ಧಾರವಾಡ: ಜಿಲ್ಲೆಯ ಜನತೇ ಸರ್ಕಾರದ ಕೊರೊನಾ ಮಾರ್ಗ ಸೂಚಿಗಳ ವಿಷಯದಲ್ಲಿ ಈಗಲೂ ಗೊಂದಲದಲ್ಲಿದ್ದಾರೆ. ನಗರದ ಅಂಗಡಿ ಮಾಲೀಕರು ಪ್ರತಿ ದಿನದಂತೆ ಇವತ್ತು ಅಂಗಡಿಗಳನ್ನು ತೆರೆದಿದ್ದರು. ಆದರೆ ಪೊಲೀಸರು ಬಂದು ಅಂಗಡಿಗಳನ್ನು ಬಂದ್ ಮಾಡಿಸಿದ್ದಾರೆ. ಇದನ್ನು ಕಂಡು ಸರ್ಕಾರದ ವಿರುದ್ಧ ಅಂಗಡಿ ಮಾಲೀಕರು ಆಕ್ರೋಶ ಹೊರಹಾಕಿದ್ದಾರೆ.
Advertisement
ಧಾರವಾಡ ಜಿಲ್ಲೆಯ ಪಟ್ಟಣದಲ್ಲಿ ಸರ್ಕಾರದ ಮಾರ್ಗಸೂಚಿಯಂತೆ ಅಗತ್ಯ ವಸ್ತುಗಳ ಅಂಗಡಿಗಳನ್ನು ಹೊರತು ಪಡಿಸಿ, ಬಟ್ಟೆ, ಪಾತ್ರೆ, ಮೊಬೈಲ್ ಸೇರಿ ಹಲವು ಅಂಗಡಿಗಳನ್ನು ಪೊಲೀಸರು ಬಂದ್ ಮಾಡಿಸಿದರು. ಇದಕ್ಕೆ ಆಕ್ರೋಶ ವ್ಯಕ್ತಪಡಿಸಿದ ಅಂಗಡಿ ಮಾಲೀಕರು, ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ ಚರ್ಚೆ ನಡೆಸಿದರು. ಸರ್ಕಾರದ ಮಾರ್ಗಸೂಚಿಗಳನ್ನು ಜಿಲ್ಲಾಧಿಕಾರಿ ಸರಿಯಾಗಿ ತಿಳಿಸಿದರು. ಅಗತ್ಯ ವಸ್ತುಗಳ ಅಂಗಡಿಗೆ ಮಾತ್ರ ಅವಕಾಶ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದರು.
Advertisement
Advertisement
ಆದರೆ ವ್ಯಾಪಾರಿಗಳು ಮಾತ್ರ ನಾವು ಮೊದಲೇ ಕಳೆದ ವರ್ಷದ ನಷ್ಟದಿಂದಲೇ ಹೊರಬಂದಿಲ್ಲ. ಅಂಥದ್ರಲ್ಲಿ ಏಕಾಏಕಿ ಬಂದು ಅಂಗಡಿ ಬಂದ್ ಮಾಡಿಸಿದ್ದು ಸರಿಯಲ್ಲ. ಮದುವೆಗಾಗಿ ಬಟ್ಟೆ ಖರೀದಿಗೆ ಜನ ಬರುತಿದ್ದು, ಸರ್ಕಾರದ ನಿಮಯದಂತೆ ನಾವು ನಡೆದುಕೊಳ್ಳುತ್ತೇವೆ, ಸಾಮಾಜಿಕ ಅಂತರ ಕಾಯ್ದುಕೊಂಡು ಅಂಗಡಿ ನಡೆಸುತ್ತೇವೆ ಎಂದು ಡಿಸಿಗೆ ಮನವಿ ಮಾಡಿಕೊಂಡರು.
Advertisement