– ಬಾಲಿವುಡ್‍ನಲ್ಲಿ ಶೇ.80 ಜನ ಡ್ರಗ್ ಅಡಿಕ್ಟ್ಸ್
ಮುಂಬೈ: ನನ್ನ ಜೊತೆ ನಟಿಯರಾದ ಸಾರಾ ಅಲಿ ಖಾನ್, ರಾಕುಲ್ ಪ್ರೀತ್ ಸಿಂಗ್ ಕೂಡ ಡ್ರಗ್ಸ್ ತೆಗೆದುಕೊಳ್ಳುತ್ತಿದ್ದರು ಎಂದು ನಟಿ ರಿಯಾ ಚಕ್ರವರ್ತಿ ಎನ್‍ಸಿಬಿ ತನಿಖೆ ವೇಳೆ ಒಪ್ಪಿಕೊಂಡಿದ್ದಾಳೆ ಎಂದು ರಾಷ್ಟ್ರೀಯ ಮಾಧ್ಯಮವೊಂದು ವರದಿ ಮಾಡಿವೆ.
ಡ್ರಗ್ ಮಾಫಿಯಾ ಪ್ರಕರಣ ಇಡೀ ಭಾರತ ಚಿತ್ರರಂಗಕ್ಕೆ ದೊಡ್ಡ ತಲೆನೋವಾಗಿ ತೋರುತ್ತಿದೆ. ದಿನಕ್ಕೊಂದು ನಟಿಮಣಿಯರ ಹೆಸರು ಈಗ ಈ ಪ್ರಕರಣದಲ್ಲಿ ಕೇಳಿ ಬರುತ್ತಿವೆ. ಬಾಲಿವುಡ್‍ನಲ್ಲಿ ರಿಯಾ ಚಕ್ರವರ್ತಿ ಅರೆಸ್ಟ್ ಆಗಿದ್ದರೆ, ಇತ್ತ ಸ್ಯಾಂಡಲ್‍ವುಡ್‍ನಲ್ಲಿ ನಟಿ ರಾಗಿಣಿ ಮತ್ತು ಸಂಜನಾ ಅರೆಸ್ಟ್ ಆಗಿದ್ದಾರೆ.
Advertisement
Advertisement
ಸದ್ಯ ನ್ಯಾಯಾಂಗ ಬಂಧನದಲ್ಲಿರುವ ರಿಯಾ ಎನ್‍ಸಿಬಿ ಅಧಿಕಾರಿಗಳ ವಿಚಾರಣೆ ವೇಳೆ ಹಲವು ನಟಿಯರ ಹೆಸರು ಹೇಳಿದ್ದು, ನಟಿಯರಾದ ಸಾರಾ ಅಲಿ ಖಾನ್ ಮತ್ತು ರಕುಲ್ ಪ್ರೀತ್ ಸಿಂಗ್, ಡಿಸೈನರ್ ಸಿಮೋನೆ ಖಂಬಟ್ಟಾ, ಸುಶಾಂತ್ ಸಿಂಗ್ ರಜಪೂತ್ ಅವರ ಸ್ನೇಹಿತೆ ಮತ್ತು ಮಾಜಿ ಮ್ಯಾನೇಜರ್ ರೋಹಿಣಿ ಅಯ್ಯರ್ ಮತ್ತು ಚಲನಚಿತ್ರ ನಿರ್ಮಾಪಕ ಮುಖೇಶ್ ಛಭ್ರಾ ಎಲ್ಲರೂ ಡ್ರಗ್ ತೆಗೆದುಕೊಂಡಿದ್ದಾರೆ ಎಂದು ಬಾಯ್ಬಿಟ್ಟಿದ್ದಾಳೆ ಎಂದು ಟೈಮ್ಸ್ ನೌ ವರದಿ ವರದಿ ಮಾಡಿದೆ.
