ಬಳ್ಳಾರಿ: ಜಿಲ್ಲೆಯಲ್ಲಿ ದಿನೇ ದಿನೇ ಸೋಂಕು ಹೆಚ್ಚಾಗುತ್ತಿದೆ. ಅದರಲ್ಲೂ ಕೊರೊನಾ ವಾರಿಯರ್ಸ್ ಪೊಲೀಸ್ ಸಿಬ್ಬಂದಿಯಲ್ಲಿ ಸೋಂಕು ವ್ಯಾಪಿಸುತ್ತಿದೆ. ಕೆಲವು ಕಡೆ ಇಡೀ ಠಾಣೆ ಸೀಲ್‍ಡೌನ್ ಮಾಡಬೇಕಾದ ಸ್ಥಿತಿ ಎದುರಾಗಿದೆ.
ಇನ್ಮುಂದೆ ಜಿಲ್ಲೆಯ ಪೊಲೀಸ್ ಸಿಬ್ಬಂದಿ ಯಾವುದೇ ರೀತಿಯ ಕಾರ್ಯಕ್ರಮ ಪಾರ್ಟಿಗಳಿಗೆ ಹಾಜರಾಗುವಂತಿಲ್ಲ. ಮದುವೆ, ನಾಮಕರಣ ಸೇರಿದಂತೆ ಯಾವುದೇ ಪಾರ್ಟಿಗಳಿಗೆ ಭಾಗಿಯಾಗುವಂತಿಲ್ಲ ಎಂದು ಬಳ್ಳಾರಿ ಎಸ್‍ಪಿ ಸಿ.ಕೆ.ಬಾಬಾ ಆದೇಶವೊಂದನ್ನು ಹೊರಡಿಸಿದ್ದಾರೆ. ಒಂದು ವೇಳೆ ಭಾಗಿಯಾಗುವಂತಿದ್ದರೆ ಎಸ್.ಪಿ ಕಚೇರಿಯಿಂದ ಪೂರ್ವಾನುಮತಿಯನ್ನು ಕಡ್ಡಾಯವಾಗಿ ಪಡೆಯಬೇಕಾಗುತ್ತದೆ.
Advertisement
Advertisement
ಕಂಪ್ಲಿಯ ಎಸ್‍ಐ ಒಬ್ಬರು ಮಾಡಿದ ಪಾರ್ಟಿಯಲ್ಲಿ ಭಾಗಿಯಾಗಿದ್ದ ಪೊಲೀಸ್ ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ಬಂದಿತ್ತು. ಹೀಗಾಗಿ ಇಡೀ ಠಾಣೆಯನ್ನೇ ಸೀಲ್ ಮಾಡಲಾಗಿತ್ತು. ಇನ್ಮುಂದೆ ಇಂತಹ ಯಾವುದೇ ರೀತಿಯ ಪಾರ್ಟಿ, ಕಾರ್ಯಕ್ರಮ ಆಯೋಜಿಸುವುದನ್ನ ನಿರ್ಬಂಧಿಸಿ ಪೊಲೀಸ್ ವರಿಷ್ಠಾಧಿಕಾರಿ ಆದೇಶ ಮಾಡಿದ್ದಾರೆ.
Advertisement
ಜಿಲ್ಲೆಯ ಕಂಪ್ಲಿ ಪಟ್ಟಣದ ಪೊಲೀಸ್ ಠಾಣೆಯ 51 ವರ್ಷದ ಸಿಪಿಐಗೆ ಕೊರೊನಾ ಸೋಂಕಿರುವುದು ದೃಢಪಟ್ಟಿದೆ. ಸೋಂಕಿತ ಸಿಪಿಐ ಅವರನ್ನು ಕೋವಿಡ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
Advertisement
ಕಳೆದ ಒಂದು ವಾರದ ಹಿಂದೆ ಕಂಪ್ಲಿ ಪೊಲೀಸ್ ಠಾಣೆ ಪಿಎಸ್‍ಐ ಅವರಿಗೆ ಗಂಡು ಮಗು ಜನಿಸಿತ್ತು. ಹೀಗಾಗಿ ನಗರದ ಹೊರ ವಲಯದ ಸಮುದಾಯ ಭವನದಲ್ಲಿ ಭರ್ಜರಿ ಪಾರ್ಟಿ ಕೊಟ್ಟಿದ್ದರು. ಅದೇ ಪಾರ್ಟಿಯಲ್ಲಿ ಭಾಗಿಯಾಗಿದ್ದ ಕಂಪ್ಲಿ ಪೊಲೀಸ್ ಠಾಣೆಯ ಪೇದೆಗೆ ಕೊರೊನಾ ಪಾಸಿಟಿವ್ ಬಂದಿತ್ತು. ಕಾರಣ ಸಂಪೂರ್ಣ ಪೊಲೀಸ್ ಠಾಣೆಯನ್ನು ಸೀಲ್ ಡೌನ್ ಮಾಡಲಾಗಿದೆ.