ಬೆಂಗಳೂರು: ಸಿಡಿ ತೋರಿಸಿ ಮುಖ್ಯಮಂತ್ರಿಗಳಿಗೆ ಬ್ಲ್ಯಾಕ್‍ಮೇಲ್ ಮಾಡಿ ಸಚಿವ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ ಎಂಬ ಆರೋಪದ ಕುರಿತು ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆ ನಡೆಯುತ್ತಿದೆ. ಈ ಬಗ್ಗೆ ಇದೀಗ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸಹ ಹರಿಹಾಯ್ದಿದ್ದಾರೆ.
ಸಿ.ಡಿ ತೋರಿಸಿ @BSYBJP ಅವರನ್ನು ಬೆದರಿಸಿ, ಕೆಲವರು ಮಂತ್ರಿ ಹುದ್ದೆ ಪಡೆದಿದ್ದಾರೆ ಎಂದು ಬಿಜೆಪಿ ಶಾಸಕರೇ ಆರೋಪಿಸುತ್ತಿದ್ದಾರೆ. ಬ್ಲಾಕ್ಮೇಲ್ ಮಾಡಿದವರು ಯಾರೇ ಆಗಿರಲಿ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವ ಧೈರ್ಯ ಮುಖ್ಯಮಂತ್ರಿಗಳಿಗಿದೆಯೇ? 1/3#Mysuru
— Siddaramaiah (@siddaramaiah) January 14, 2021
Advertisement
ಸರಣಿ ಟ್ವೀಟ್ ಮಾಡಿರುವ ಅವರು, ಸಿಡಿ ತೋರಿಸಿ ಸಿಎಂ ಬೆದರಿಸಿ, ಕೆಲವರು ಮಂತ್ರಿ ಹುದ್ದೆ ಪಡೆದಿದ್ದಾರೆ ಎಂದು ಬಿಜೆಪಿ ಶಾಸಕರೇ ಆರೋಪಿಸುತ್ತಿದ್ದಾರೆ. ಬ್ಲಾಕ್ಮೇಲ್ ಮಾಡಿದವರು ಯಾರೇ ಆಗಿರಲಿ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವ ಧೈರ್ಯ ಮುಖ್ಯಮಂತ್ರಿಗಳಿಗಿದೆಯೇ ಎಂದು ಪ್ರಶ್ನಿಸಿದ್ದಾರೆ.
Advertisement
ಮುಖ್ಯಮಂತ್ರಿ @BSYBJP ಅವರ ಕುಟುಂಬ ರಾಜಕಾರಣದ ಬಗ್ಗೆ ಬಿಜೆಪಿ ನಾಯಕರಿಗೆ ತಡವಾಗಿ ಜ್ಞಾನೋದಯವಾಗಿದೆ. ಯಡಿಯೂರಪ್ಪ ನಾಮಕಾವಸ್ತೆ ಮುಖ್ಯಮಂತ್ರಿ, ನಿಜವಾದ ಅಧಿಕಾರ ಚಲಾಯಿಸುತ್ತಿರುವುದು ಅವರ ಮಗ ಎಂದು ನಾನು ಬಹಳ ಹಿಂದೆಯೇ ಹೇಳಿದ್ದೆ. ಕೆಲವರಿಗೆ ಈಗೀಗ ಸತ್ಯ ಗೊತ್ತಾಗ್ತಿದೆ. 2/3#Mysuru
— Siddaramaiah (@siddaramaiah) January 14, 2021
Advertisement
ಅಲ್ಲದೆ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕುಟುಂಬ ರಾಜಕಾರಣದ ಬಗ್ಗೆ ಬಿಜೆಪಿ ನಾಯಕರಿಗೆ ತಡವಾಗಿ ಜ್ಞಾನೋದಯವಾಗಿದೆ. ಯಡಿಯೂರಪ್ಪ ನಾಮಕಾವಸ್ತೆ ಮುಖ್ಯಮಂತ್ರಿ, ನಿಜವಾದ ಅಧಿಕಾರ ಚಲಾಯಿಸುತ್ತಿರುವುದು ಅವರ ಮಗ ಎಂದು ನಾನು ಬಹಳ ಹಿಂದೆಯೇ ಹೇಳಿದ್ದೆ. ಕೆಲವರಿಗೆ ಈಗೀಗ ಸತ್ಯ ಗೊತ್ತಾಗ್ತಿದೆ ಎಂದು ಮತ್ತೊಂದು ಟ್ವೀಟ್‍ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Advertisement
.@BJP4Karnataka leaders have now come to sense about family politics of @BSYBJP.
There are defacto & dejure CMs in Karnataka. The real power is in the hands of Yediyurappa’s son. Many know this truth.
2/2
— Siddaramaiah (@siddaramaiah) January 14, 2021
ಸಿಎಂ ಯಡಿಯೂರಪ್ಪ ಅವರ ಕುರ್ಚಿ ಗಟ್ಟಿಯಾಗಿದ್ದರೆ ಸಂಪುಟ ವಿಸ್ತರಣೆಗಾಗಿ ಹೈಕಮಾಂಡ್ ಬಳಿ ಗೋಗರೆಯುವ, ಕೈಕಾಲು ಹಿಡಿಯುವ ಅಗತ್ಯವಿರುತ್ತಿರಲಿಲ್ಲ. ಕೆಲವರಿಗೆ ಮಂತ್ರಿ ಸ್ಥಾನ ಕೊಡಲು ಕಾನೂನಿನ ತೊಡಕಿದೆ ಅಂತ ಗೊತ್ತಿದ್ರೂ ಸುಳ್ಳು ವಾಗ್ದಾನ ನೀಡಿ ಪಕ್ಷಕ್ಕೆ ಸೇರಿಸಿಕೊಂಡಿದ್ದಾರೆ. ಹೀಗಾಗಿ ಬಿಜೆಪಿ ಸೇರಿದ ಕೆಲವರು ಬಾಯಿ ಬಡ್ಕೊತಿರೋದು ಎಂದು ಆರೋಪಿಸಿದ್ದಾರೆ.