Advertisement
Advertisement
ಸಾರಾ ಅಲಿ ಖಾನ್ ನಟ ಸೈಫ್ ಅಲಿ ಖಾನ್ ಪುತ್ರಿಯಾಗಿದ್ದು, ಈಕೆ 2018ರಲ್ಲಿ ತೆರೆಕಂಡ ಕೇದಾರನಾಥ್ ಸಿನಿಮಾದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದರು. ಇದರಲ್ಲಿ ಸುಶಾಂತ್ ಸಿಂಗ್ ರಾಜಪೂತ್ ನಾಯಕನಾಗಿ ನಟಿಸಿದ್ದರು. ಈ ವಿಚಾರವಾಗಿ ಎನ್‍ಸಿಬಿ ತನಿಖೆಯಲ್ಲಿ ಮಾಹಿತಿ ನೀಡಿರುವ ರಿಯಾ, ಕೇದಾರನಾಥ್ ಸಿನಿಮಾ ಸಮಯದಲ್ಲಿ ಸಾರಾ ಅಲಿ ಖಾನ್, ಸುಶಾಂತ್ ಮತ್ತು ಅವರ ಸ್ನೇಹಿತರು ಥೈಲ್ಯಾಂಡ್‍ಗೆ ಟ್ರಿಪ್ ಹೋಗಿ 70 ಲಕ್ಷ ಖರ್ಚು ಮಾಡಿಕೊಂಡು ಬಂದಿದ್ದರು ಎಂದು ಹೇಳಿದ್ದಾಳೆ. ಇದನ್ನೂ ಓದಿ: ಜಾಮೀನು ಅರ್ಜಿ ವಜಾ – ರಿಯಾ ಚಕ್ರವರ್ತಿಗೆ ಜೈಲೇ ಗತಿ
ಈ ಹಿಂದೆ ಮಾತನಾಡಿದ್ದ ನಟ ಸುಶಾಂತ್ ಸಿಂಗ್ ಸ್ನೇಹಿತ ಸ್ಯಾಮ್ಯುಯೆಲ್ ಹಾಕಿಪ್, ಕೇದಾರನಾಥ್ ಸಿನಿಮಾ ಶೂಟಿಂಗ್ ವೇಳೆ ಸಾರಾ ಅಲಿ ಖಾನ್ ಮತ್ತು ಸುಶಾಂತ್ ಪರಸ್ಪರ ಪ್ರೀತಿಸುತ್ತಿದ್ದರು ಎಂದು ಹೇಳಿದ್ದರು. ಈಗ ಈ ವಿಚಾರ ಸಾಮಾಜಿಕ ಜಾಲತಾಣದಲ್ಲೂ ಚರ್ಚೆಯಾಗುತ್ತಿದ್ದು, ಮಗಳನ್ನು ಪ್ರೀತಿಸಿದಕ್ಕೆ ತಂದೆ ಸೈಫ್ ಅಲಿ ಖಾನ್ ಸುಶಾಂತ್‍ಗೆ ಬೆದರಿಕೆ ಹಾಕಿದ್ದರು ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ: ಡ್ರಗ್ಸ್ ಅಡಿಕ್ಟ್ ಸುಶಾಂತ್‍ನನ್ನು ಪ್ರೀತಿಸಿದ್ದಕ್ಕೆ ಈ ಶಿಕ್ಷೆ: ರಿಯಾ ಪರ ವಕೀಲ
ಮೂಲಗಳ ಪ್ರಕಾರ ಎನ್‍ಸಿಬಿ ತನಿಖೆ ವೇಳೆ ರಿಯಾ ಚಕ್ರವರ್ತಿ ಡ್ರಗ್ ತೆಗೆದುಕೊಳ್ಳುತ್ತಿದ್ದ ಮತ್ತು ಸಂಗ್ರಹಿಸುತ್ತಿದ್ದ ಹಲವಾರು ಬಾಲಿವುಡ್ ತಾರೆಯರ ಹೆಸರನ್ನು ಬಾಯ್ಬಿಟ್ಟಿದ್ದಾಳೆ ಎನ್ನಲಾಗಿದೆ. ಇದರಲ್ಲಿ ಈಗಾಗಲೇ 15 ಮಂದಿಯ ಮೇಲೆ ಎನ್‍ಸಿಬಿ ಅಧಿಕಾರಿಗಳು ಕಣ್ಣಿಟ್ಟಿದ್ದಾರೆ. ಬಾಲಿವುಡ್‍ನಲ್ಲಿ 