ಹಾಸನ: ಕೊರೊನಾ ಸಂಕಷ್ಟದಲ್ಲಿ ಜನತೆಗೆ ಯಾವುದೇ ಸಮಸ್ಯೆಯಾಗದಂತೆ ಎಚ್ಚರವಹಿಸಬೇಕೆಂದು ಸಿಎಂ ಯಡಿಯೂರಪ್ಪ ಅವರಿಗೆ ಮಾಜಿ ಪ್ರಧಾನಿ ಹಾಗೂ ರಾಜ್ಯಸಭಾ ಸದಸ್ಯರಾದ ಹೆಚ್.ಡಿ.ದೇವೇಗೌಡರು ಕರೆ ಮಾಡಿ ಮಾತನಾಡಿದ್ದಾರೆ.
ಹಾಸನ ಜಿಲ್ಲೆಯಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಆಸ್ಪತ್ರೆಗಳಲ್ಲಿ ಸೋಕಿಂತರಿಗೆ ನಿಗದಿಯಾಗಿರುವ ಹಾಸಿಗೆಗಳು ಭರ್ತಿಯಾಗಿವೆ. ಈ ಹಿನ್ನೆಲೆಯಲ್ಲಿ ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಯಡಿಯೂರಪ್ಪನವರ ಜೊತೆಯಲ್ಲಿ ದೂರವಾಣಿಯಲ್ಲಿ ದೇವೇಗೌಡರು ಮಾತನಾಡಿದರು. ಜಿಲ್ಲೆಯ ಜನೆತೆಗೆ ಯಾವುದೇ ಸಮಸ್ಯೆ ಉಂಟಾಗದಂತೆ ಎಚ್ಚರವಹಿಸಬೇಕೆಂದು ಮನವಿ ಮಾಡಿದ್ದಾರೆ .
ಮುಖ್ಯಮಂತ್ರಿಗಳು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಯಾವುದೇ ಸಮಸ್ಯೆಯಾಗದಂತೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಹಾಗೂ ಜಿಲ್ಲಾಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿದ್ದೇನೆ ಎಂಬುದಾಗಿ ತಿಳಿಸಿದ್ದಾರೆ.
400 ಬೆಡ್‍ಗಳೂ ಭರ್ತಿ- ಹಾಸನ ಆಸ್ಪತ್ರೆ ಮುಂದೆ ಬೋರ್ಡ್https://t.co/35ZROd6F8C#Hassan #CoronaVirus #COVID19 #Hospital #KannadaNews @iPrajwalRevanna @CMofKarnataka @INCKarnataka @BJP4Karnataka @nimmapreetham
— PublicTV (@publictvnews) May 4, 2021
ಜಿಲ್ಲಾ ಉಸ್ತುವಾರಿ ಸಚಿವರ ಜೊತೆಯಲ್ಲಿ ದೇವೇಗೌಡರು ಸತತವಾಗಿ ದೂರವಾಣಿ ಸಂಪರ್ಕದಲ್ಲಿದ್ದಾರೆ. ಜಿಲ್ಲಾಧಿಕಾರಿಗಳ ಜೊತೆಯಲ್ಲಿ ದೂರವಾಣಿ ಸಂಪರ್ಕದಲ್ಲಿ ಸತತವಾಗಿದ್ದು ಪ್ರತಿ ದಿನದ ಜಿಲ್ಲೆಯ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆಯುತ್ತಿದ್ದಾರೆ.