ಬೆಂಗಳೂರು: ಕೊರೊನಾ ವೈರಸ್ ಭೀತಿಯಿಂದ ಬಂದ್ ಮಾಡಲಾಗಿದ್ದ ಪದವಿ ಕಾಲೇಜು ಆರಂಭಕ್ಕೆ ದಿನಾಂಕ ಫಿಕ್ಸ್ ಮಾಡಲಾಗಿದೆ. ಆದರೆ ಪಿಯು ಕಾಲೇಜು ಸದ್ಯಕ್ಕೆ ಆರಂಭ ಇಲ್ಲ ಎಂದು ಹೇಳಲಾಗುತ್ತಿದೆ.
ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಸಿಎಂ ನೇತೃತ್ವದಲ್ಲಿ ಸಭೆ ನಡೆದಿದ್ದು, ಈ ಸಭೆಯಲ್ಲಿ ನವೆಂಬರ್ 17ರಿಂದ ಎಲ್ಲಾ ಪದವಿ ಕಾಲೇಜುಗಳನ್ನು ಆರಂಭ ಮಾಡುವಂತೆ ತೀರ್ಮಾನಿಸಲಾಯಿತು. ಆದರೆ ಸಭೆಯಲ್ಲಿ ಪಿಯು ಕಾಲೇಜು ಆರಂಭದ ಬಗ್ಗೆ ಚರ್ಚೆಯಾಗಿಲ್ಲ.
????
ನವೆಂಬರ್ 17 ರಂದು ಕಾಲೇಜುಗಳ ಆರಂಭಕ್ಕೆ ನಿರ್ಧರಿಸಲಾಗಿದೆ.
ಮಾನ್ಯ ಮುಖ್ಯಮಂತ್ರಿ @BSYBJP ಅವರ ನೇತೃತ್ವದಲ್ಲಿ ಕಾಲೇಜು ಆರಂಭದ ಬಗ್ಗೆ ನಡೆದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಪದವಿ, ಇಂಜಿನಿಯರಿಂಗ್, ಸ್ನಾತಕೋತ್ತರ ಹಾಗೂ ಡಿಪ್ಲೋಮ ಕಾಲೇಜುಗಳ ಪುನರಾರಂಭ ಕುರಿತು ಎಲ್ಲ ಇಲಾಖೆಗಳ ಜತೆ ಚರ್ಚಿಸಲಾಗಿದೆ.@CMofKarnataka
1/3 pic.twitter.com/70lJIMVy6G
— Dr. Ashwathnarayan C. N. (@drashwathcn) October 23, 2020
ಪೋಷಕರ ಅನುಮತಿ ಕಡ್ಡಾಯ, ಯಾರಿಗೂ ಒತ್ತಡ ಮಾಡುವ ಹಾಗಿಲ್ಲ. ಆನ್ ಲೈನ್ ಹಾಗೂ ಆಫ್ ಲೈನ್ ಎರಡಲ್ಲೂ ತರಗತಿ ನಡೆಯುತ್ತದೆ. ದೀಪಾವಳಿ ನಂತರ ಕಾಲೇಜು ಪ್ರಾರಂಭ ಅಂತ ಪಬ್ಲಿಕ್ ಟಿವಿ ಮೊದಲೇ ವರದಿ ಮಾಡಿತ್ತು. ಈ ವರದಿ ನಿಜವಾಗಿದ್ದು, ದೀಪಾವಳಿ ಬಳಿಕ ರಾಜ್ಯದಲ್ಲಿ ಪದವಿ ಕಾಲೇಜು ಪ್ರಾರಂಭಕ್ಕೆ ಸಿಎಂ ಗ್ರೀನ್ ಸಿಗ್ನಲ್ ನೀಡಿದ್ದಾರೆ.
ತರಗತಿಗಳಿಗೆ ಹಾಜರಾಗಲು ವಿದ್ಯಾರ್ಥಿಗಳಿಗೆ ಆಯ್ಕೆ ಇರಲಿದ್ದು, ಆನ್ಲೈನ್ ಹಾಗೂ ಕ್ಲಾಸ್ ರೂಂ ತರಗತಿಗಳು ಸಂಯೋಜಿತವಾಗಿ ಇರಲಿವೆ. ಕ್ಲಾಸ್ ರೂಂಗೆ ಬರಬೇಕಾದರೆ ಪೋಷಕರಿಂದ ಪರವಾನಗಿ ಪತ್ರ ತರಬೇಕು. ಪ್ರಾಕ್ಟಿಕಲ್ ತರಗತಿಗಳ ಆರಂಭಕ್ಕೆ ಮೊದಲ ಆದ್ಯತೆ ನೀಡಲಾಗುವುದು.