80% ಜನ ಡ್ರಗ್ ತೆಗೆದುಕೊಳ್ಳುತ್ತಾರೆ ಎಂದು ರಿಯಾ ಹೇಳಿದ್ದಾಳೆ. ಇದರಲ್ಲಿ 25 ಮಂದಿಗೆ ಎನ್‍ಸಿಬಿ ಸಮನ್ಸ್ ನೀಡಲು ಸಿದ್ಧತೆ ನಡೆಸಿದೆ. ವಿಚಾರಣೆ ವೇಳೆ ತಾನು ತಪ್ಪು ಮಾಡಿದ್ದನ್ನು ಒಪ್ಪಿಕೊಂಡಿರುವ ರಿಯಾ, ನನಗೆ ಸುಶಾಂತ್ ಕೂಡ ಆರ್ಥಿಕವಾಗಿ ಸಹಾಯ ಮಾಡುತ್ತಿದ್ದರು ಎಂದು ಹೇಳಿದ್ದಾಳೆ ಎಂದು ವರದಿಯಾಗಿದೆ.
ಜೂನ್ 14 ರಂದು ಮೃತಪಟ್ಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ತನಿಖೆಗೆ ಸಂಬಂಧಿಸಿದ ಡ್ರಗ್ಸ್ ಆರೋಪದ ಮೇಲೆ ನಟಿ ರಿಯಾ ಚಕ್ರವರ್ತಿಯನ್ನು ಮಂಗಳವಾರ ಬಂಧಿಸಿ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಸಾವನ್ನಪ್ಪಿದ ನಟ ಸುಶಾಂತ್‍ಗೆ ರಿಯಾ ಚಕ್ರವರ್ತಿ ಗಾಂಜಾ ಸೇವನೆ ಮಾಡಲು ಗಾಂಜಾ ಖರೀದಿಸುತ್ತಿದ್ದಳು ಎಂಬ ಆರೋಪದ ಮೇಲೆ ಎನ್‍ಸಿಬಿ ರಿಯಾಳನ್ನು ಅರೆಸ್ಟ್ ಮಾಡಿತ್ತು. ನಂತರ ಆಕೆ ಸ್ಥಳೀಯ ಕೋರ್ಟಿನಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಳು ಅದು ಕೂಡ ವಜಾಗೊಂಡಿತ್ತು. ಮತ್ತೆ ಮುಂಬೈ ಕೋರ್ಟಿಗೆ ಆಕೆ ಅರ್ಜಿ ಸಲ್ಲಿಸಿದ್ದಳು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ವಾದವನ್ನು ಆಲಿಸಿದ್ದ ಕೋರ್ಟ್, ಶುಕ್ರವಾರಕ್ಕೆ ತೀರ್ಪನ್ನು ಕಾಯ್ದಿರಿಸಿತ್ತು. ಶುಕ್ರವಾರ ಈ ತೀರ್ಪು ಬಂದಿದ್ದು, ರಿಯಾ ಮತ್ತು ಆಕೆಯ ಸಹೋದರ ಶೌವಿಕ್ ಚಕ್ರವರ್ತಿ ಸೇರಿದಂತೆ ಎಂಟು ಮಂದಿ ಆರೋಪಿಗಳ ಜಾಮೀನು ಅರ್ಜಿಯನ್ನು ಕೋರ್ಟ್ ವಜಾ ಮಾಡಿತ್ತು. ಈ ಮೂಲಕ ಮತ್ತೆ ಸೆಪ್ಟೆಂಬರ್ 22ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಸದ್ಯ ರಿಯಾ ಬೈಕುಲ್ಲಾ ಜೈಲಿನಲ್ಲಿ ಇದ್ದಾಳೆ.