ಬೆಂಗಳೂರು: ರಾಜ್ಯದಲ್ಲಿ ಅನ್‍ಲಾಕ್ ಆದ ನಂತರ ಬಸ್ ಸಂಚಾರ ಶುರುವಾಗಿದೆ. ಆದರು ಇನ್ನೂ ಮೊದಲ ರೀತಿಯಲ್ಲಿ ಎಲ್ಲಾ ಬಸ್‍ಗಳು ಸರಿಯಾಗಿ ರಸ್ತೆಗೆ ಇಳಿದಿಲ್ಲ. ಈ ಮಧ್ಯೆ ಸರ್ಕಾರಕ್ಕೆ ಶಾಕ್ ನೀಡಲು ಸಾರಿಗೆ ನೌಕರರು ಮುಂದಾಗಿದ್ದರು. ಆದರೆ ಇದೀಗ ಸಾರಿಗೆ ನೌಕರರಿಗೆ ಸರ್ಕಾರವೇ ಚಮಕ್ ನೀಡಿದೆ.
Advertisement
ಜುಲೈ 5ರ ಬಳಿಕ ಕುಟುಂಬ ಸಮೇತ ಪ್ರತಿಭಟನೆ ನಡೆಸಲು ಸಾರಿಗೆ ನೌಕರರು ತಯಾರು ನಡೆಸಿದ್ದರು. ಇದನ್ನು ಅರಿತ ಸರ್ಕಾರ ಈ ಹಿನ್ನೆಲೆ ಅಗತ್ಯ ಸೇವೆಗಳ ಮುಷ್ಕರವನ್ನು ನಿಷೇಧಿಸಿ ಸರ್ಕಾರ ಆದೇಶ ಹೊರಡಿಸಿದೆ. ಜುಲೈ 1 ರಿಂದ ಡಿ.31 ರವರೆಗೆ ಸಾರಿಗೆ ನೌಕರರ ಮುಷ್ಕರ ನಿಷೇಧ ಮಾಡಲಾಗಿದೆ. ಇದನ್ನೂ ಓದಿ: ಸಾರಿಗೆ ಸಮಸ್ಯೆಯಾದಾಗ ಜನರೇ ಸಹಿಸಿಕೊಳ್ಳಬೇಕು: ಸವದಿ ಉಡಾಫೆ ಹೇಳಿಕೆ
Advertisement
Advertisement
ಸದ್ಯ ಕೋವಿಡ್ ನಿಂದ ಆರ್ಥಿಕತೆಯ ಮೇಲೆ ಸಾಕಷ್ಟು ಪ್ರಭಾವ ಬೀರಿದೆ. ಸಾರ್ವಜನಿಕ ಹಿತದೃಷ್ಟಿಯಿಂದ ಈ ಸಂದರ್ಭದಲ್ಲಿ ಮುಷ್ಕರ ಮಾಡುವುದು ಸೂಕ್ತವಲ್ಲ. ಹಾಗಾಗಿ ಕರ್ನಾಟಕ ಅಗತ್ಯ ಸೇವೆಗಳ ನಿರ್ವಹಣೆ ಕಾಯ್ದೆಯ 3ರ ಉಪವಿಭಾಗ 1ರ ಅನ್ವಯ ಕರ್ನಾಟಕ ಸರ್ಕಾರವು ರಾಜ್ಯದಲ್ಲಿ ಅಗತ್ಯ ಸೇವೆಗಳ ಮುಷ್ಕರ ನಿಷೇಧಿಸಿ ಆದೇಶವನ್ನು ಹೊರಡಿಸಿದೆ. ಇದರಿಂದ ಇದೀಗ ಸಾರಿಗೆ ನೌಕರರಿಗೆ ಹಿನ್ನಡೆ ಆದಂತಾಗಿದೆ.
Advertisement