ಸಿಎಂ ಆಸ್ಪತ್ರೆಯಲ್ಲಿದ್ದಾರೆ ಸರಿ, ಮೂರು ಜನ ಡಿಸಿಎಂಗಳು ಏನ್ ಮಾಡ್ತಿದ್ದಾರೆ: ಹಳ್ಳಿಹಕ್ಕಿ ಪ್ರಶ್ನೆ

Public TV
2 Min Read
mys vishwanath

– ಜನರಿಗೆ ಸೇವೆ ನೀಡುವುದರಲ್ಲಿ ಸರ್ಕಾರ ಸೋತಿದೆ

ಮೈಸೂರು: ಮುಖ್ಯಮಂತ್ರಿಗಳು ಆಸ್ಪತ್ರೆಯಲ್ಲಿ ಇದ್ದಾರೆ ಸರಿ, ಆದರೆ ಮೂರು ಜನ ಉಪ ಮುಖ್ಯಮಂತ್ರಿಗಳು ಇದ್ದಾರಲ್ವ ಅವರು ಏನು ಮಾಡುತ್ತಿದ್ದಾರೆ ಎಂದು ಹಳ್ಳಿ ಹಕ್ಕಿ ವಿಶ್ವನಾಥ್ ಪ್ರಶ್ನಿಸಿದ್ದಾರೆ.

ಕೊರೊನಾ ಹೆಚ್ಚಾಗಲು ಜನರೇ ಕಾರಣವೆಂಬ ಸಚಿವ ಸುಧಾಕರ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಸರ್ಕಾರದ ಜವಾಬ್ದಾರಿ ಮಂತ್ರಿಯ ಬೇಜವಾಬ್ದಾರಿ ಹೇಳಿಕೆ ಇದು. ಕೊರೊನಾ ಹೆಚ್ಚಾಗಲು ಜನರೇ ಕಾರಣ ಅಂತೀರಲ್ಲ. ಹಾಗಿದ್ರೆ ನೀವು ಏನ್ ಮಾಡ್ತಿದ್ದೀರಾ…? ಸಿಎಂ ಆಸ್ಪತ್ರೆಯಲ್ಲಿದ್ದಾರೆ ಸರಿ ಮೂರು ಜನ ಡಿಸಿಎಂ ಏನ್ ಮಾಡ್ತಿದ್ದಾರೆ. ಅವರನ್ನ ಸುಮ್ಮನೆ ಡಿಸಿಎಂ ಮಾಡಿರೋದಾ ಎಂದು ಪ್ರಶ್ನಿಸುವ ಮೂಲಕ ಕಿಡಿಕಾರಿದ್ದಾರೆ.

dcm ashwathnarayan 2

ಜನರ ಮೇಲೆ ಹೊಣೆ ಹಾಕಬಾರದು. ಒಬ್ಬ ಮಂತ್ರಿ ಜನ ಕಾರಣ ಅಂತಾರೆ, ಮತ್ತೊಬ್ಬ ಮಂತ್ರಿ ಬೇರೆ ರಾಜ್ಯದ ಪರಿಸ್ಥಿತಿ ನಮ್ಮಲ್ಲಿಲ್ಲ ಅಂತಾರೆ. ಜನ ಈಗಲೇ ಪರಿಪಾಟಲು ಪಟ್ಟಿದ್ದಾರೆ. ಬೆಡ್, ಆಕ್ಸಿಜನ್ ಸಿಗದೆ ಜನರು ಪರದಾಡುತ್ತಿದ್ದಾರೆ. ಇದಕ್ಕಿಂತಲು ಪರಿಸ್ಥಿತಿ ರಾಜ್ಯಕ್ಕೆ ಬರಬೇಕಾ..?. ನಾನು ಆಡಳಿತ ಪಕ್ಷದಲ್ಲಿ ಇದ್ದರು ಸರಿ. ಇದನ್ನು ನಾನು ಹೇಳದೆ ಇದ್ದರೆ ನನಗೆ ನಾನೇ ವಂಚನೆ ಮಾಡಿದಂತೆ ಆಗುತ್ತದೆ. ಸರ್ಕಾರ ಈಗಲಾದರು ಎಚ್ಚೆತ್ತುಕೊಳ್ಳಬೇಕು ಎಂದು ಸಲಹೆ ನೀಡಿದರು.

