ಬೆಂಗಳೂರು: ಯಡಿಯೂರಪ್ಪ ನಾಯತ್ವದ ವಿರುದ್ಧ ಬಿಜೆಪಿಯ ಒಂದು ಬಣದ ಲಿಂಗಾಯತ ಶಾಸಕರು, ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ ಎಂಬ ಸುದ್ದಿ ಬಿಜೆಪಿ ರಾಜಕೀಯ ವಲಯದಿಂದ ಕೇಳಿಬಂದಿದೆ.
ಈ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಾರಿಗೆ ಸಚಿವ ಲಕ್ಷ್ಮಣ ಸವದಿ ಯಾರು ಪತ್ರ ಬರೆದಿಲ್ಲ, ಈ ಸುದ್ದಿ ಸುಳ್ಳು. ಇದು ಸತ್ಯಕ್ಕೆ ದೂರವಾದ ಸಂಗತಿ. ಅಂತಹ ಯಾವುದೇ ಸಭೆ, ಪತ್ರಗಳು ನಮ್ಮ ಗಮನಕ್ಕೆ ಬಂದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಸಣ್ಣಪುಟ್ಟ ಗೊಂದಲಗಳನ್ನು ಮುಖ್ಯಮಂತ್ರಿಗಳೇ ಬಗೆಹರಿಸಿದ್ದಾರೆ. ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ನಾಯಕತ್ವ ಬದಲಾವಣೆ ಆಗುವುದಿಲ್ಲ. ಉಳಿದ ಅವಧಿಗೂ ಯಡಿಯೂರಪ್ಪ ಅವರೇ ಸಿಎಂ ಆಗಿ ಮುಂದುವರೆಯುತ್ತಾರೆ. ಮುಂದಿನ ಚುನಾವಣೆಯನ್ನು ಸಹ ಯಡಿಯೂರಪ್ಪ ನಾಯಕತ್ವದಲ್ಲಿಯೇ ಎದುರಿಸಲಾಗುವುದು ಎಂದು ಲಕ್ಷ್ಮಣ ಸವದಿ ಹೇಳಿಕೆ ನೀಡಿದ್ದಾರೆ.