ಬೆಂಗಳೂರು: ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಸಿಇಟಿ (ಸಾಮಾನ್ಯ ಪ್ರವೇಶ ಪರೀಕ್ಷೆ) ಪರೀಕ್ಷೆಯನ್ನು ಮುಂದೂಡಿ, ದಿನಾಂಕವನ್ನು ಮರು ನಿಗದಿ ಮಾಡಿದೆ.
ಸೋಂಕು ಹೆಚ್ಚಳವಾಗುತ್ತಿರುವ ಕಾರಣ ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆ ಮುಂದೂಡಿಕೆ ಮಾಡಿರುವ ಹಿನ್ನೆಲೆಯಲ್ಲಿ ಸಿಇಟಿ ಪರೀಕ್ಷೆಯನ್ನು ಮುಂದೂಡಲಾಗಿದೆ.
ಈ ಹಿಂದೆ ಸಿಇಟಿ ಪರೀಕ್ಷೆಯನ್ನು ಜುಲೈ 7 ಮತ್ತು 8ರಂದು ನಡೆಸಲು ತೀರ್ಮಾನಿಸಲಾಗಿತ್ತು, ಆದರೆ ಇದೀಗ ಸಿಇಟಿ ಪರೀಕ್ಷೆಯನ್ನು ಮುಂದೂಡಿ, ಆಗಸ್ಟ್ 28 ಮತ್ತು 29ರಂದು ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತೀರ್ಮಾನಿಸಿದೆ.
ಪರಿಷ್ಕ್ರತ ಪಟ್ಟಿಯಂತೆ ಆಗಸ್ಟ್ 28ರಂದು ಜೀವಶಾಸ್ತ್ರ, ಗಣಿತ ಪರೀಕ್ಷೆ ನಡೆಯಲಿದೆ. ಆಗಸ್ಟ್ 29ರಂದು ಭೌತಶಾಸ್ತ್ರ ಮತ್ತು ರಾಸಾಯನ ಶಾಸ್ತ್ರ ಪರೀಕ್ಷೆಗಳು ನಡಡೆಯಲಿದೆ. ಇದೇ ವೇಳೆ ಜುಲೈ 9ರಂದು ಗಡಿನಾಡು, ಹೊರನಾಡು ಕನ್ನಡಿಗರಿಗೆ ನಡೆಯಬೇಕಿದ್ದ ಕನ್ನಡ ಭಾಷಾ ಪರೀಕ್ಷೆಯನ್ನು ಮುಂದೂಡಿಕೆ ಮಾಡಲಾಗಿದ್ದು, ಆ ಪರೀಕ್ಷೆಯು ಆಗಸ್ಟ್ 30 ರಂದು ನಡೆಯಲಿದೆ.