ಸಿಡಿ ವಿಚಾರದ ಹಿಂದೆ ದೊಡ್ಡ ದೊಡ್ಡ ಕೈಗಳೇ ಇವೆ: ಬಿ.ವೈ ವಿಜಯೇಂದ್ರ

Public TV
1 Min Read
VIJAYENDDRA

ಬೆಂಗಳೂರು: ಸಿಡಿ ವಿಚಾರದ ಹಿಂದೆ ದೊಡ್ಡ ದೊಡ್ಡ ಕೈಗಳೇ ಇವೆ ಎಂದು ಬಿಜೆಪಿ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದರು.

ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ತಮ್ಮ ವಿರುದ್ಧ ಷಡ್ಯಂತ್ರ ಎಂಬ ರಮೇಶ್ ಜಾರಕಿಹೊಳಿ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ರಮೇಶ್ ಜಾರಕಿಹೊಳಿಯವರು ಈ ಘಟನೆ ನಡೆದ ನಂತರ ಷಡ್ಯಂತ್ರ ಇತ್ತು ಅಂದಿದ್ದಾರೆ. ರಮೇಶ್ ಜಾರಕಿಹೊಳಿಯವರು ಹಾಗೆ ಹೇಳಿಕೆ ಕೊಟ್ಟಿದ್ದಾರೆ ಅಂದ್ರೆ ಒಂದು ಬಲವಾದ ಕಾರಣ ಇದೆ ಎಂದು ತಿಳಿಸಿದರು.

ramesh jarkiholi0

ರಮೇಶ್ ಜಾರಕಿಹೊಳಿ ಹೇಳಿಕೆ ಅಲ್ಲಗಳೆಯಲು ಸಾಧ್ಯವಿಲ್ಲ. ಇದರ ಹಿಂದೆ ದೊಡ್ಡ ದೊಡ್ಡ ಕೈಗಳೇ ಇವೆ. ಸಿಡಿ ತನಿಖೆ ಬಗ್ಗೆ ಸಿಎಂ, ಗೃಹ ಸಚಿವರು ಚರ್ಚಿಸಿ ನಿರ್ಧರಿಸ್ತಾರೆ. ಇದು ವೈಯಕ್ತಿಕ ದ್ವೇಷವೋ, ರಾಜಕೀಯ ದ್ವೇಷವೋ ಅಂತ ತನಿಖೆ ಬಳಿಕ ಗೊತ್ತಾಗುತ್ತೆ ಎಂದರು.

ಜಾರಕಿಹೊಳಿ ಸಹೋದರರು ಮತ್ತೊಮ್ಮೆ ಸಿಎಂ ಭೇಟಿ ಮಾಡಿ ಚರ್ಚೆ ಮಾಡ್ತಾರೆ. ಜಾರಕಿಹೊಳಿ ಸಹೋದರರ ಅಪೇಕ್ಷೆಯಂತೆ ತನಿಖೆ ನಡೆಸುವ ಬಗ್ಗೆ ಸಿಎಂ ತೀರ್ಮಾನ ತಗೋತಾರೆ. ಒಬ್ಬ ಮಂತ್ರಿ ವಿರುದ್ಧ ಹೀಗೆ ಕಾರ್ಯಾಚರಣೆ ನಡೆಸಿದ್ದಾರೆ ಅಂದ್ರೆ ಅವರು ಸಣ್ಣವರಲ್ಲ. ದೊಡ್ಡ ದೊಡ್ಡ ಕೈಗಳೇ ಇದರ ಹಿಂದೆ ಇರೋದು ಮೇಲ್ನೋಟಕ್ಕೆ ಗೊತ್ತಾಗುತ್ತೆ ಎಂದು ಅಭಿಪ್ರಾಯ ಪಟ್ಟರು.

VIJAYENDRA 1

ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿ ರಮೇಶ್ ಜಾರಕಿಹೊಳಿ, ಸಿಡಿ ಕೇಸ್ ಪ್ರಕರಣದ ಬೆಳಕಿಗೆ ಬಂದ ಮರುದಿನದಿಂದ ಅಜ್ಞಾತ ಸ್ಥಳದಲ್ಲಿದ್ದರು. ಇಂದು ಸುದ್ದಿಗೋಷ್ಠಿ ನಡೆಸಿದ ರಮೇಶ್ ಜಾರಕಿಹೊಳಿ, ಘಟನೆ ಬಗ್ಗೆ ಕಾನೂನು ಕ್ರಮ ತೆಗೆದುಕೊಳ್ಳಲು ಮುಂದಾಗಿದ್ದೇವೆ. ಯಶವಂತಪುರ ಮತ್ತು ಹುಳಿಮಾವಿನಲ್ಲಿ ಸಿಡಿ ಬಗ್ಗೆ ಪ್ಲಾನ್ ಮಾಡಲಾಗಿದೆ. ನಾಲ್ಕು ಮತ್ತು ಐದನೇ ಫ್ಲೋರ್ ನಲ್ಲಿ ಮೀಟಿಂಗ್ ನಡೆದಿದೆ ಎಂದು ಮಾತ್ರ ಹೇಳಬಲ್ಲೆ. ಓರ್ವ ಮಹಾನಾಯಕ ಈ ಷಡ್ಯಂತ್ರದ ಹಿಂದಿದ್ದಾನೆ ಎಂದು ಆರೋಪಿಸಿದರು.

Share This Article
Leave a Comment

Leave a Reply

Your email address will not be published. Required fields are marked *