– 16ರ ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಪರಾರಿ
– 24 ಗಂಟೆಯ ಒಳಗಾಗಿ ಆರೋಪಿ ಪೊಲೀಸರ ಬಲೆಗೆ
ಪಾಟ್ನಾ: ಅಪ್ರಾಪ್ತೆಯನ್ನ ನೆರೆಮನೆಯ ಬಾಲಕ ಹೊಲಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿರುವ ಘಟನೆ ಬಿಹಾರದ ಕೈಮೂರ್ ಜಿಲ್ಲೆಯಲ್ಲಿ ಕಳೆದ ಶನಿವಾರ ನಡೆದಿದೆ.
ಅತ್ಯಾಚಾರಕ್ಕೊಳಗಾದ ಹುಡುಗಿ 16 ವರ್ಷದವಳಾಗಿದ್ದಾಳೆ. ಹೊಲಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ ಆರೋಪಿ ಜಿಂಗಾ ಖಾರ್ವಾರ್ ಆಗಿದ್ದಾನೆ. ಈತ ಅತ್ಯಾಚಾರ ಎಸಗಿ ಸ್ಥಳದಿಂದ ಪರಾರಿಯಾಗಿದ್ದಾನೆ. ಈ ಪ್ರಕರಣದಲ್ಲಿ ಸಂತ್ರಸ್ತೆ ಕಡೆಯವರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಹುಡುಗಿ ಒಬ್ಬಳೆ ತನ್ನ ಮನೆಯಲ್ಲಿ ಇದ್ದಳು. ಆ ವೇಳೆ ನೆರೆಮನೆಯ ಹುಡುಗ ಬಂದು ಆಕೆಯನ್ನು ಸಾಸಿವೆ ಹೊಲಕ್ಕೆ ಕೆಲಸಕ್ಕೆ ಹೋಗೋಣ ಎಂದು ಹೇಳಿ ಕರೆದುಕೊಂಡು ಹೋಗಿದ್ದಾನೆ. ಅಲ್ಲಿ ಅವಳ ಮೇಲೆ ಅತ್ಯಾಚಾರ ಎಸಗಿದ್ದಾನೆ. ನಂತರ ಹುಡುಗಿ ಮನೆಗೆ ಬಂದು ತನ್ನ ಕುಟುಂಬಕ್ಕೆ ಘಟನೆಯ ಬಗ್ಗೆ ತಿಳಿಸಿದ್ದಾಳೆ. ಪೋಷಕರು ಕುಂದ್ರಾ ಪೊಲೀಸ್ ಠಾಣೆಗೆ ಬಂದು ಆರೋಪಿಯ ವಿರುದ್ಧ ದೂರು ದಾಖಲಿಸಿದ್ದಾರೆ.
ಕುಂದ್ರಾ ಪೊಲೀಸ್ ಠಾಣೆಯ ಪೊಲೀಸರು ಹುಡುಗಿಗೆ ವೈದ್ಯಕೀಯ ಪರೀಕ್ಷೆಯನ್ನು ಮಾಡಿಸಿದ್ದಾರೆ. ಆರೋಪಿ ಹುಡುಗನನ್ನು ಪ್ರಕರಣ ದಾಖಲಿಸಿಕೊಂಡ 24 ಗಂಟೆಯ ಒಳಗಾಗಿ ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಆರೋಪಿ ಜಿಂಗಾ ಖಾರ್ವಾರ್ ಪೊಲೀಸರ ಕಸ್ಟಡಿಯಲ್ಲಿ ವಿಚಾರಣೆಯಲ್ಲಿದ್ದಾನೆ. ನ್ಯಾಯಾಲಕ್ಕೆ ಒಪ್ಪಿಸುತ್ತೇವೆ ಎಂದು ಪೊಲೀಸರು ತಿಳಿಸಿದ್ದಾರೆ.