ಹಾವೇರಿ: ಹಾಲಿ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಸಿ.ಎಂ.ಉದಾಸಿ ಮಂಗಳವಾರ ಅನಾರೋಗ್ಯದ ಹಿನ್ನೆಲೆಯಲ್ಲಿ ಬೆಂಗಳೂರಿನ ನಾರಾಯಣ ಹೃದಯಾಲಯ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಹಾವೇರಿ ಜಿಲ್ಲೆ ಹಾನಗಲ್ ಪಟ್ಟಣದ ವಿರಕ್ತಮಠದ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ಸಕಲ ಸಿದ್ಧತೆ ಮಾಡಲಾಗಿದೆ.
Advertisement
ಇಂದು ಮಧ್ಯಾಹ್ನ 12 ಗಂಟೆಗೆ ಉದಾಸಿ ಪಾರ್ಥೀವ ಶರೀರ ಹಾನಗಲ್ ಪಟ್ಟಣ ತಲುಪಲಿದೆ. ಮಧ್ಯಾಹ್ನ 1 ಗಂಟೆಗೆ ಗೌಳಿ ಗಲ್ಲಿಯ ನಿವಾಸದಲ್ಲಿ ಪಾರ್ಥಿವ ಶರೀರಕ್ಕೆ ಕುಟುಂಬಸ್ಥರು ಪೂಜೆ ಸಲ್ಲಿಸಲಿದ್ದಾರೆ. 1 ಗಂಟೆಯ ನಂತರ ವಿರಕ್ತಮಠದ ಆವರಣದಲ್ಲಿ ಪಾರ್ಥಿವ ಶರೀರ ಅಂತೀಮ ದರ್ಶನಕ್ಕೆ ಸಾರ್ವಜನಿಕರಿಗೆ ವ್ಯವಸ್ಥೆ ಮಾಡಲಾಗಿದೆ. ಇದನ್ನೂ ಓದಿ: ಬುಧವಾರ ಮಾಜಿ ಸಚಿವ ಸಿ.ಎಂ.ಉದಾಸಿ ಅಂತ್ಯ ಸಂಸ್ಕಾರ – ಪತ್ನಿ ನೀಲಮ್ಮ ಕಣ್ಣೀರು
Advertisement
Advertisement
ಕೋವಿಡ್ ಕಾರಣದಿಂದ ಅಂತರ ಕಾಯ್ದುಕೊಂಡು ದರ್ಶನ ಪಡೆಯಲು ಬ್ಯಾರಿಕೇಡ್‍ಗಳನ್ನ ಹಾಕಿ ಪೊಲೀಸ್ ಸಿಬ್ಬಂದಿ ವ್ಯವಸ್ಥೆ ಮಾಡಿದ್ದಾರೆ. ಸಾರ್ವಜನಿಕ ದರ್ಶನದ ನಂತರ ಸಂಜೆ 4 ಗಂಟೆಗೆ ವಿರಕ್ತಮಠದ ರುದ್ರಭೂಮಿಯಲ್ಲಿ ಲಿಂಗಾಯತ ವಿಧಿ ವಿಧಾನದಂತೆ ಅಂತ್ಯಕ್ರಿಯೆ ನಡೆಯಲಿದೆ. ಅಂತ್ಯಕ್ರಿಯೆಯಲ್ಲಿ ಸಚಿವ ಕೆ.ಎಸ್.ಈಶ್ವರಪ್ಪ, ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಸೇರಿದಂತೆ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಇದನ್ನೂ ಓದಿ: ಗುರು ಇಲ್ಲದೇ ಬೆಳೆದ ರಾಜಕೀಯ ನಾಯಕ, ಹಾನಗಲ್ ತಾಲೂಕಿನ ಅಭಿವೃದ್ಧಿಯ ಹರಿಕಾರ
Advertisement
ಕಳೆದ ಒಂದು ತಿಂಗಳಿನಿಂದ ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಸಿ.ಎಂ.ಉದಾಸಿಯವರು ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ಮಧ್ಯಾಹ್ನ 2.45ರ ಸುಮಾರಿಗೆ ನಿಧನರಾಗಿದ್ದಾರೆ. ಪತಿ ನಿಧನದ ಸುದ್ದಿ ತಿಳಿದು ಹಾನಗಲ್ ಪಟ್ಟಣದ ಗೌಳಿ ಗಲ್ಲಿಯ ಮನೆಯಲ್ಲಿರುವ ಪತ್ನಿ ನೀಲಮ್ಮ ಕಣ್ಣೀರು ಸುರಿಸಿದ್ದಾರೆ.
ಸದ್ಯ ಉದಾಸಿ ನಿವಾಸದಲ್ಲಿ ನೀರವ ಮೌನ ಆವರಿಸಿದ್ದು, ಉದಾಸಿ ನಿವಾಸಕ್ಕೆ ಬಿಜೆಪಿ ಕಾರ್ಯಕರ್ತರು, ಸಂಬಂಧಿಕರು ಹಾಗೂ ಅಭಿಮಾನಿಗಳು ಆಗಮಿಸಿ ಪತ್ನಿ ನೀಲಮ್ಮ ಅವರಿಗೆ ಹಾಗೂ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ್ದಾರೆ.