ಸಿಎಂ ಯಡಿಯೂರಪ್ಪ ಆಸ್ಪತ್ರೆಗೆ ದಾಖಲು

Public TV
1 Min Read
BSY 2

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಹೌದು. ಕೋವಿಡ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ತುರ್ತು ಸಭೆ ನಡೆಸಿದ್ದರು. ಆ ಬಳಿಕ ಸಿಎಂ ನಗರದ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದಾರೆ.

BSY 1 3

ಆಸ್ಪತ್ರೆ ವೈದ್ಯರು ಯಡಿಯೂರಪ್ಪ ಅವರ ಆರೋಗ್ಯ ತಪಾಸಣೆ ನಡೆಸುತ್ತಿದ್ದಾರೆ. ಜ್ವರದ ಹಿನ್ನೆಲೆಯಲ್ಲಿ ಚೆಕಪ್ ನಡೆಸಲಾಗುತ್ತಿದೆ. ಅಗತ್ಯ ಬಿದ್ದರೆ ಆಸ್ಪತ್ರೆಯಲ್ಲಿ ಅಡ್ಮಿಟ್ ಆಗುವ ಸಾಧ್ಯತೆಗಳಿವೆ. ವೈದ್ಯರ ಸಲಹೆಯ ಮೇರೆಗೆ ಎರಡು ದಿನ ವಿಶ್ರಾಂತಿ ಪಡೆಯಲಿದ್ದಾರೆ.

BSY 1 2

ಮೂರು ದಿನಗಳ ಹಿಂದೆಯಷ್ಟೇ ಬೆಳಗಾವಿ ಚುನಾವಣಾ ಪ್ರಚಾರದ ಬ್ಯುಸಿಯಾಗಿದ್ದ ಸಿಎಂ ಅವರ ಆರೋಗ್ಯದಲ್ಲಿ ಏರುಪೇರಾಗಿತ್ತು. ಕೂಡಲೇ ವೈದ್ಯರು ಸಿಎಂ ಉಳಿದುಕೊಂಡಿದ್ದ ಹೋಟೆಲ್ ಗೆ ತೆರಳಿ ವೈದ್ಯಕೀಯ ತಪಾಸಣೆ ನಡೆಸಿದ್ದರು. ಆ ಬಳಿಕವೂ ಸಿಎಂ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದರು. ನಂತರ ಬೆಂಗಳೂರಿಗೆ ಮರಳಿದ್ದರು. ಅಲ್ಲದೆ ಇಂದು ತುರ್ತು ಸಭೆ ಕರೆದಿದ್ದರು.

ಈ ಹಿಂದೆ ಸಿಎಂ ಅವರಿಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡು ಗುಣಮುಖರಾಗಿದ್ದರು. ಈ ಹಿನ್ನೆಲೆಯಲ್ಲಿ ಆರೋಗ್ಯದಲ್ಲಿ ವ್ಯತ್ಯಾಸ ಉಂಟಾದಾಗ ಮತ್ತೆ ಟೆಸ್ಟ್ ಮಾಡಿಸಿದ್ದು, ಅದರಲ್ಲಿ ನೆಗೆಟಿವ್ ಬಂದಿತ್ತು.

Share This Article
Leave a Comment

Leave a Reply

Your email address will not be published. Required fields are marked *