ರಾಜ್ಯದಲ್ಲಿ ತೀರ್ಮಾನ ತೆಗೆದುಕೊಳ್ಳೋದು ಮುಖ್ಯಮಂತ್ರಿ ಒಬ್ಬರೇ. ಹಾಗಾದರೆ ಕ್ಯಾಬಿನೆಟ್ ಯಾಕೆ ಬೇಕು?, ಕ್ಯಾಬಿನೆಟ್ ಮಿನಿಸ್ಟರ್ ಗಳೇ ಸರ್ಕಾರ. ಆದರೆ ಇಲ್ಲಿ ಏನ್ ಆಗ್ತಿದೆ ಎಂದು ವಿಶ್ವನಾಥ್ ಆಕ್ರೋಶ ಹೊರಹಾಕಿದರು.

DCM LAXMAN SAVADI

ಕೊರೊನಾ ಬಗ್ಗೆ ರಾಜ್ಯಪಾಲರು ಮೀಟಿಂಗ್ ತೆಗೆದುಕೊಳ್ತಾರೆಂದು ಮಾಹಿತಿ ಇದೆ. ಚುನಾಯಿತ ಸರ್ಕಾರ ವಿಫಲವಾದಾಗ ಮಾತ್ರ ರಾಜ್ಯಪಾಲರು ಎಂಟ್ರಿ ಆಗ್ಬೇಕು. ಹಾಗಿದ್ರೆ ಸರ್ಕಾರ ವಿಫಲವಾಗಿದ್ಯಾ?, 2 ಸಾವಿರ ಹಾಸಿಗೆ ತಂದ್ರಲ್ಲ ಅದು ಏನಾಯ್ತು?, ಅದಕ್ಕೆ ಮಾಡಿದ ವ್ಯವಸ್ಥೆ ಏನಾಯ್ತು.?, ಡಬ್ಲುಹೆಚ್‍ಒ ಹೇಳಿದ್ರು, ನೀವ್ ಏನ್ ತಯಾರಿ ಮಾಡಿಕೊಂಡಿದ್ರಿ ಎಂದು ಪ್ರಶ್ನೆಗಳ ಸುರುಮಳೆಗೈದ್ರು.

ಕೊರೊನಾ ಮೊದಲ ಅಲೆ ಮುಗಿದ ಮೇಲೆ ಬರೀ ಬಿಲ್ ಮಾಡೋದ್ರಲ್ಲಿ ಕಾಲ ಕಳೆದ್ರಿ. ಜನರಿಗೆ ಸೇವೆ ನೀಡುವುದರಲ್ಲಿ ಸರ್ಕಾರ ಸೋತಿದೆ. ಬರೀ ಮೀಟಿಂಗ್ ಮಾಡ್ತೀರಾ, ತೀರ್ಮಾನ ಏನಾಗಿದೆ ಹೇಳಿ. ಸಿಎಂ ಹಾಗೂ ಸಚಿವರು, ಡಿಸಿಎಂ ನಡುವೆ ಸಮನ್ವಯತೆ ಹೋಗಿದೆ. ಅದು ಹೋದ ಕಾರಣವೇ ಈ ಪರಿಸ್ಥಿತಿ ರಾಜ್ಯದಲ್ಲಿ ನಿರ್ಮಾಣವಾಗಿದೆ. ಐಎಸ್‍ಎಸ್ ಅಧಿಕಾರಿಗಳು ಯಾವ ಮಂತ್ರಿಯ ಮಾತನ್ನ ಕೇಳ್ತಿಲ್ಲ. ಇನ್ನಾದರು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಪವರ್ ಕೊಡಬೇಕು. ನಿರ್ಧಾರ ತೆಗೆದುಕೊಳ್ಳುವ ಹಣಕಾಸು ವ್ಯವಸ್ಥೆ ಸರ್ಕಾರ ಮಾಡಿಕೊಡಬೇಕು ಎಂದು ವಿಶ್ವನಾಥ್ ಹೇಳಿದರು.

dcm karajola 2

Share This Article
Leave a Comment

Leave a Reply

Your email address will not be published. Required fields are marked *