ಚಿಕ್ಕಬಳ್ಳಾಪುರ: ಸರ್ಕಾರಿ ಆದೇಶಕ್ಕೂ ಮುನ್ನವೆ ಖಾಸಗಿ ಕಾಲೇಜನ್ನು ಆರಂಭಿಸಿದ್ದು, ಸಾಕಷ್ಟು ಆಕ್ರೋಶ ವ್ಯಕ್ತವಾಗುತ್ತಿದೆ.
ಜಿಲ್ಲೆಯ ಚಿಂತಾಮಣಿ ನಗರದಲ್ಲಿರುವ ನಗರದ ವಿಕ್ರಂ ಪದವಿ ಪೂರ್ವ ಕಾಲೇಜಿನಲ್ಲಿ ತರಗತಿಗಳನ್ನು ಆರಂಭಿಸುವ ಮೂಲಕ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಕಾಲೇಜು ಆರಂಭಿಸಲು ಸರ್ಕಾರ ಇನ್ನೂ ಆದೇಶ ಹೊರಡಿಸಿಲ್ಲ. ಇಂತಹ ಸಂದರ್ಭದಲ್ಲಿ ಕಾಲೇಜು ಆರಂಭಿಸಿದ್ದಕ್ಕೆ ಆಡಳಿತ ಮಂಡಳಿ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಕ್ಕಳಿಗೆ ಸೋಂಕು ತಗುಲಿದರೆ ಯಾರು ಜವಾಬ್ದಾರಿ ಎಂಬುದು ಪೋಷಕರ ಪ್ರಶ್ನೆಯಾಗಿದೆ.
Advertisement
Advertisement
ವಿದ್ಯಾರ್ಥಿಗಳು ನಮ್ಮೂರಿಗೆ ಸರಿಯಾಗಿ ಬಸ್ಸಿಲ್ಲ ಬರಲು ಆಗುವುದಿಲ್ಲ. ಶಾಲಾ ಕಾಲೇಜುಗಳು ಇನ್ನೂ ತೆರೆಯದಿರುವುದರಿಂದ ಸಮಯಕ್ಕೆ ಸರಿಯಾಗಿ ಬಸ್ ಬಿಟ್ಟಿಲ್ಲ. ಹೀಗಾಗಿ ಓಡಾಡುವುದು ಕಷ್ಟ ಎಂದರೂ ಶಿಕ್ಷಕರು ಬಿಡುತ್ತಿಲ್ಲ. ಸರ್ಕಾರಿ ರಜೆಗಳನ್ನೂ ನೀಡುತ್ತಿಲ್ಲ. ಇದರಿಂದ ತೊಂದರೆ ಅನುಭವಿಸುವಂತಾಗಿದೆ ಎಂದು ವಿದ್ಯಾರ್ಥಿಗಳು ಅಳಲು ತೋಡಿಕೊಂಡಿದ್ದಾರೆ.
Advertisement
Advertisement
ಅನಧಿಕೃತವಾಗಿ ಕಾಲೇಜು ತೆರೆದು ಶಿಕ್ಷಕರು ವಿದ್ಯಾರ್ಥಿಗಳಿಗೆ ಪಾಠ ಮಾಡುತ್ತಿದ್ದು, ಅಧಿಕಾರಿಗಳ ಕಣ್ಣು ತಪ್ಪಿಸಲು ಎರಡು ಹಾಗೂ ಮೂರನೇ ಅಂತಸ್ತಿನಲ್ಲಿ ಮಕ್ಕಳನ್ನು ಸೇರಿಸಿಕೊಂಡು ಪಾಠ ಮಾಡಲಾಗುತ್ತಿದೆ. ಇದಕ್ಕೆ ಪೋಷಕರು ಸೇರಿದಂತೆ ಸ್ವತಃ ವಿದ್ಯಾರ್ಥಿಗಳು ಅಸಮಾಧಾನ ಹೊರ ಹಾಕಿದ್ದಾರೆ. ಸರ್ಕಾರದ ಆದೇಶದ ಬಳಿಕ ಕಾಲೇಜು ಆರಂಭಿಸುವಂತೆ ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ. ಅಲ್ಲದೆ ಆಡಳಿತ ಮಂಡಳಿ ಯಾವುದೇ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ಸಹ ಕೈಗೊಂಡಿಲ್ಲ. ಇದರಿಂದಾಗಿ ವಿದ್ಯಾರ್ಥಿಗಳಿಗೆ ಭಯ ಶುರುವಾಗಿದೆ.