ಹಾವೇರಿ: ಬೈಕ್‍ನಿಂದ ಬಿದ್ದು ವ್ಯಕ್ತಿಯೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ಜಿಲ್ಲೆಯ ರಟ್ಟೀಹಳ್ಳಿ ತಾಲೂಕಿನ ಪುರದಕೇರಿ ಗ್ರಾಮದ ಬಳಿ ನಡೆದಿದೆ.
ಮೃತನನ್ನು ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ದೀಟೂರು ಗ್ರಾಮದ 35 ವರ್ಷದ ಸುರೇಶ್ ಹರಿಹರದ ಎಂದು ಗುರುತಿಸಲಾಗಿದೆ. ಸಹೋದರನ ಮದುವೆಯ ಹಿನ್ನೆಲೆಯಲ್ಲಿ ಲಗ್ನ ಪತ್ರಿಕೆ ವಿತರಿಸಲು ಕಮಲಾಪುರ ಗ್ರಾಮಕ್ಕೆ ಹೊರಟಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.
ಸ್ಥಳಕ್ಕೆ ರಟ್ಟೀಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂಬಂಧ ರಟ್ಟೀಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಭಸವಾಗಿ ಬಿದ್ದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.