2/3
— Dr. Ashwathnarayan C. N. (@drashwathcn) October 23, 2020
ಮಾರ್ಗಸೂಚಿ ಪಾಲನೆಯನ್ನು ಕಾಲೇಜು ಶಿಕ್ಷಣ ಇಲಾಖೆಗೆ ಹೆಗಲಿಗೆ ಹಾಕಲಾಗಿದೆ. ಮಾರ್ಗಸೂಚಿ ಪಾಲನೆಗೆ ಅಗತ್ಯ ಕ್ರಮವಹಿಸಿ ಎಂದು ಸಿಎಂ ಸೂಚನೆ ನೀಡಿದ್ದಾರೆ. ನವೆಂಬರ್ 17 ರಿಂದ ಎಂಜಿನಿಯರಿಂಗ್, ಡಿಪ್ಲೊಮಾ, ಪದವಿ ಕಾಲೇಜು ಪ್ರಾರಂಭ ಮಾಡುವುದಾಗಿ ಸಭೆಯಲ್ಲಿ ತೀರ್ಮಾನಿಸಲಾಯಿತು. ಕಾಲೇಜಿಗೆ ಬರೋರು ರಿಜಿಸ್ಟರ್ ಮಾಡಿಕೊಳ್ಳಬೇಕು. ಅಲ್ಲದೆ ಪೋಷಕರ ಒಪ್ಪಿಗೆ ಕಡ್ಡಾಯವಾಗಿದೆ. ಕಾಲೇಜು ಬರೋರಿಗೆ ಇಲಾಖೆ ವ್ಯವಸ್ಥೆ ಮಾಡುತ್ತೆ. ಹಾಸ್ಟೆಲ್ ವಿದ್ಯಾರ್ಥಿಗಳಿಗೂ ಅಗತ್ಯ ಮುಂಜಾಗ್ರತಾ ಕ್ರಮದ ವ್ಯವಸ್ಥೆ ಮಾಡುವುದಾಗಿ ನಿರ್ಧರಿಸಲಾಯಿತು.
UGC ಯ #COVID19 ಮಾರ್ಗಸೂಚಿಯ ಅನುಗುಣವಾಗಿ ಎಲ್ಲಾ ಸುರಕ್ಷಾ ಕ್ರಮಗಳನ್ನು ಅನುಸರಿಸಲಾಗುವುದು. ಎಲ್ಲಾ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಟಾಸ್ಕ್ ಫೋರ್ಸ್ ಹಾಗೂ ಪ್ರತಿ ಕಾಲೇಜಿನಲ್ಲಿ ಇದಕ್ಕಾಗಿ ಟಾಸ್ಕ್ ಫೋರ್ಸ್ ರಚಿಸಲಾಗುವುದು.
3/3
— Dr. Ashwathnarayan C. N. (@drashwathcn) October 23, 2020
ಪ್ರಾಕ್ಟಿಕಲ್ ಕ್ಲಾಸ್‍ಗೆ ಮೊದಲ ಆದ್ಯತೆ ನೀಡಲಾಗುತ್ತಿದ್ದು, ಯುಜಿಸಿ ನಿಯಮದ ಪ್ರಕಾರ ಕಾಲೇಜು ಪ್ರಾರಂಭ ಮಾಡಲಾಗುತ್ತದೆ. ವಿದ್ಯಾರ್ಥಿಗಳ ಒತ್ತಾಸೆ ಮೇರೆಗೆ ಕಾಲೇಜು ಪ್ರಾರಂಭ ಮಾಡುವ ನಿರ್ಧಾರ ಸಭೆಯಲ್ಲಿ ಮಾಡಲಾಯಿತು. ಪ್ರತಿ ಕಾಲೇಜಿನಲ್ಲಿ ಟಾಸ್ಕ್ ಫೋರ್ಸ್ ಇರುತ್ತೆ. ಅಲ್ಲದೆ ಪ್ರತಿ ಜಿಲ್ಲೆಗೆ ಡಿಸಿ ನೇತೃತ್ವದಲ್ಲಿ ಸಮಿತಿ ರಚಿಸಲಾಗುತ್ತದೆ. ಯಾರಿಗೂ ಒತ್ತಾಯ ಮಾಡಲ್ಲ. ಪೋಷಕರ ಅನುಮತಿ ಪತ್ರ ಕಡ್ಡಾಯ ಇರಬೇಕು ಎಂದು ಚರ್ಚಿಸಲಾಯಿತು.