ಬೆಂಗಳೂರು: ಇಂದು ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಸಿಎಂ ಯಡಿಯೂರಪ್ಪ ವಿರುದ್ಧ ಸಿಡಿದೆದ್ದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ದೆಹಲಿಗೆ ಬರುವಂತೆ ಹೈಕಮಾಂಡ್ ಬುಲಾವ್ ನೀಡಿದೆ. ಈ ಹಿನ್ನೆಲೆ ರಾತ್ರಿ 9.30ಕ್ಕೆ ಬಸನಗೌಡ ಪಾಟೀಲ್ ಯತ್ನಾಳ್ ದೆಹಲಿಯತ್ತ ಪ್ರಯಾಣ ಬೆಳೆಸಿದ್ದಾರೆ.
ಕೆಲ ದಿನಗಳ ಹಿಂದೆ ಪಕ್ಷ ವಿರೋಧಿ ಹೇಳಿಕೆ ಹಿನ್ನೆಲೆ ಬಿಜೆಪಿ ಹೈಕಮಾಂಡ್ ಯತ್ನಾಳ್ ಅವರಿಗೆ ಶೋಕಾಸ್ ನೋಟಿಸ್ ನೀಡಿತ್ತು. ಈ ನೋಟಿಸ್ ಗೆ ಯತ್ನಾಳ್ 25 ಪುಟಗಳ ಸುದೀರ್ಘವಾದ ಉತ್ತರ ಸಹ ನೀಡಿದ್ದರು. ಇಂದು ಪ್ರತಿಭಟನೆಯಲ್ಲಿ ಭಾಗಿ ಸರ್ಕಾರದ ವಿರುದ್ಧವೇ ತೀಕ್ಷ್ಣವಾಗಿ ವಾಗ್ದಾಳಿ ನಡೆಸಿದ್ದರು. ಈ ಹಿನ್ನೆಲೆಯೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ದೆಹಲಿಗೆ ಬರುವಂತೆ ಸೂಚನೆ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
Advertisement
Advertisement
ಕಳೆದ ಹಲವು ತಿಂಗಳಿಂದ ಬಿಎಸ್‍ವೈ, ಸರ್ಕಾರ, ಸಚಿವರ ವಿರುದ್ಧ ವಾಗ್ದಾಳಿ ನಡೆಸುತ್ತಿರುವ ಯತ್ನಾಳ್ ದೆಹಲಿ ಪ್ರವಾಸ ರಾಜ್ಯ ರಾಜಕಾರಣದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.