ಬೆಂಗಳೂರು: ಮಾಜಿ ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ, ಸಿಡಿ ವಿವಾದದ ತನಿಖೆಗೆ ನಡೆಸುವಂತೆ ಸರ್ಕಾರದ ಮೇಲೆ ಒತ್ತಡ ಹೇರಿದ ವಿಚಾರ ಮೂಲಗಳಿಂದ ತಿಳಿದು ಬಂದಿದೆ.
ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಜೊತೆ ದೂರವಾಣಿ ಕರೆ ಮೂಲಕ ಮಾತನಾಡಿರುವ ಜಾರಕಿಹೊಳಿ ತನಿಖೆ ಆಗಲೇಬೇಕು ಎಂದು ಪಟ್ಟು ಹಿಡಿದು ಶೀಘ್ರ ತನಿಖೆಗೆ ಆದೇಶಿಸುವಂತೆ ಆಗ್ರಹಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸರ್ಕಾರ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸುವ ಬಹುತೇಕ ಸಾಧ್ಯತೆ ಇದೆ.
ಈ ಬಗ್ಗೆ ಬೆಳಗ್ಗೆ ಸಿಎಂ ಬಿಎಸ್‍ವೈ ಪ್ರತಿಕ್ರಿಯಿಸಿದ್ದು, ತನಿಖೆ ಬಗ್ಗೆ ನಿನ್ನೆ ಮನವಿ ಕೊಟ್ಟಿದ್ದಾರೆ. ಗೃಹ ಸಚಿವ ಬೊಮ್ಮಾಯಿ ಅವರು ಸೂಕ್ತ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದು ಹೇಳಿದ್ದಾರೆ.
ಅಣ್ಣನ ಬೆನ್ನಿಗೆ ಜಾರಕಿಹೊಳಿ ಸಹೋದರರು ನಿಂತಿದ್ದಾರೆ. ನಿನ್ನೆ ಜಾರಕಿಹೊಳಿ ಭೇಟಿಯಾಗಿದ್ದ ಸತೀಶ್ ಜಾರಕಿಹೊಳಿ, ಯಾವುದನ್ನೂ ಬಚ್ಚಿಡಬೇಡ. ಬಹಿರಂಗಗೊಳಿಸು ಎಂದು ಸಲಹೆ ಕೊಟ್ಟಿದ್ದಾರೆ. ಇಡೀ ಪ್ರಕರಣದ ನಿರ್ಧಾರ ಕೈಗೊಳ್ಳಲು ಬಾಲಚಂದ್ರಗೆ ರಮೇಶ್ ಜಾರಕಿಹೊಳಿ ಜವಾಬ್ದಾರಿ ನೀಡಿದ್ದಾರೆ ಎನ್ನಲಾಗಿದೆ.