ವಿಜಯಪುರ: ಜಿಲ್ಲೆಯ ಸಿಂದಗಿ ಉಪಚುನಾವಣಾ ಕಣ ರಂಗೇರಿದೆ. ದಿ.ಎಂ.ಸಿ.ಮನಗೂಳಿ ಅವರ ನಿಧನದಿಂದ ತೆರವಾಗಿರುವ ಸಿಂದಗಿ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಲಿದೆ. ಉಪಚುನಾವಣೆಯ ದಿನಾಂಕ ಘೋಷಣೆಯ ಮುನ್ನವೇ ರಾಜಕೀಯ ಚಟುವಟಿಕೆ ಗರಿಗೆದರಿವೆ.
ಜೆಡಿಎಸ್ ದಿ. ಶಾಸಕ ಎಂ ಸಿ ಮನಗೂಳಿ ಅವರ ಮಗ ಅಶೋಕ್ ಮನಗೂಳಿ ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದಾರೆ. ಇಂದು ಸಂಜೆ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವ ಪಡೆದುಕೊಳ್ಳುವುದಾಗಿ ಅಶೋಕ್ ಮನಗೂಳಿ ಘೋಷಣೆ ಮಾಡಿದ್ದಾರೆ.
ಒಂದು ವಾರದ ಬಳಿಕ ನನ್ನ ಬೆಂಬಲಿಗರು ಹಾಗೂ ಕಾಂಗ್ರೆಸ್ ಮುಖಂಡರ ಜೊತೆಗೆ ಚರ್ಚಿಸುತ್ತೇನೆ. ತದನಂತರ ಸಿಂದಗಿಯಲ್ಲಿ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗುವುದು. ನಾನು ಕಾಂಗ್ರೆಸ್ ಟಿಕೆಟ್ ಕೇಳಿಲ್ಲ. ಟಿಕೆಟ್ ಯಾರಿಗೇ ಕೊಟ್ರೂ ನಾನು ಅವರ ಪರವಾಗಿ ಕೆಲಸ ಮಾಡುತ್ತೇನೆ. ನಾನು ಮೊದಲು ಕಾಂಗ್ರೆಸ್ ಸದಸ್ಯತ್ವ ತೆಗೆದುಕೊಳ್ಳುತ್ತೇನೆ. ನಂತರ ಸಿಂದಗಿ ಕಾಂಗ್ರೆಸ್ ಟಿಕೆಟ್ ಕೇಳುತ್ತೇನೆ ಎಂದು ಅಶೋಕ್ ಮನಗೂಳಿ ಹೇಳಿದ್ದಾರೆ.