ಬೆಂಗಳೂರು: ಸಾಹುಕಾರ ರಮೇಶ್ ಜಾರಕಿಹೊಳಿ ರಾಸಲೀಲೆ ಸಂಬಂಧ ಪೊಲೀಸರು ಇನ್ನೂ ಎಫ್‍ಐಆರ್ ದಾಖಲಿಸಿಲ್ಲ.
ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಂಬಂಧ ಈಗಾಗಲೇ ದೂರು ಸಲ್ಲಿಕೆಯಾಗಿದೆ. ಕೆಪಿಟಿಸಿಎಲ್‍ನಲ್ಲಿ ಕೆಲಸ ಕೊಡಿಸುವುದಾಗಿ ಆಮಿಷ ಒಡ್ಡಿ ಸಂತ್ರಸ್ಥ ಯುವತಿಯನ್ನು ಕಾಮಕ್ರಿಯೆಗೆ ಬಳಸಿಕೊಂಡಿರುವುದಾಗಿ ದೂರು ಕೊಡಲಾಗಿದೆ. ಪೊಲೀಸ್ ಆಯುಕ್ತ ಕಮಲ್ ಪಂತ್ ಸೂಚನೆ ಮೇರೆಗೆ ದಿನೇಶ್ ಕಲ್ಲಹಳ್ಳಿ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
Advertisement
Advertisement
ಸಂತ್ರಸ್ತೆಗೆ ನ್ಯಾಯ ಒದಗಿಸುವಂತೆ ದಿನೇಶ್ ಕಲ್ಲಹಳ್ಳಿ ಮನವಿ ಮಾಡಿದ್ದಾರೆ. ಆದರೆ ಪೊಲೀಸರು ಇನ್ನೂ ಎಫ್‍ಐಆರ್ ದಾಖಲಿಸಿಲ್ಲ. ಈ ಬಗ್ಗೆ ಪ್ರತಿಕ್ರಿಯಿಸಿದ ಡಿಸಿಪಿ ಅನುಚೇತ್, ಸಂತ್ರಸ್ತೆಯ ಹೇಳಿಕೆ ಪಡೆದ ಮೇಲಷ್ಟೇ ಎಫ್‍ಐಆರ್ ದಾಖಲಿಸುವುದಾಗಿ ತಿಳಿಸಿದ್ದಾರೆ.
Advertisement
ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಭೇಟಿ ಬಳಿಕ ಮಾತನಾಡಿದ್ದ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ, ಇದು ತುಂಬಾ ಸೂಕ್ಷ್ಮವಾದ ವಿಚಾರ ಆಗಿರುವ ಕಾರಣ ಬಹಿರಂಗಪಡಿಸಲು ಸಾಧ್ಯವಿಲ್ಲ. ಸಂತ್ರಸ್ತೆಗೆ ಭಾರೀ ಪ್ರಮಾಣದಲ್ಲಿ ಬೆದರಿಕೆ ಕರೆಗಳು ಬರುತ್ತಿವೆ. ಒಂದೆರಡು ತಿಂಗಳ ಹಿಂದೆ ಈ ಘಟನೆ ನಡೆದಿದ್ದು, ಬಳಿಕ ಬೆದರಿಕೆ ಕರೆಗಳು ಬರುತ್ತಿವೆ. ಹೀಗಾಗಿ ಪೊಲೀಸ್ ಅಧಿಕಾರಿಗಳನ್ನು ಭೇಟಿ ಮಾಡಿದ್ದು, ಕ್ರಮ ಕೈಗೊಳ್ಳುವ ಭರವಸೆ ಇದೆ. ಆಯುಕ್ತರನ್ನು ಭೇಟಿ ಮಾಡಿದ ಬಳಿಕ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ನೀಡಲು ತಿಳಿಸಿದ್ದಾರೆ. ಹೀಗಾಗಿ ದೂರು ನೀಡಲು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ತೆರಳುತ್ತಿದ್ದೇನೆ ಎಂದು ಹೇಳಿದ್ದರು.
Advertisement
ಕುಟುಂಬದ ಸದಸ್ಯರೊಬ್ಬರು ಆಗಮಿಸಿ ಸೋಮವಾರ ನನಗೆ ಸಿಡಿ ನೀಡಿದರು. ಕಿರು ಚಿತ್ರ ನಿರ್ಮಾಣಕ್ಕೆಂದು ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಭೇಟಿ ಮಾಡಿದಾಗ ಕೆಪಿಟಿಸಿಎಲ್‍ನಲ್ಲಿ ಕೆಲಸ ನೀಡುವುದಾಗಿ ಹೇಳಿಕೆ ನೀಡಿ, ಲೈಂಗಿಕವಾಗಿ ಬಳಸಿಕೊಂಡಿದ್ದಾರೆ. ಹಲವು ಪ್ರಕರಣಗಳಲ್ಲಿ ನನಗೆ ತುಂಬಾ ನೋವು ಕೊಟ್ಟಿದ್ದಾರೆ. ನನ್ನಿಂದ ಅವರ ವಿರುದ್ಧ ಹೋರಾಟ ಮಾಡಲು ಆಗುತ್ತಿಲ್ಲ. ನ್ಯಾಯ ಕೊಡಿಸಿ ಎಂದು ನನ್ನ ಬಳಿ ಮನವಿ ಮಾಡಿದರು. ನಾನು ನಮ್ಮ ವಕೀಲರ ಜೊತೆ ಚರ್ಚೆ ನಡೆಸಿ, ಇದೀಗ ದೂರು ನೀಡಲು ಬಂದಿದ್ದೇನೆ ಎಂದು ದಿನೇಶ್ ತಿಳಿಸಿದ್ದರು.