಕನಾಗಿ ಆಯ್ಕೆಯಾಗಿದ್ದೇನೆ. ಸಹಜವಾಗಿ ಸಚಿವ ಸ್ಥಾನ ಕೇಳಿದ್ದು ಸತ್ಯ, ಈಗ ಸಚಿವ ಸ್ಥಾನ ನೀಡದೆ ಇರುವುದಕ್ಕೆ 2-3 ದಿನ ಅಸಮಾಧಾನವಾಗುವುದು ಸಹಜ. ಹಾಗಂತ ಯಾವುದೇ ಪಕ್ಷದ ವಿರೋಧ ಚಟುವಟಿಕೆ ಮಾಡುವುದಿಲ್ಲ. ರಾಜ್ಯದಲ್ಲಿ ಇನ್ನೂ 3-4 ಸಚಿವ ಸ್ಥಾನ ಖಾಲಿ ಇವೆ. ಅವುಗಳಲ್ಲಿ ಕೇಳುವ ಬಗ್ಗೆ ವಿಚಾರ ಮಾಡಿಲ್ಲ. ಸಚಿವ ಸ್ಥಾನ ಸಿಗದಿದ್ದರೂ ಕ್ಷೇತ್ರದ ಜನರು, ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದು ಪರಣ್ಣ ಮುನವಳ್ಳಿ ಹೇಳಿದ್ದಾರೆ.