Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿಎಂ ಭೇಟಿಯಾದ ಅಖಂಡ ಶ್ರೀನಿವಾಸ್- ಗಲಭೆ ಸಿಬಿಐ ತನಿಖೆಗೆ ವಹಿಸುವಂತೆ ಆಗ್ರಹ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಿಎಂ ಭೇಟಿಯಾದ ಅಖಂಡ ಶ್ರೀನಿವಾಸ್- ಗಲಭೆ ಸಿಬಿಐ ತನಿಖೆಗೆ ವಹಿಸುವಂತೆ ಆಗ್ರಹ

Bengaluru City

ಸಿಎಂ ಭೇಟಿಯಾದ ಅಖಂಡ ಶ್ರೀನಿವಾಸ್- ಗಲಭೆ ಸಿಬಿಐ ತನಿಖೆಗೆ ವಹಿಸುವಂತೆ ಆಗ್ರಹ

Public TV
Last updated: August 17, 2020 6:18 pm
Public TV
Share
3 Min Read
CM AKHANDA 1
SHARE

– ಭದ್ರತೆ ಹೆಚ್ಚಳಕ್ಕೂ ಸಿಎಂ ಬಳಿ ಮನವಿ
– ಕಾಂಗ್ರೆಸ್ ಬಿಡೋ ಮಾತೇ ಇಲ್ಲ

ಬೆಂಗಳೂರು: ಡಿಜೆ ಹಳ್ಳಿ, ಕೆಜೆ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಯಡಿಯೂರಪ್ಪ ಅವರನ್ನು ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಭೇಟಿ ಮಾಡಿದ್ದಾರೆ.

AKHANDA 1 medium

ಘಟನೆಯ ಬಳಿಕ ಮೊದಲ ಬಾರಿಗೆ ಶಾಸಕ ಅರವಿಂದ ಲಿಂಬಾವಳಿ ಜೊತೆ ಬಂದು ಕಾವೇರಿ ನಿವಾಸದಲ್ಲಿ ಸಿಎಂ ಭೇಟಿಯಾದ ಅಖಂಡ, ಗಲಭೆ ಕುರಿತು ಬಿಎಸ್‍ವೈ ಜೊತೆ ಚರ್ಚೆ ನಡೆಸಿದ್ದಾರೆ. ಪ್ರಕರಣದ ಬಗ್ಗೆ ಸಿಎಂ ಬಿಎಸ್‍ವೈಗೆ ಅಖಂಡ ವಿವರಣೆ ನೀಡಿದ್ದಾರೆ.

ಈ ಗಲಭೆ ಪ್ರಮುಖ ಕಾರಣ ಯಾರು, ಗಲಭೆ ನಡೆದ ದಿನದಿಂದ ಇಲ್ಲಿವರೆಗೂ ಆಗಿರುವ ಬೆಳವಣಿಗೆ, ಪ್ರಕರಣದ ಕುರಿತು ತನಿಖೆ ಬಗ್ಗೆ ಚರ್ಚೆ ಮಾಡಿದ್ದಾರೆ. ಎಸ್‍ಡಿಪಿಐ ಸಂಘಟನೆಯ ಕೈವಾಡ ಹಾಗೂ ಸ್ಥಳೀಯ ನಾಯಕರ ಆಂತರಿಕ ಭಿನ್ನಾಭಿಪ್ರಾಯ ಸೇರಿದಂತೆ ಹಲವು ವಿಷಯಗಳ ಗಳ ಬಗ್ಗೆ ಸಿಎಂಗೆ ಮಾಹಿತಿ ನೀಡಿದ್ದಾರೆ. ಈ ವೇಳೆ ಮುಂದೆ ಯಾವ ರೀತಿ ತನಿಖೆ ನಡೆಸಬೇಕು ಎಂಬುದರ ಬಗ್ಗೆಯೂ ಸಮಾಲೋಚನೆ ನಡೆಸಲಾಗಿದೆ.

