ಮೈಸೂರು: ಸಾರಿಗೆ ಅಧಿಕಾರಿಗಳು ಮತ್ತು ಖಾಸಗಿ ಬಸ್‍ಗಳ ಚಾಲಕರು, ನಿರ್ವಾಹಕರ ನಡುವೆ ವಾಗ್ವಾದ ನಡೆದಿರುವ ಘಟನೆ ಮೈಸೂರಿನ ಕೇಂದ್ರಿಯ ಬಸ್ ನಿಲ್ದಾಣದಲ್ಲಿ ನಡೆದಿದೆ.
Advertisement
ಸಾರಿಗೆ ನೌಕರರು ಮುಷ್ಕರ ಮುಂದುವರಿದ ಹಿನ್ನೆಲೆ ಕೆಎಸ್‌ಆರ್‌ಟಿಸಿ ಬಸ್‍ಗಳು ಇಲ್ಲದೇ ಖಾಸಗಿ ಬಸ್‍ಗಳು ಸೇವೆ ಸಲ್ಲಿಸುತ್ತಿವೆ. ಇದೀಗ ಒಂದೊಂದಾಗಿ ಕೆಎಸ್‌ಆರ್‌ಟಿಸಿ ಬಸ್‍ಗಳು ರಸ್ತೆಗಿಳಿಯುತ್ತಿದೆ.
Advertisement
Advertisement
ಹಾಗಾಗಿ ಖಾಸಗಿ ಬಸ್‍ಗಳ ಚಾಲಕರು ಮತ್ತು ನಿರ್ವಾಹಕರು ನಾವು ಬೆಳಿಗ್ಗೆಯಿಂದಲೇ ನಮ್ಮ ಬಸ್‍ಗಳನ್ನು ತಂದು ನಿಲ್ಲಿಸಿ ಕಾದು ಕುಳಿತಿದ್ದೇವೆ. ನೀವು ಈಗ ಏಕಾಏಕಿ ಬಂದು ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಮಾಡಲಿ ಬಿಟ್ಟರೆ ನಮ್ಮ ಗತಿಯೇನು? ನಮ್ಮನ್ನ ಉಪಯೋಗಿಸಿಕೊಂಡು ಬಿಸಾಡುತ್ತೀರಾ? ಎಂದು ಆಕ್ರೋಶ ಹೊರಹಾಕಿದ್ದಾರೆ.
Advertisement
ನಾಲ್ಕು ದಿನಗಳಿಂದ ನಾವು ಸೇವೆ ನೀಡುತ್ತಿದ್ದೇವೆ. ಆದರೆ ಈಗ ಬಂದಿರುವ ಕೆಎಸ್‌ಆರ್‌ಟಿಸಿ ಬಸ್ ಭರ್ತಿಯಾದರೆ ನಾವು ಏನು ಮಾಡುವುದು. ನಮ್ಮ ಬಸ್‍ಗಳನ್ನು ಮೊದಲು ಬಿಡಿ ಆಮೇಲೆ ನಿಮ್ಮ ಬಸ್‍ಗಳು ಹೊರಡಲಿ ಎಂದು ಖಾಸಗಿ ಬಸ್ ಚಾಲಕರು, ನಿರ್ವಾಹಕರ ಒತ್ತಾಯಿಸಿದ್ದಾರೆ.
ಸದ್ಯ ಖಾಸಗಿ ಬಸ್‍ಗಳ ಸಂಚಾರಕ್ಕೆ ಮೊದಲ ಆದ್ಯತೆ ನೀಡಿ. ನಿಲ್ದಾಣ ತುಂಬಾ ಬಸ್ ಇದೆ. ಆದರೆ ಪ್ರಯಾಣಿಕರೇ ಇಲ್ಲದ ಸ್ಥಿತಿಯಾಗಿದೆ ಎಂದು ಕಿಡಿಕಾರಿದ್ದಾರೆ.