ಶಿವಮೊಗ್ಗ: ಸಿಐಡಿ ಎಸ್‍ಪಿ ಭೀಮಾಶಂಕರ್ ಗುಳೇದ ಅವರ ಕಾರು ದ್ವಿಚಕ್ರ ವಾಹನಕ್ಕೆ ಢಿಕ್ಕಿಯಾದ ಘಟನೆ ಶಿವಮೊಗ್ಗದ ಆಲ್ಕೋಳ ವೃತ್ತದ ಬಳಿ ನಡೆದಿದೆ.
ಅಪಘಾತದ ಪರಿಣಾಮ ದ್ವಿಚಕ್ರ ವಾಹನ ಸವಾರನಿಗೆ ಗಾಯಗಳಾಗಿದೆ. ಘಟನೆ ನಡೆದ ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಗಾಯಾಳು ಬೈಕ್ ಸವಾರನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.
ಶಿವಮೊಗ್ಗದಲ್ಲಿ ನಡೆದಿದ್ದ ಅಹಿತಕರ ಘಟನೆ ಹಿನ್ನೆಲೆಯಲ್ಲಿ ಬಂದೋಬಸ್ತ್ ಕರ್ತವ್ಯಕ್ಕೆ ಸಿಎಡಿ ಎಸ್‍ಪಿ ಆಗಮಿಸಿದ್ದರು. ಈ ವೇಳೆ ದುರ್ಘಟನೆ ನಡೆದಿದೆ. ಸ್ಥಳಕ್ಕೆ ಶಿವಮೊಗ್ಗ ಎಸ್ ಪಿ ಕೆ.ಎಂ ಶಾಂತರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.