ಚಾಮರಾಜನಗರ: ಸಿಎಂ ಯಡಿಯೂರಪ್ಪ ಬದಲಾವಣೆ ಸೂಕ್ತ ತೀರ್ಮಾನವಲ್ಲ. ಯಡಿಯೂರಪ್ಪ ಅವರೇ ಸಿಎಂ ಆಗಿ ಮುಂದುವರಿದರೆ ರಾಜ್ಯ ಅಭಿವೃದ್ಧಿ ಪಥದಲ್ಲಿ ನಡೆಯಲಿದೆ ಎಂದು ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
- Advertisement 2-
ಈ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿ.ಎಸ್. ಯಡಿಯೂರಪ್ಪ ಅವರೇ ಸಿಎಂ ಆಗಿ ಮುಂದುವರಿಯಬೇಕು, ಅವರ ಬದಲಾವಣೆ ಸರಿಯಲ್ಲ. ಅನುಭವಿ ರಾಜಕಾರಣಿಯಾಗಿರುವ ಯಡಿಯೂರಪ್ಪ ಅವರನ್ನು ಬದಲಿಸಿ ಬೇರೆಯವರನ್ನು ತಂದು ಕೂರಿಸಿದರೆ ಆಡಳಿತದ, ಕ್ಷೇತ್ರಗಳ ಪರಿಚಯ ಪಡೆದುಕೊಳ್ಳಲು 6-7 ತಿಂಗಳು ಬೇಕಾಗಲಿದೆ. ಉಳಿದ ಕೇವಲ ಎರಡು ವರ್ಷದಲ್ಲಿ ಈ 6-7 ತಿಂಗಳು ವೇಸ್ಟ್ ಆಗಲಿದೆ. ಅನುಭವಿ ಯಡಿಯೂರಪ್ಪ ಅವರೇ ಮುಂದುವರಿದರೆ ರಾಜ್ಯ ಅಭಿವೃದ್ಧಿ ಪಥದಲ್ಲಿ ನಡೆಯಲಿದೆ ಎಂದಿದ್ದಾರೆ.
- Advertisement 3-
- Advertisement 4-
ಕೊರೊನಾ, ಪ್ರವಾಹವನ್ನು ಸಮರ್ಥವಾಗಿ ಎದುರಿಸಿದ್ದಾರೆ. ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ ಯಡಿಯೂರಪ್ಪ ಅವರನ್ನು ಮುಂದುವರಿಸಬೇಕು. ಒಂದು ವೇಳೆ ಬದಲಾವಣೆಯಾದರೆ ಅಭಿವೃದ್ಧಿ ಕುಂಠಿತವಾಗಲಿದೆ ಎಂದು ಯಡಿಯೂರಪ್ಪ ಪರ ಬ್ಯಾಟಿಂಗ್ ಮಾಡಿದ್ದಾರೆ. ಇದನ್ನೂ ಓದಿ:‘ನನ್ನವರೇ ನನಗೆ ಶತ್ರುವಾದ್ರು..’ – ಆಪ್ತರ ಬಳಿ ಬಿಎಸ್‍ವೈ ಭಾವುಕ..!