-ಸ್ವಯಂ ಪ್ರೇರಿತ ಲಾಕ್‍ಡೌನ್ ಒಂದೇ ಪರಿಹಾರ
ಬೆಂಗಳೂರು: ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರೋದಕ್ಕೆ ಸರ್ಕಾರದ ನಿರ್ಲಕ್ಷ್ಯವೇ ಕಾರಣ. ಹಾಗಾಗಿ ನಮ್ಮ ಜೀವವನ್ನು ನಾವೇ ಉಳಿಸಿಕೊಳ್ಳುವ ಅನಿವಾರ್ಯತೆ ಎದುರಾಗಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಕುಮಾರಸ್ವಾಮಿ ಅವರು, ಕೊರೊನಾ ಸೋಂಕಿತರಿಗೆ ಸೂಕ್ತ ಚಿಕಿತ್ಸೆ ನೀಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಈಗಿರುವ ಮೂರ್ನಾಲ್ಕು ಸಾವಿರ ರೋಗಿಗಳಿಗೆ ಚಿಕಿತ್ಸೆ ನೀಡಲು ಬೆಡ್ ಗಳಿಲ್ಲ, ವೆಂಟಿಲೇಟರ್ ಗಳ ಕೊರತೆ ಇದೆ. ಇದಕ್ಕೆ ಸ್ವಯಂ ಪ್ರೇರಿತ ಲಾಕ್ ಡೌನ್ ಒಂದೇ ಪರಿಹಾರ.
Advertisement
ಗುರುವಾರದಿಂದ ರಾಜ್ಯದಾದ್ಯಂತ SSLC ಪರೀಕ್ಷೆ ನಡೆಸಲು ಮುಂದಾಗಿರುವ ರಾಜ್ಯ ಸರ್ಕಾರ ಈ ನಿರ್ಧಾರದಿಂದ ತಕ್ಷಣವೇ ಹಿಂದೆ ಸರಿಯಬೇಕು. ಪರೀಕ್ಷೆ ನಡೆಸಲೇಬೇಕು ಎಂದಾದರೆ ಅಕ್ಟೋಬರ್ ತಿಂಗಳವರೆಗೆ ಕಾಯ್ದು ನಡೆಸಲಿ.
1/4
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) June 23, 2020
Advertisement
ಬೆಂಗಳೂರು ಸೇರಿದಂತೆ ರಾಜ್ಯದ ನಿವಾಸಿಗಳೇ, ನೀವು ಕೋವಿಡ್-19 ನಿಂದ ಪಾರಾಗಲು ಈಗ ಉಳಿದಿರುವುದು ಒಂದೇ ದಾರಿ. ಮನೆಯಲ್ಲೇ ಉಳಿದು ನೀವೇ ಸ್ವಯಂ ಘೋಷಿತ ಬಂದ್ ಆಚರಿಸಿ. ಪ್ರಾಣಕ್ಕಿಂತಲೂ ಹಣ ಮುಖ್ಯವಲ್ಲ. ಜೀವ ಇದ್ದರೆ ಹೇಗಾದರೂ ಬದುಕಬಹುದು. ನಿಮ್ಮ ಜೀವ ಜೀವನ ಈಗ ನಿಮ್ಮ ಕೈಯಲ್ಲಿದೆ.
Advertisement
ರಾಜ್ಯ ಸರ್ಕಾರ ಕೂಡ ಇದನ್ನೇ ಪರೋಕ್ಷವಾಗಿ ಹೇಳುತ್ತಿದೆ. ಕೊರೋನಾ ವೈರಸ್ ಸಮೂಹ ಪ್ರಸರಣದ ಈಗಿನ ಸ್ಥಿತಿಯಲ್ಲಿ ಮನೆಯಲ್ಲಿರುವುದೇ 'ಮನೆ ಮದ್ದು'.
ಈ ಸೋಂಕಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು ಸರ್ಕಾರ ನಿಗದಿಪಡಿಸಿರುವುದು ದಿನಕ್ಕೆ 10-15 ಸಾವಿರ ರೂ. ಈ ದರ ಬಡವರಿಗಿರಲಿ, ಮೇಲ್ಮಧ್ಯಮವರ್ಗದವರಿಗೂ ಭರಿಸಲು ಸಾಧ್ಯವಾಗದು.
3/4
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) June 24, 2020
Advertisement
ರಾಜ್ಯ ಸರ್ಕಾರ ಕೂಡ ಇದನ್ನೇ ಪರೋಕ್ಷವಾಗಿ ಹೇಳುತ್ತಿದೆ. ಕೊರೊನಾ ವೈರಸ್ ಸಮೂಹ ಪ್ರಸರಣದ ಈಗಿನ ಸ್ಥಿತಿಯಲ್ಲಿ ಮನೆಯಲ್ಲಿರುವುದೇ ‘ಮನೆ ಮದ್ದು’. ಈ ಸೋಂಕಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು ಸರ್ಕಾರ ನಿಗದಿಪಡಿಸಿರುವುದು ದಿನಕ್ಕೆ 10-15 ಸಾವಿರ ರೂ. ಈ ದರ ಬಡವರಿಗಿರಲಿ, ಮೇಲ್ಮಧ್ಯಮವರ್ಗದವರಿಗೂ ಭರಿಸಲು ಸಾಧ್ಯವಾಗದು.
ಒಂದು ಕುಟುಂಬದ ನಾಲ್ಕು ಜನರಿಗೆ ಕೊರೊನಾ ಬಂದರೆ ಖಾಸಗಿ ಆಸ್ಪತ್ರೆಯಲ್ಲಿ 15 ದಿನಗಳ ಚಿಕಿತ್ಸೆಗೆ ಸರ್ಕಾರ ನಿಗದಿಪಡಿಸಿರುವ ದರದ ಪ್ರಕಾರ 5-6 ಲಕ್ಷ ರೂ ಬೇಕು. ಬಡವರು ಮಧ್ಯಮವರ್ಗದವರು ಎಲ್ಲಿಂದ ತರುತ್ತಾರೆ? ಸರ್ಕಾರ ಕೈಚೆಲ್ಲಿ ಕುಳಿತಿರುವಾಗ ನಮ್ಮ ಜೀವ ನಾವೇ ಉಳಿಸಿಕೊಳ್ಳಬೇಕು. ದಯಮಾಡಿ ಎಚ್ಚರದಿಂದಿರಿ ಎಂದು ಮಾಜಿ ಮುಖ್ಯಮಂತ್ರಿಗಳು ರಾಜ್ಯದ ಜನತೆಯಲ್ಲಿ ಮನವಿ ಮಾಡಿಕೊಂಡಿದ್ದಾರೆ.