ಬೆಂಗಳೂರು: ಇಂದು ರಾಜ್ಯಕ್ಕೆ ಆಗಮಿಸುತ್ತಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನ ಭೇಟಿಯಾಗಿ ಸಿಎಂ ಯಡಿಯೂರಪ್ಪ ವಿರುದ್ಧ ದೂರು ನೀಡಲು ಬಿಜೆಪಿ ಶಾಸಕರ ಟೀಂ ರೆಡಿಯಾಗಿದೆ ಎಂದು ತಿಳಿದು ಬಂದಿದೆ. ಬಿಜೆಪಿ ಶಾಸಕರ ಟೀಂ ಅಮಿತ್ ಶಾ ಭೇಟಿಗೆ ಸಮಯ ಕೇಳಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಕೊರೊನಾ ಸಂಕಷ್ಟ ಕಾಲದಲ್ಲಿ ಹೆಚ್ಚಿನ ಅನುದಾನ ನೀಡಲು ಸಾಧ್ಯವಿಲ್ಲ ಅಂತ ಸಿಎಂ ಹೇಳಿದ್ದರು. ಇದೇ ವಿಚಾರಕ್ಕೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಹಿರಂಗವಾಗಿಯೇ ಅಸಮಾಧಾನ ಹೊರ ಹಾಕಿದ್ದರು. ಬಿಜೆಪಿ ಶಾಸಕರಿಗೆ ಸಮಾನವಾಗಿಯೂ ಅನುದಾನ ಹಂಚಿಕೆ ಮಾಡಿಯೇ ಇಲ್ಲ. ಕಾಂಗ್ರೆಸ್‍ನ ಹಲವು ಶಾಸಕರಿಗೆ ನೂರಾರು ಕೋಟಿ ಶಿಫಾರಸ್ಸು ಮಾಡಿದ್ದಾರೆ. ಸಿಎಂ ಯಡಿಯೂರಪ್ಪ ಅವರ ಕಾರ್ಯವೈಖರಿ ಬಗ್ಗೆ ಮೌಲ್ಯಮಾಪನ ಮಾಡಿ ಎಂದು ಮನವಿ ಮಾಡಲು ಶಾಸಕರ ಟೀಂ ನಿರ್ಧರಿಸಿದೆ ಎನ್ನಲಾಗಿದೆ. ಇದನ್ನೂ ಓದಿ: ಜಮೀರ್ ಕ್ಷೇತ್ರಕ್ಕೆ ದಿಢೀರ್ 200 ಕೋಟಿ ಅನುದಾನ ಬಿಡುಗಡೆಗೆ ಗ್ರೀನ್ ಸಿಗ್ನಲ್
ಶಾಸಕ ಜಮೀರ್ ಅಹ್ಮದ್ ಖಾನ್ ಕ್ಷೇತ್ರಕ್ಕೆ ಅನುದಾನ ಬಿಡುಗಡೆ ಮಾಡಿಲ್ಲ. ಈ ವಿಷಯ ಸತ್ಯಕ್ಕೆ ದೂರವಾದ ಮಾತು. ಇದುವರೆಗೂ ಯಾವುದೇ ಅನುದಾನ ಬಿಡುಗಡೆ ಮಾಡಿಲ್ಲ ಎಂದು ತನ್ನ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಚಾಮರಾಜಪೇಟೆಯ ಶಾಸಕ ಜಮೀರ್ ಅಹಮದ್ 200 ಕೋಟಿ ರೂ. ಅನುದಾನ ಬಿಡುಗಡೆ ಮಾಡಬೇಕೆಂದು ಮನವಿ ಮಾಡಿದ್ದರು. ಈ ಮನವಿಗೆ ಒಪ್ಪಿಗೆ ನೀಡಿದ ಸಿಎಂ ಈ ಪತ್ರವನ್ನು ಹಣಕಾಸು ಇಲಾಖೆಗೆ ರವಾನಿಸಿದ ಬಗ್ಗೆ ವರದಿ ಪಬ್ಲಿಕ್ ಟಿವಿ ಮಾಡಿತ್ತು.