CM AKHANDA medium

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅಖಂಡ, ಭದ್ರತೆ ಹೆಚ್ಚಳಕ್ಕೆ ಮನವಿ ಮಾಡಿದ್ದೇನೆ. ಸಿಬಿಐ ತನಿಖೆ ಮಾಡಿಸುವಂತೆ ಕೇಳಿಕೊಂಡಿದ್ದೇನೆ. ತನಿಖೆ ಬಳಿಕ ಪರಿಶೀಲಿಸಿ ನೋಡೋದಾಗಿ ಸಿಎಂ ಹೇಳಿದ್ದಾರೆ. ಯಾರೇ ಇದ್ರೂ ತಪ್ಪಿತಸ್ಥರನ್ನು ಬಂಧಿಸಲು ಮನವಿ ಮಾಡಿದ್ದೇನೆ ಎಂದರು.

ನನಗೆ ಸರ್ಕಾರ ಇನ್ನೂ ಪೊಲೀಸ್ ಭದ್ರತೆ ಕೊಟ್ಟಿಲ್ಲ. ನನ್ನ ಮನೆಗೆ ಭದ್ರತೆ ಕೊಟ್ಟಿದ್ದಾರೆ. ಭದ್ರತೆ ವಿಚಾರದಲ್ಲಿ ಸರ್ಕಾರ ಸ್ಪಂದಿಸಿಲ್ಲ ಎಂದು ಇದೇ ವೇಳೆ ಅಖಂಡ ಆರೋಪ ಮಾಡಿದರು. ಮೊನ್ನೆ ಸಿಎಂ ಜೊತೆ ಫೋನಲ್ಲಿ ಮಾತಾಡಿದ್ದೆ. ನಮ್ಮನೆ ಅಕ್ಕ-ಪಕ್ಕ ಮನೆ, ವಾಹನಗಳನ್ನು ಸುಟ್ಟಿದ್ದಾರೆ. ಇವರಿಗೆಲ್ಲ ಪರಿಹಾರ ಕೊಡಲು ಸಿಎಂಗೆ ಮನವಿ ಮಾಡಿಕೊಂಡಿದ್ದೇನೆ. ಅಪರಾಧಿಗಳು ಯಾರೇ ಇರಲಿ, ಎಷ್ಟೇ ಪ್ರಭಾವಿಗಳಿದ್ರೂ ಶಿಕ್ಷೆ ಆಗಲೇಬೇಕು ಎಂದು ಕಟುವಾಗಿ ಹೇಳಿದರು.

CM AKHANDA 2 medium

ಇದೇ ವೇಳೆ ಮಾಜಿ ಶಾಸಕ ಪ್ರಸನ್ನಕುಮಾರ್ ಮತ್ತೆ ಕಾಂಗ್ರೆಸ್ ಸೇರೋ ವಿಚಾರ ಸಂಬಂಧ ಪ್ರತಿಕ್ರಿಯಿಸಿದ ಅಖಂಡ,ಪ್ರಸನ್ನಕುಮಾರ್ ಕಾಂಗ್ರೆಸ್ ಸೇರೋ ವಿಷಯ ನನಗೆ ಗೊತ್ತೇ ಇಲ್ಲ. ನನ್ನ ಗಮನಕ್ಕೂ ಬಂದಿಲ್ಲ. ಪ್ರಸನ್ನಕುಮಾರ್ ಸೇರ್ಪಡೆಯಿಂದ ನನಗೆ ತೊಂದರೆ ಇಲ್ಲ. ಕಾಂಗ್ರೆಸ್ಸಿಗೆ ಯಾರು ಬೇಕಾದರೂ ಬರಬಹುದು. ಪ್ರಸನ್ನಕುಮಾರ್ ಕಾಂಗ್ರೆಸ್ ಸೇರೋ ವಿಷಯ ಅಧ್ಯಕ್ಷರಿಗೆ ಬಿಟ್ಟಿದು ಎಂದು ತಿಳಿಸಿದರು.

