ಬೆಂಗಳೂರು: ಕೊರೊನಾ ಸೋಂಕು ಕಮ್ಮಿಯಾಗುತ್ತಿರುವ ಬೆನ್ನಲ್ಲೇ ಜನ ಇರಲಿ ಜವಾಬ್ದಾರಿಯುತ ಜನಪ್ರತಿನಿಧಿಗಳು ನಿಯಮಗಳ ಪಾಲನೆ ಗಾಳಿಗೆ ತೂರುತ್ತಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರಿನ ಹೆಬ್ಬಾಳದಲ್ಲಿ ಸ್ವಪಕ್ಷದ ಮುಖಂಡ ಎಂಸಿಎ ಸಂಸ್ಥೆಯ ಅಧ್ಯಕ್ಷ ಸಿ.ಮುನಿಕೃಷ್ಣ ಅವರ ಬರ್ತಡೇ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಡಿ.ವಿ ಸದಾನಂದಗೌಡ ಮತ್ತು ಗೃಹ ಸಚಿವ ಬಸವರಾಜ ಬೊಮ್ಮಾಯಿ ಸಾಮಾಜಿಕ ಅಂತರ ಪಾಲನೆ ಮಾಡದೇ ಭಾಗವಹಿಸಿರುವುದು ಟೀಕೆಗೆ ಗುರಿಯಾಗಿದೆ. ಇದನ್ನು ಓದಿ: ರಾಜೀನಾಮೆಗೆ ಸಿದ್ಧ, ಅವಮಾನ ಮಾಡಿ ಕೆಳಗೆ ಇಳಿಸುತ್ತೇವೆ ಎಂದರೆ ನಾನು ಬಗ್ಗಲ್ಲ
ಸಿ. ಮುನಿಕೃಷ್ಣ ಅವರು ತಮ್ಮ ಜನ್ಮದಿನದ ಅಂಗವಾಗಿ ಹೆಬ್ಬಾಳದ ಚೋಳನಾಯಕನ ಹಳ್ಳಿಯಲ್ಲಿ ಕಾರ್ಯಕ್ರಮ ಆಯೋಜಿಸಿದ್ದರು. ಕಾರ್ಯಕ್ರಮದಲ್ಲಿ ಗೃಹ, ಕಾನೂನು ಮತ್ತು ಸಂಸದ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ಅವರು ಪೌರ ಕಾರ್ಮಿಕರಿಗೆ ಆಹಾರದ ಕಿಟ್‍ಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವರಾದ ಡಿ ವಿ ಸದಾನಂದಗೌಡ, ಸಿ ಮುನಿಕೃಷ್ಣ ಉಪಸ್ಥಿತರಿದ್ದರು. ಇದನ್ನು ಓದಿ:ಯಡಿಯೂರಪ್ಪ, ಬಿಜೆಪಿ ಪಕ್ಷಕ್ಕೆ ನಮ್ಮ ನಿಷ್ಠೆ – ಸುಧಾಕರ್
ಆದರೆ ಯಾರೊಬ್ಬರೂ ಸಾಮಾಜಿಕ ಅಂತರ ಪಾಲಿಸದೇ ಅಕ್ಕಪಕ್ಕ ಅಂಟಿಕೊಂಡೇ ಇದ್ದರು. ಇದೇನಾ ಜನಪ್ರತಿನಿಧಿಗಳ ನಡವಳಿಕೆ ಅಂತ ಜನ ಪ್ರಶ್ನೆ ಮಾಡುತ್ತಿದ್ದಾರೆ.