ಹುಬ್ಬಳ್ಳಿ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯೇ ಇಲ್ಲ. ಮುಖ್ಯಮಂತ್ರಿ ಬದಲಾವಣೆ ವಿಚಾರವನ್ನು ಯಾರೋ ಕುಡಿದವರು ಮಾತನಾಡುತ್ತಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ.
ಇಂದು ನಗರದ ಸರ್ಕ್ಯೂಟ್ ಹೌಸ್‍ನಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಬಳಿಕ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಬಂದಿಲ್ಲ. ಇದನ್ನು ಯಾರೋ ಕುಡಿದವರು ಮಾತನಾಡುತ್ತಾರೆ ಎಂದು ಅವರು ವ್ಯಂಗ್ಯವಾಡಿದರು. ನರೇಗಾ ಅಡಿಯಲ್ಲಿ ಉದ್ಯೋಗ ನೀಡುವಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಛತ್ತೀಸ್‍ಗಢ್ ಮೊದಲನೆ ಸ್ಥಾನದಲ್ಲಿದೆ. ನರೇಗಾದಲ್ಲಿ 1,861 ಕೋಟಿ ಹಣ ಬಂದಿದೆ ಎಂದು ಹೇಳಿದ್ದಾರೆ.
Advertisement
Advertisement
ಹಿಂದಿನ ಸರಕಾರದಲ್ಲಿದ್ದ ಬಾಕಿ ಹಣ ಕೊಟ್ಟು, ಸರ್ಕಾರದ ಬಳಿ 1,000 ಕೋಟಿ ಉಳಿದಿದ್ದು, ಅಂತರ್ಜಲ ಚೇತನ ಕಾರ್ಯಕ್ರಮ ಎಲ್ಲಾ ಜಿಲ್ಲೆಗಳಲ್ಲಿ ಆರಂಭವಾಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು. ಗ್ರಾಮ ಪಂಚಾಯ್ತಿಗಳಿಗೆ ಆಡಳಿತ ಸಮಿತಿ ನೇಮಕ ಮಾಡುವ ನಿಟ್ಟಿನಲ್ಲಿ ಚರ್ಚೆಯಾಗಿದೆ. ಕ್ಯಾಬಿನೆಟ್ ನಲ್ಲಿ ಚರ್ಚಿಸಿ ತೀರ್ಮಾನ ಮಾಡುತ್ತೇವೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಮಾಹಿತಿ ನೀಡಿದ್ದಾರೆ.