ಉಡುಪಿ: ಮೂರು ತಿಂಗಳಿಂದ ಸಂಬಳ ಕೊಡದ್ದಕ್ಕೆ ವೈದ್ಯರು, ನರ್ಸ್ ಸೇರಿದಂತೆ ಎಲ್ಲಾ 250 ಸಿಬ್ಬಂದಿ ಪ್ರತಿಭಟನೆ ಮಾಡಿದ ಘಟನೆ ಉಡುಪಿ ಬಿ.ಆರ್‍ಎಸ್ ಶೆಟ್ಟಿ ಸರಕಾರಿ ಆಸ್ಪತ್ರೆಯಲ್ಲಿ ನಡೆದಿದೆ. ಇದನ್ನೂ ಓದಿ: ಕೈಗಾರಿಕೆಗಳು, ಆಸ್ಪತ್ರೆಗಳಿಗೆ ಆಮ್ಲಜನಕ ಸರಬರಾಜು ಮೇಲುಸ್ತುವಾರಿಗೆ ಜಿಲ್ಲೆಗಳಲ್ಲಿ ನೋಡಲ್ ಅಧಿಕಾರಿ: ಶೆಟ್ಟರ್
ಉಡುಪಿ ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ( ತಾಯಿ ಹಾಗೂ ಮಕ್ಕಳ ಆಸ್ಪತ್ರೆಯ ವೈದ್ಯರು) ನರ್ಸ್ ಸೇರಿದಂತೆ ಸಿಬ್ಬಂದಿ ಬಾಕಿ ವೇತನ ಪಾವತಿಸುವಂತೆ ಆಗ್ರಹಿಸಿ ಮುಷ್ಕರ ಆರಂಭಿಸಿದ್ದಾರೆ. ಆಸ್ಪತ್ರೆಗೆ ಬಂದು ಕರ್ತವ್ಯಕ್ಕೆ ಹಾಜರಾಗದೆ ಮುಷ್ಕರ ನಡೆಸುತ್ತಿದ್ದರು. ಮೂರು ತಿಂಗಳಿನಿಂದ ವೇತನ ನೀಡಿಲ್ಲ. ಇದರಿಂದ ನಮಗೆ ಬಹಳ ಸಮಸ್ಯೆ ಆಗಿದೆ. ಒಂದು ಹೊತ್ತಿನ ಊಟಕ್ಕೂ ಪರದಾಡುವ ಸ್ಥಿತಿ ಬಂದಿದೆ ಎಂದು ಸಿಬ್ಬಂದಿ ಸಮಸ್ಯೆ ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ವೀಡಿಯೋ- ತನ್ನದೇ ನೆರಳು ನೋಡಿ ಹಾಯ್ ಅನ್ನುತ್ತಾ ಖುಪಿ ಪಟ್ಟಿದ್ದ ಐರಾ..!
ಆಡಳಿತ ಮಂಡಳಿಗೆ ಸಾಕಷ್ಟು ಬಾರಿ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಕೊರೊನಾ ಸಮಯ ಅಂತ ಮೂರು ತಿಂಗಳು ಸಂಬಳ ಇಲ್ಲದೆ ಕೆಲಸ ಮಾಡಿದ್ದೇವೆ. ನಾವು ಮನೆ ಸಂಸಾರ ಇರುವವರು ನಮಗೂ ಕಷ್ಟ ಇದೆ ಎಂದು ಹೆಸರು ಹೇಳಲು ಆಸ್ಪತ್ರೆ ಸಿಬ್ಬಂದಿ ಹೇಳಿದ್ದಾರೆ. ಇದನ್ನೂ ಓದಿ: ಡಿಸಿ ಮನೆ ಕರೆಂಟ್ ಬಿಲ್ ತಿಂಗಳಿಗೆ 50 ಸಾವಿರ ರೂ.: ಸಾರಾ ಮಹೇಶ್ ಆರೋಪ
ಕಳೆದ ಅಕ್ಟೋಬರ್ ನಿಂದ ಪಿಎಫ್ ಹಣವನ್ನೂ ಕೂಡ ತಡೆಹಿಡಿದಿದ್ದಾರೆ. ಬಾಕಿ ವೇತನವನ್ನು ಪಾವತಿಸುವ ಬಗ್ಗೆ ಯಾವ ಮಾಹಿತಿಯನ್ನು ನೀಡುತ್ತಿಲ್ಲ. ವೈದ್ಯರು, ಸಿಬ್ಬಂದಿ ಮುಷ್ಕರದಿಂದ ರೋಗಿಗಳು ಪರದಾಡುವ ಸ್ಥಿತಿ ನಿರ್ಮಾಣ ಆಗಿದೆ. ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಗದೆ ಗರ್ಭಿಣಿಯರು, ರೋಗಿಗಳು ತೊಂದರೆಗೊಳಗಾಗಿದ್ದಾರೆ.
ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಯ ಸರ್ಜನ್ ಡಾಕ್ಟರ್ ಮಧುಸೂದನ್ ನಾಯ್, ಜಿಲ್ಲಾ ಕಾರ್ಮಿಕ ಇಲಾಖೆಯ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ಕೊಟ್ಟು ಸಿಬ್ಬಂದಿ ಜೊತೆ ಸಭೆ ನಡೆಸುತ್ತಿದ್ದಾರೆ. ಉಡುಪಿ ನಗರ ಠಾಣೆಯ ಪೊಲೀಸರು ಆಗಮಿಸಿ ಸಿಬ್ಬಂದಿ ಮನವೊಲಿಸಲು ಪ್ರಯತ್ನಿಸಿದರು. ಎಮರ್ಜೆನ್ಸಿರುವ ರೋಗಿಗಳಿಗೆ ಚಿಕಿತ್ಸೆ ಕೊಡಿ ಎಂದು ಹೇಳಿ ಕಳುಹಿಸಿದ್ದಾರೆ.