ಬೆಂಗಳೂರು: ಸ್ಯಾಂಡಲ್‌ವುಡ್ ಡ್ರಗ್ಸ್ ಪ್ರಕರಣದಲ್ಲಿ ಕೊನೆಗೂ ನಟಿ ರಾಗಿಣಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಇಂದು ಬೆಳಗ್ಗೆ ಮನೆ ಮೇಲೆ ದಾಳಿ ಮಾಡಿದ ಬಳಿಕ ರಾಗಿಣಿ ಸಿಸಿಬಿ ಪೊಲೀಸರ ವಶದಲ್ಲೇ ಇದ್ದರು. ಮಧ್ಯಾಹ್ನದಿಂದ ಪೊಲೀಸರು ನಿರಂತರ ವಿಚಾರಣೆ ನಡೆಸುತ್ತಿದ್ದರು.
Advertisement
ಸಂಜೆ ನಗರ ಪೊಲೀಸ್ ಆಯುಕ್ತ ಕಮಲ್‌ಪಂತ್ ಸುದ್ದಿಗೋಷ್ಠಿ ನಡೆಸಿ ರವಿಶಂಕರ್ ಮತ್ತು ರಾಹುಲ್ ಇಬ್ಬರನ್ನು ಅರೆಸ್ಟ್ ಮಾಡಿದ್ದೇವೆ. ರಾಗಿಣಿಯ ಮೇಲೆ ಎಫ್ಐಆರ್ ದಾಖಲಾಗಿದೆ ಎಂದು ತಿಳಿಸಿದ್ದರು. ಇದನ್ನೂ ಓದಿ: ಎಷ್ಟು ವಿಚಾರಣೆ ಮಾಡ್ತೀರಿ? ಬೇಗ ಕಳುಹಿಸಿ – ಅಧಿಕಾರಿಯ ಮೇಲೆ ಪ್ರಭಾವಿ ರಾಜಕಾರಣಿ ಒತ್ತಡ
Advertisement
Advertisement
ಎಫ್‌ಐಆರ್ ದಾಖಲಾದ ಬಳಿಕ ರಾಗಿಣಿ ಬಂಧನ ಯಾಕೆ ನಡೆದಿಲ್ಲ ಎಂಬ ಪ್ರಶ್ನೆ ಎದ್ದಿತ್ತು. ಈ ನಡುವೆ ಪ್ರಭಾವಿ ರಾಜಕಾರಣಿಯೊಬ್ಬರು ರಾಗಿಣಿಯನ್ನು ಬಂಧಿಸದಂತೆ ಒತ್ತಡ ಹೇರುತ್ತಿದ್ದಾರೆ ಎಂಬ ವಿಚಾರ ಮೂಲಗಳಿಂದ ಪಬ್ಲಿಕ್ ಟಿವಿಗೆ ಸಿಕ್ಕಿತ್ತು. ಆದರೆ ಪ್ರಭಾವಿ ರಾಜಕಾರಣಿಯ ಒತ್ತಡಕ್ಕೆ ಬಗ್ಗದ ಪೊಲೀಸರು ಕೊನೆಗೂ ರಾಗಿಣಿಯನ್ನು ಬಂಧಿಸಿದ್ದಾರೆ.
Advertisement
ಆರೋಪಿಗಳು ಡ್ರಗ್ಸ್ ದಂಧೆಯಲ್ಲಿ ರಾಗಿಣಿ ಪಾತ್ರ ಇದೆ ಎಂದು ಹೇಳಿದ್ದರೂ ಸರಿಯಾದ ಸಾಕ್ಷ್ಯಗಳು ಸಿಕ್ಕಿರಲಿಲ್ಲ. ಆದರೆ ಇಂದು ಮನೆಯ ಮೇಲೆ ನಡೆದ ದಾಳಿ ವೇಳೆ ಡ್ರಗ್ಸ್ ಪತ್ತೆಯಾಗಿತ್ತು. ಇದು ಪ್ರಬಲವಾದ ಸಾಕ್ಷ್ಯವಾಗಿದ್ದರಿಂದ ಪೊಲೀಸರು ಸಂಜೆ ರಾಗಿಣಿಯನ್ನು ಅರೆಸ್ಟ್ ಮಾಡಿದ್ದಾರೆ.
ಬಂಧನ ಭೀತಿಯಿಂದ ಪಾರಾಗಲು ಆರೋಪಿಯಾಗಿರುವ ನಟಿ ರಾಗಿಣಿ ಇಂದು ಕೋರ್ಟ್ ಮೊರೆ ಹೋಗಿದ್ದರು. ಬೆಂಗಳೂರಿನ ಸೆಷನ್ಸ್ ಕೋರ್ಟ್‌ಗೆ ರಾಗಿಣಿ ಪರ ವಕೀಲರು ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡದೇ ಸಿಸಿಬಿ ಪೊಲೀಸರಿಗೆ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿದೆ. ಸೆ.7ಕ್ಕೆ ವಿಚಾರಣೆಯನ್ನು ಮುಂದೂಡಿದೆ. ಈಗ ಪೊಲೀಸರು ಪ್ರಕರಣದಲ್ಲಿ ಬಂಧನ ಮಾಡಿದ ಕಾರಣ ಜಾಮೀನು ಕೋರಿ ರಾಗಿಣಿ ಮತ್ತೆ ಹೊಸದಾಗಿ ಅರ್ಜಿ ಸಲ್ಲಿಸಬೇಕಾಗುತ್ತದೆ.
ಸ್ಯಾಂಡಲ್‍ವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ ಮೇಲೆ ಕಾಟನ್‍ಪೇಟೆ ಪೊಲೀಸ್ ಠಾಣೆಯಲ್ಲಿ ಸ್ವಯಂ ಪ್ರೇರಿತ ಎಫ್‍ಐಆರ್ ದಾಖಲಾಗಿದೆ. ಸಿಸಿಬಿಯ ನಾರ್ಕೊಟಿಕ್ಸ್ ಎಸಿಪಿ ಗೌತಮ್ ದೂರಿನ ಆಧಾರದ ಮೇಲೆ ಎಫ್ಐಆರ್ ದಾಖಲಾಗಿದೆ. ಬಂಧಿತ ಆರೋಪಿಗಳೊಂದಿಗೆ ಸಂಪರ್ಕ ಹೊಂದಿದ್ದ ಬಗ್ಗೆ ಸಾಕ್ಷಿ ಹಾಗೂ ಪುರಾವೆಗಳು ಸಿಕ್ಕಿರುವ ಹಿನ್ನೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ವಾಟ್ಸಾಪ್ ಮೆಸೇಜ್‍ಗಳು ಹಾಗೂ ಪೆಡ್ಲರ್ ಗಳ ನೀಡಿರುವ ಮಾಹಿತಿ ಅನ್ವಯ ನಟಿ ರಾಗಿಣಿ ಅವರ ಕೈವಾಡದ ಬಗ್ಗೆ ಸಾಕ್ಷಿ ಲಭ್ಯವಾಗಿದ್ದು, ಡ್ರಗ್ ಡೀಲರ್ ಗಳ ಜೊತೆ ಒಡನಾಟವನ್ನು ಹೊಂದಿದ್ದಾರೆ. ಅನೇಕ ಬಾರಿ ಡ್ರಗ್ ಡೀಲ್ ಮಾಡಿರುವ ಬಗ್ಗೆ ಮಾಹಿತಿ ಖಚಿತವಾದ ಹಿನ್ನೆಲೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು.