ಬೆಂಗಳೂರು: ಈ ಸರ್ಕಾರ ರಚನೆಯಾಗುವುದಕ್ಕೆ ನನ್ನದೂ ಅಳಿಲು ಸೇವೆ ಇದೆ ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ ಯೋಗೇಶ್ವರ್ ರವರು ಹೇಳಿದ್ದಾರೆ.
ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹೆಚ್.ಡಿ.ಕುಮಾರಸ್ವಾಮಿ ಮತ್ತು ಡಿ.ಕೆ.ಶಿವಕುಮಾರ್ ಸ್ನೇಹ ಕಿತ್ತು ಹಾಕಿ ಬಿಜೆಪಿ ಸರ್ಕಾರ ತಂದಿದ್ದೇವೆ. ಸರ್ಕಾರ ರಚನೆಯಾಗಲು ನನ್ನದೂ ಅಳಿಲು ಸೇವೆ ಇದೆ. ನಮ್ಮ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಇನ್ನು ಎರಡು ವರ್ಷ ಮುಂದುವರಿಯಬೇಕು ಎಂಬುದು ನನ್ನ ಇಚ್ಛೆ. ನನ್ನ ನೋವನ್ನು ಎಲ್ಲಿ ಹೇಳಿಕೊಳ್ಳಬೇಕೋ ಅಲ್ಲಿ ಹೇಳಿಕೊಂಡಿದ್ದೇನೆ. ಸಣ್ಣಪುಟ್ಟ ಭಿನ್ನಾಭಿಪ್ರಾಯಗಳನ್ನು ಬಗೆ ಹರಿಸಿಕೊಳ್ಳುತ್ತೇವೆ ಎಂದರು. ಇದನ್ನು ಓದಿ: ನಮ್ಮಲ್ಲಿ ಯಾವುದೇ ಸಹಿ ಸಂಗ್ರಹ ಅಭಿಯಾನ ನಡೆಯುತ್ತಿಲ್ಲ: ಕೇಂದ್ರ ಸಚಿವ ಜೋಶಿ
Advertisement
Advertisement
ಆರ್.ಅಶೋಕ್ ಬಗ್ಗೆ ಮಾತನಾಡುತ್ತಿದ್ದಂತೆ. ಎಲ್ಲ ನನ್ನ ಸ್ನೇಹಿತರು ಅವರು ಏನು ಬೇಕಾದರೂ ಹೇಳಬಹುದು. ನಾನು ಯಾವುದಕ್ಕೂ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ನುಣಿಚಿಕೊಂಡರು.
Advertisement
Advertisement
ಯೋಗೇಶ್ವರ್‍ರವರು ಮಠಗಳಿಗೆ ಲಾಪ್ ಟ್ಯಾಪ್ ಹಿಡಿದು ಹೋಗಿದ್ದರು ಎಂಬ ಡಿ.ಕೆ ಶಿವಕುಮಾರ್ ಆರೋಪ ವಿಚಾರವಾಗಿ, ಡಿಕೆ ಶಿವಕುಮಾರ್‍ಗೆ ನನ್ನ ವಿರುದ್ಧ ಮಾತಾನಾಡುವುದು ಅನಿವಾರ್ಯ ಆಗಿದೆ. ಬಿಜೆಪಿಗೆ ಅವರು ಸಾಮಾನ್ಯ ಸದಸ್ಯನಾಗಿ ಸದಸ್ಯತ್ವ ತೆಗೆದುಕೊಳ್ಳೋದು ಒಳ್ಳೆಯದು. ಸಿಡಿ ಸಂಸ್ಕೃತಿ ಡಿಕೆ ಶಿವಕುಮಾರ್ ಅವರಿಗೆ ಚೆನ್ನಾಗಿ ಗೊತ್ತು. ನಮ್ಮ ಜಿಲ್ಲೆಯ ಎಲ್ ಎನ್ ಮೂರ್ತಿ ಅನ್ನೋರು ಅವರು ಯಾರು ಯಾರಿಗೆ ಸಿಡಿ ತೋರಿಸುತ್ತಿದ್ದರು ಎಂದು ಬರೆದಿದ್ದಾರೆ. ರಮೇಶ್ ಜಾರಕಿಹೊಳಿ ಸಿಡಿ ಹಗರಣದ ಹಿಂದೆ ಯಾರು ಇದ್ದರು ಎಂಬುದು ಎಲ್ಲರಿಗೂ ಗೊತ್ತಿದೆ ಎಂದರು. ಇದನ್ನು ಓದಿ: ಮಠಾಧೀಶರಿಗೆ ಬಿಜೆಪಿ ಸಚಿವರು ಲ್ಯಾಪ್‍ಟಾಪ್ ತೋರಿಸಿದ್ದಾರೆ: ಡಿಕೆಶಿ
ನನ್ನ ಬಗ್ಗೆ ಕುಚೋದ್ಯ ಮಾಡಬೇಕು, ಸಮಾಜದಲ್ಲಿ ಕಳಂಕ ತರಿಸಬೇಕು ಅಂತ ಡಿಕೆ ಶಿವಕುಮಾರ್ ಹೀಗೆಲ್ಲ ಮಾತಾಡುತ್ತಿದ್ದಾರೆ. ಡಿಕೆ ಶಿವಕುಮಾರ್ ನನ್ನ ರಾಜಕೀಯ ವಿರೋಧಿ. ನನ್ನನ್ನ ಏನೋ ಮಾಡಿ ತಗಲು ಹಾಕಬೇಕು ಅಂತ ಹೀಗೆಲ್ಲ ಮಾತಾನಾಡುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ಅವರನ್ನು ನೋಡಿದರೆ ನನ್ನನ್ನ ನೋಡಿದರೆ ವಿಚಲಿತರಾಗುತ್ತಾರೆ. ತಿಹಾರ್ ಜೈಲಿಗೆ ಹೋಗಿ ಬಂದವರ ಬಗ್ಗೆ ನಾನೇನು ಮಾತಾನಾಡುವುದಿಲ್ಲ. ತಿಹಾರ್ ಜೈಲಿಗೆ ಹೋಗಿ ಬಂದ ಮೇಲೆ ಅವರು ಏನೇನೋ ಮಾತಾನಾಡುತ್ತಿದ್ದಾರೆ. ಅಲ್ಲದೇ ನಾನು ಆದಿಚುಂಚನಗಿರಿ ಮಠಕ್ಕೆ ಹೋಗುವುದು ಇದೇ ಮೊದಲಲ್ಲ. ಅನೇಕ ಬಾರಿ ಹೋಗಿದ್ದೇನೆ. ನಾನು ಮಠಕ್ಕೆ ಹೋಗಿ ಬಂದ ತಕ್ಷಣ ಡಿಕೆ ಶಿವಕುಮಾರ್‍ರವರು ಹೋಗುತ್ತಾರೆ ಮನಸ್ಸಿಗೆ ಬಂದಂತೆ ಮಾತನಾಡುತ್ತಾರೆ. ಅದಕ್ಕೆ ನಾನು ಉತ್ತರ ಕೊಡೊಲ್ಲ ಎಂದು ಡಿಕೆ ಶಿವಕುಮಾರ್ ವಿರುದ್ಧ ಯೋಗೇಶ್ವರ್‍ರವರು ಆಕ್ರೋಶ ವ್ಯಕ್ತಪಡಿಸಿದರು. ಇದನ್ನು ಓದಿ:ಯಾರೂ ರಾಜಕೀಯ ಹೇಳಿಕೆಗಳನ್ನು ನೀಡಕೂಡದು: ಆಪ್ತರಿಗೆ ಸಿಎಂ ಸಂದೇಶ