-ಉ.ಪ್ರದೇಶದಲ್ಲಿ ಕಿಡ್ನ್ಯಾಪ್ ಬ್ಯುಸಿನೆಸ್ ಆಗಿದೆ
ಲಕ್ನೋ: ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಶನಿವಾರ ಪತ್ರದ ಮೂಲಕ ಸಿಎಂ ಯೋಗಿ ಆದಿತ್ಯನಾಥ್ ಸರ್ಕಾರವನ್ನು ತರಾಟೆ ತೆಗೆದುಕೊಂಡಿದ್ದಾರೆ. ರಾಜ್ಯದಲ್ಲಿ ಕಿಡ್ನ್ಯಾಪ್ ಕೆಲವರು ಉದ್ಯೋಗವನ್ನಾಗಿ ಮಾಡಿಕೊಂಡಿದ್ದು, ಜನತೆ ಭಯದಲ್ಲಿ ಜೀವನ ಮಾಡುವಂತಾಗಿದೆ ಎಂದು ಕಿಡಿಕಾರಿದ್ದಾರೆ.
Advertisement
ನಾನು ಇದಕ್ಕೂ ಮೊದಲು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯ ಕುರಿತು ಪತ್ರ ಬರೆದಿದ್ದೇನೆ. ರಾಜ್ಯದಲ್ಲಿ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಸಾರ್ವಜನಿಕರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಅಪರಾಧಿಗಳಿಗೆ ಕಾನೂನಿನ ಭಯ ಇಲ್ಲದಂತಾಗಿದ್ದು, ಕ್ರಿಮಿನಲ್ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.
Advertisement
Advertisement
ಪತ್ರದಲ್ಲಿ ಸಂಭಲ್ ಜಿಲ್ಲೆಯ ಅವತಾರ್ ಶರ್ಮಾ ಪ್ರಕರಣವನ್ನು ಪ್ರಿಯಾಂಕಾ ಗಾಂಧಿ ಉಲ್ಲೇಖಿಸಿದ್ದಾರೆ. ಶರ್ಮಾ ಮನೆಯ ಹಿಂದಿರುಗುತ್ತಿದ್ದ ಮಾರ್ಗ ಮಧ್ಯೆ ದುಷ್ಕರ್ಮಿಗಳು ಶೂಟ್ ಮಾಡಿ ಕೊಲೆಗೈದು, ನಂತರ ಅವರ ಬಳಿಯಲ್ಲಿದ್ದ ನಗದು ಒಂದು ಲಕ್ಷ ರೂ. ತೆಗೆದುಕೊಂಡು ಪರಾರಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹಂತಕರನ್ನು ಬಂಧಿಸಿ ಶರ್ಮಾ ಕುಟುಂಬಕ್ಕೆ ನ್ಯಾಯ ಕೊಡಿಸಬೇಕೆಂದು ಪ್ರಿಯಾಂಕಾ ಗಾಂಧಿ ಆಗ್ರಹಿಸಿದ್ದಾರೆ.
Advertisement
ಇನ್ನೂ ಟ್ವಿಟ್ಟರ್ ಮೂಲಕ ಸಹ ಸರ್ಕಾರದ ವಿರುದ್ಧ ಕಿಡಿಕಾರಿರುವ ಪ್ರಿಯಾಂಕಾ ಗಾಂಧಿ, ಉತ್ತರ ಪ್ರದೇಶ ಗೂಂಡಾಗಳ ರಾಜ್ಯವಾಗ್ತಿದ್ದು, ಕ್ರೈಂ ಮತ್ತು ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯಾಗ್ತಿದೆ. ಕಾನ್ಪುರ, ಗೊರಖಪುರ, ಬುಲಂದ್‍ಶಹರ್ ಗಳಲ್ಲಿ ಕಾನೂನು ವ್ಯವಸ್ಥೆ ಕಾಪಾಡುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಇನ್ನೆಷ್ಟು ದಿನ ಸರ್ಕಾರ ಮಲಗೋದು ಎಂದು ಪ್ರಶ್ನೆ ಮಾಡಿದ್ದಾರೆ.