ಬೆಂಗಳೂರು: ಎಲ್‌ಕೆಜಿಯಿಂದ 10ನೇ ತರಗತಿಯವರೆಗಿನ ಆನ್‌ಲೈನ್ ಶಿಕ್ಷಣ ರದ್ದುಗೊಳಿಸಿದ ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ.
ನ್ಯಾ. ಓಕಾ ನೇತೃತ್ವದ ದ್ವಿಸದಸ್ಯ ಪೀಠ ನಿಮ್ಹಾನ್ಸ್ ವೈದ್ಯರ ವರದಿ ಆಧಾರಿಸಿ ಸರ್ಕಾರ ಈ ನಿರ್ಧಾರ ಕೈಗೊಳ್ಳುವುದು ಸರಿಯಲ್ಲ ಎಂದು ಅಭಿಪ್ರಾಯಟ್ಟಿದೆ. ಜೂನ್ 15 ಮತ್ತು 27 ರಂದು ಆನ್‌ಲೈನ್ ಶಿಕ್ಷಣವನ್ನು ನಿಷೇಧಿಸಿ ಹೊರಡಿಸಿದ್ದ ಆದೇಶ ಮಕ್ಕಳ ಮೂಲಭೂತ ಹಕ್ಕಿನ ಉಲ್ಲಂಘನೆ ಎಂದು ಅಭಿಪ್ರಾಯಪಟ್ಟಿದೆ.
Advertisement
Advertisement
ಈಗಾಗಲೇ ಶೈಕ್ಷಣಿಕ ವರ್ಷ ಆರಂಭಗೊಂಡಿದೆ. ಕೋವಿಡ್ 19 ಸಮಯದಲ್ಲಿ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಬಾರದು. ಸರ್ಕಾರ ಗ್ರಾಮೀಣ ಭಾಗಕ್ಕೂ ಮೂಲಭೂತ ಸೌಕರ್ಯ ಒದಗಿಸಬೇಕು. ಸದ್ಯ ಪರಿಸ್ಥಿತಿಯಲ್ಲಿ ಆನ್‌ಲೈನ್ ಶಿಕ್ಷಣದ ಅಗತ್ಯವಿದೆ. ಈ ಸಂದರ್ಭದಲ್ಲಿ ಆನ್‌ಲೈನ್ ಮೂಲಕ ಕೋಚಿಂಗ್/ ತರಬೇತಿ ನೀಡಬಹುದು ಎಂದು ಮಧ್ಯಂತರ ಆದೇಶ ಪ್ರಕಟಿಸಿದೆ.
Advertisement
ರಾಜ್ಯ ಸರ್ಕಾರದ ಆದೇಶಕ್ಕೆ ಮಧ್ಯಂತರ ತಡೆ ನೀಡಿರುವ ಕೋರ್ಟ್ ನಾಲ್ಕು ವಾರಗಳಲ್ಲಿ ಆಕ್ಷೇಪಣೆ ಸಲ್ಲಿಸುವಂತೆ ಸರ್ಕಾರಕ್ಕೆ ಸೂಚಿಸಿದೆ.
Advertisement
ಒಂದರಿಂದ ಐದನೇ ತರಗತಿವರೆಗೆ ಆನ್‍ಲೈನ್ ಶಿಕ್ಷಣವನ್ನು ಸರ್ಕಾರ ರದ್ದು ಪಡಿಸಿದ್ದನ್ನು ಪ್ರಶ್ನಿಸಿ ಪ್ರಶ್ನಿಸಿ ಹೈಕೋರ್ಟ್‍ನಲ್ಲಿ ಕೆಲ ಶಾಲಾ ಆಡಳಿತ ಮಂಡಳಿಗಳು ಅರ್ಜಿ ಸಲ್ಲಿಸಿತ್ತು. ಜೂನ್ 26 ರಂದು ನಡೆದ ಅರ್ಜಿಯ ವಿಚಾರಣೆಯ ವೇಳೆ ,ಮಕ್ಕಳು ಆನ್‍ಲೈನ್‍ನಲ್ಲಿ ಶಿಕ್ಷಣ ಪಡೆಯಲು ಇಚ್ಛಿಸಿದರೆ ಯಾಕೆ ತಡೆಯುತ್ತೀರಿ ಎಂದು ಸರ್ಕಾರದ ಪರ ವಕೀಲರಿಗೆ ಹೈಕೋರ್ಟ್ ಪ್ರಶ್ನಿಸಿತ್ತು.
ಕೊರೊನಾ ಕಾರಣದಿಂದ ಶಾಲಾ, ಕಾಲೇಜುಗಳು ಬಂದ್ ಆಗಿದ್ದು, ಕೆಲ ಖಾಸಗಿ ಶಿಕ್ಷಣ ಸಂಸ್ಥೆಗಳು ಆನ್‍ಲೈನ್ ಮೂಲಕ ವಿದ್ಯಾರ್ಥಿಗಳಿಗೆ ಪಾಠ ಮಾಡಲು ಆರಂಭಿಸಿದ್ದವು. ಆದರೆ ಖಾಸಗಿ ಶಾಲೆಗಳ ಕ್ರಮಕ್ಕೆ ಬ್ರೇಕ್ ಹಾಕಿದ್ದ ರಾಜ್ಯ ಸರ್ಕಾರ ಆನ್‍ಲೈನ್ ಶಿಕ್ಷಣ ನಡೆಸದಂತೆ ಸೂಚನೆ ನೀಡಿ ಆದೇಶ ಜಾರಿ ಮಾಡಿತ್ತು. ಸರ್ಕಾರದ ಕ್ರಮ ಪ್ರಶ್ನಿಸಿದ ಕೆಲ ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳು ಹೈಕೋರ್ಟ್‍ನಲ್ಲಿ ಅರ್ಜಿ ಸಲ್ಲಿಸಿತ್ತು.