ಆದರೆ ಪ್ರಸನ್ನಕುಮಾರ್ ಅವರು ಕಾಂಗ್ರೆಸ್ ಸೇರಲು ಬಯಸಿರುವ ವಿಷಯ ಅಖಂಡ ಶ್ರೀನಿವಾಸ್ ಗಮನಕ್ಕೆ ತಂದಿರೋದಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಈ ಹಿಂದೆ ತಿಳಿಸಿದ್ದರು. ಪ್ರಸನ್ನಕುಮಾರ್ ಸೇರ್ಪಡೆಗೆ ಅಖಂಡ ವಿರೋಧ ಇಲ್ಲ ಅಂದಿದ್ದರು. ಆದರೆ ಈಗ ಪ್ರಸನ್ನಕುಮಾರ್ ಮತ್ತೆ ಬರೋ ವಿಷಯ ನನಗೆ ಗೊತ್ತಿಲ್ಲ ಎಂದು ಅಖಂಡ ಹೇಳುತ್ತಿದ್ದಾರೆ. ಇದನ್ನು ಗಮನಿಸಿದರೆ ಡಿಕೆಶಿ ಸುಳ್ಳು ಹೇಳಿದ್ರಾ?, ಸುಳ್ಳೇ ಹೇಳಿದ್ರೂ ಯಾಕೆ ಹೇಳಿದ್ರು ಎಂಬ ಪ್ರಶ್ನೆ ಮೂಡಿದೆ.

AKHANDA 1 1 medium

ನಾನು ಕಾಂಗ್ರೆಸ್ ಬಿಡಲ್ಲ. ನಮ್ಮ ತಂದೆಯೂ ಕಾಂಗ್ರೆಸ್ಸಿನಲ್ಲೇ ಇದ್ದಿದ್ದು. ಹೀಗಾಗಿ ನಾನು ಕಾಂಗ್ರೆಸ್ ಪಕ್ಷ ಬಿಡೋ ಮಾತೇ ಇಲ್ಲ. ನನ್ನ ರಕ್ತದಲ್ಲಿ ಇರೋದು ಕಾಂಗ್ರೆಸ್. ನನ್ನ ರಕ್ಷಣೆಗೆ ಸರ್ಕಾರ ಸೇರಿದಂತೆ ನಮ್ಮ ಪಕ್ಷದ ನಾಯಕರು ಬರಬೇಕು. ಸಿಎಲ್‍ಪಿ ನಾಯಕ ಸಿದ್ದರಾಮಯ್ಯ ಸೇರಿದಂತೆ ಡಿಕೆ ಶಿವಕುಮಾರ್ ನನ್ನ ರಕ್ಷಣೆಗೆ ಬರಬೇಕು. ನನ್ನ ಮೇಲೆ ಯಾರಿಂದಲೂ ಒತ್ತಡ ಇಲ್ಲ, ಯಾವ ಒತ್ತಡವೂ ಇಲ್ಲ ಎಂದರು.

ಬಿಜೆಪಿ ಶಾಸಕರ ಜೊತೆ ಸಿಎಂ ಭೇಟಿಗೆ ಬಂದ ವಿಚಾರದ ಕುರಿತು ಸ್ಪಷ್ಟನೆ ನೀಡಿದ ಅವರು, ನಮ್ಮ ಭೋವಿ ಸಮಾಜದ ಮುಖಂಡರ ಜೊತೆ ನಾನು ಸಿಎಂ ಭೇಟಿಗೆ ಆಗಮಿಸಿದೆ. ನಮ್ಮ ಸಮಾಜದ ಮುಖಂಡರು ಇದ್ದರು. ಅರವಿಂದ ಲಿಂಬಾವಳಿ ಭೋವಿ ಜನಾಂಗದ ಶಾಸಕರು. ನಮ್ಮ ಜನಾಂಗದ ಶಾಸಕರ ಜೊತೆ ನಾನು ಬಂದಿದ್ದೇನೆ. ಭೋವಿ ಜನಾಂಗದ ಅಧ್ಯಕ್ಷ ಮಾಕಳಿ ರವಿಯವರು ಬಂದಿದ್ದಾರೆ. ಅವರ ಜೊತೆಯಲ್ಲಿ ನಾನು ಬಂದು ಸಿಎಂ ಭೇಟಿ ಮಾಡಿದ್ದೇನೆ ಅಷ್ಟೇ ಎಂದರು.

