ಬೆಂಗಳೂರು: ಸಿಎಂ ಪುತ್ರ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಈ ಕುರಿತು ಟ್ವೀಟ್ ಮಾಡಿ ಸ್ಪಷ್ಟಪಡಿಸಿರುವ ಅವರು, ರೊಟೀನ್ ಚೆಕಪ್ ವೇಳೆ ನನ್ನ ಕೊರೊನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಬಂದಿದ್ದು, ಯಾವುದೇ ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯಂತೆ ಕ್ವಾರಂಟೈನ್ ನಲ್ಲಿದ್ದೇನೆ. ಕಳೆದ ಕೆಲವು ದಿನಗಳಿಂದ ನನ್ನ ಜೊತೆ ಸಂಪರ್ಕದಲ್ಲಿದ್ದವರು ಎಲ್ಲ ಮುನ್ನೆಚ್ಚರಿಕೆ ವಹಿಸಿಬೇಕು ಎಂದು ವಿನಂತಿಸಿಕೊಳ್ಳುತ್ತೇನೆ ಎಂದು ತಿಳಿಸಿದ್ದಾರೆ. ಈ ಮೂಲಕ ತಮಗೆ ಕೊರೊನಾ ಸೋಂಕು ದೃಢಪಟ್ಟಿರುವುದನ್ನು ಸ್ಪಷ್ಟಪಡಿಸಿದ್ದಾರೆ.
ನನ್ನ ಕೊರೋನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಬಂದಿದ್ದು, ಯಾವುದೇ ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯಂತೆ ಕ್ವಾರಂಟೈನ್ ನಲ್ಲಿದ್ದೇನೆ. ಕಳೆದ ಕೆಲವು ದಿನಗಳಿಂದ ನನ್ನ ಜೊತೆ ಸಂಪರ್ಕದಲ್ಲಿದ್ದವರು ಎಲ್ಲಾ ಮುನ್ನೆಚ್ಚರಿಕೆ ವಹಿಸಿಬೇಕು ಎಂದು ವಿನಂತಿಸಿಕೊಳ್ಳುತ್ತೇನೆ.
— Vijayendra Yeddyurappa (@BYVijayendra) October 2, 2020
ಈ ಹಿಂದೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಕೊರೊನಾ ಸೋಂಕು ದೃಢಪಟ್ಟ ಸಂದರ್ಭದಲ್ಲಿ ಅವರು ಕ್ವಾರಂಟೈನ್‍ಗೆ ಒಳಗಾಗಿದ್ದರು. ಆದರೆ ಆಗ ಅವರಿಗೆ ಸೋಂಕು ಪತ್ತೆಯಾಗಿರುವುದು ದೃಢಪಟ್ಟಿರಲಿಲ್ಲ. ಇದೀಗ ರೊಟೀನ್ ಚೆಕಪ್ ವೇಳೆ ಕೊರೊನಾ ದೃಢಪಟ್ಟಿದೆ. ಆದರೆ ಯಾವುದೇ ರೀತಿಯ ಲಕ್ಷಣಗಳಿಲ್ಲ ಎಂದು ಅವರೇ ತಿಳಿಸಿದ್ದಾರೆ.