TAGGED:Akhanda Srinivasa MurthybengaluruBengaluru Riotsbs yeddyurappacongressMLAಅಖಂಡ ಶ್ರೀನಿವಾಸ ಮೂರ್ತಿಕಾಂಗ್ರೆಸ್ಬಿಎಸ್ ಯಡಿಯೂರಪ್ಪಬೆಂಗಳೂರುಬೆಂಗಳೂರು ಗಲಭೆಶಾಸಕ
Share This Article
Facebook Whatsapp Whatsapp Telegram

Cinema news

sri krishna mutt pawan kalyan
ಡಿ.7 ರಂದು ಶ್ರೀ ಕೃಷ್ಣಮಠದ ಗೀತೋತ್ಸವ ಸಮಾರೋಪಕ್ಕೆ ಪವನ್‌ ಕಲ್ಯಾಣ್‌
Cinema Latest Main Post South cinema Udupi
Jhanvi Dhruvanth Bigg Boss Kannada 12
ಗತಿಗೆಟ್ಟ ಮನಸ್ಥಿತಿಯ ಧ್ರುವಂತ್‌ಗೆ ನಾನ್ ಕೆಲಸ ಕೊಡ್ತೀನಿ ಎಂದ ಜಾನ್ವಿ
Cinema Latest Top Stories TV Shows
bigg boss season 12 kannada Jhanvi is out of Bigg Boss
ಜೊತೇಲಿ ಇದ್ಕೊಂಡು ಬೆನ್ನಿಗೆ ಚೂರಿ ಹಾಕೋವ್ರೇ ಜಾಸ್ತಿ: ಬಿಗ್‌ ಬಾಸ್ ಜಾನ್ವಿ
Cinema Latest Top Stories TV Shows
Director S Shankar
1,000 ಕೋಟಿ ಬಜೆಟ್‌ನಲ್ಲಿ ನಿರ್ಮಾಣವಾಗಲಿದೆ ನಿರ್ದೇಶಕ ಶಂಕರ್ ಸಿನಿಮಾ..!
Cinema Latest Top Stories

You Might Also Like

Bagalkote accident
Bagalkot

ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್‌ ಹಿಂಬದಿಗೆ ಕಾರು ಡಿಕ್ಕಿ – ನಾಲ್ವರು ದುರ್ಮರಣ

Public TV
By Public TV
4 minutes ago
Dharmasthala Chinnayya 2
Dakshina Kannada

ಬುರುಡೆ ತಂದವರು ಯಾರು? – ಚಿನ್ನಯ್ಯನಿಗೆ ಜಾಮೀನು ನೀಡಿದ್ದಕ್ಕೆ ಕಾರಣ ನೀಡಿದ ಕೋರ್ಟ್

Public TV
By Public TV
47 minutes ago
DCF Paramesh
Districts

42 ದಿನಗಳಲ್ಲಿ ಕಾಡಿನಿಂದ ನಾಡಿಗೆ ಬಂದ 22 ಹುಲಿ ಸೆರೆ: ಮೈಸೂರು ಡಿಸಿಎಫ್‌

Public TV
By Public TV
50 minutes ago
bmtc electric bus
Bengaluru City

ಬೆಂಗಳೂರಿಗೆ ಮೋದಿ 5,700 ಇ-ಬಸ್‌ ಗಿಫ್ಟ್ – ತೇಜಸ್ವಿ ಸೂರ್ಯ ಹರ್ಷ

Public TV
By Public TV
2 hours ago
Siddaramaiah 8
Bengaluru City

ಇಂದು ಸಿಎಂ ಸಿದ್ದರಾಮಯ್ಯ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ

Public TV
By Public TV
2 hours ago
Hemant Soren Kalpana Soren
Latest

ಜಾರ್ಖಂಡ್‌ನಲ್ಲಿ ಜೆಎಂಎಂ, ಬಿಜೆಪಿ ಮೈತ್ರಿ ಸರ್ಕಾರ?

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?