– ರಾಜ್ಯ ಕಂಡ ಆದರ್ಶ ರಾಜಕಾರಣಿ ಅಂದ್ರು ಸುಧಾಕರ್
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪಗೆ ಕೊರೊನಾ ದೃಢವಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬೆನ್ನಲ್ಲೇ ಇದೀಗ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಗೂ ಕೋವಿಡ್ 19 ಪಾಸಿಟಿವ್ ಎಂದು ಬಂದಿದ್ದು, ಅವರು ಕೂಡ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಇದೀಗ ರಾಜಕೀಯ ನಾಯಕರು ಪಕ್ಷ ಬೇಧ ಮರೆತು ಅವರ ಶೀಘ್ರ ಚೇತರಿಕೆಗೆ ಶುಭಹಾರೈಸುತ್ತಿದ್ದಾರೆ.
ನನ್ನ ಕೊರೊನ ಪರೀಕ್ಷೆಯಲ್ಲಿ ಪಾಸಿಟಿವ್ ಎಂದು ವರದಿ ಬಂದಿದೆ. ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯಂತೆ ನಿನ್ನೆ ರಾತ್ರಿಯೇ ಆಸ್ಪತ್ರೆಗೆ ದಾಖಲಾಗಿದ್ದೇನೆ.
ಆತಂಕಕ್ಕೆ ಕಾರಣ ಇಲ್ಲ. ಕಳೆದ ಕೆಲವು ದಿನಗಳಿಂದ ನನ್ನ ಜೊತೆ ಸಂಪರ್ಕದಲ್ಲಿದ್ದವರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ವಿನಂತಿಸಿಕೊಳ್ಳುತ್ತೇನೆ.
— Siddaramaiah (@siddaramaiah) August 4, 2020
Advertisement
ಈ ಸಂಬಂಧ ಟ್ವೀಟ್ ಮಾಡಿರುವ ಮಾಜಿ ಸಿಎಂ ಹೆಚ್‍ಡಿಕೆ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಕೊರೊನಾ ಸೋಂಕು ತಗುಲಿರುವ ವಿಷಯ ಕೇಳಿ ಮನಸ್ಸಿಗೆ ಘಾಸಿಯಾಯಿತು. ಶೀಘ್ರ ಗುಣಮುಖರಾಗಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. ಸಾರ್ವಜನಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ಜನಪ್ರತಿನಿಧಿಗಳು ಅತಿಹೆಚ್ಚಿನ ಮುಂಜಾಗ್ರತಾ ಕ್ರಮಗಳನ್ನು ಚಾಚೂತಪ್ಪದೆ ಪಾಲಿಸುವಂತೆ ಮನವಿ ಮಾಡುತ್ತೇನೆ ಎಂದು ಬರೆದುಕೊಂಡಿದ್ದಾರೆ.
Advertisement
ವಿರೋಧ ಪಕ್ಷದ ನಾಯಕ @siddaramaiah ಅವರಿಗೆ ಕೊರೋನಾ ಸೋಂಕು ತಗುಲಿರುವ ವಿಷಯ ಕೇಳಿ ಮನಸ್ಸಿಗೆ ಘಾಸಿಯಾಯಿತು. ಶೀಘ್ರ ಗುಣಮುಖರಾಗಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ.
ಸಾರ್ವಜನಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ಜನಪ್ರತಿನಿಧಿಗಳು ಅತಿಹೆಚ್ಚಿನ ಮುಂಜಾಗ್ರತ ಕ್ರಮಗಳನ್ನು ಚಾಚೂತಪ್ಪದೆ ಪಾಲಿಸುವಂತೆ ಮನವಿ ಮಾಡುತ್ತೇನೆ.1/2
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) August 4, 2020
Advertisement
ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಕೂಡ ಸಿದ್ದರಾಮಯ್ಯ ಅವರ ಚೇತರಿಕೆಗೆ ಹಾರೈಸಿದ್ದಾರೆ. ವಿಪಕ್ಷನಾಯರು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕೋವಿಡ್ ಪಾಸಿಟಿವ್ ಬಂದಿರುವುದು ತಿಳಿದು ಬಂದಿದೆ. ರಾಜ್ಯ ಕಂಡ ಆದರ್ಶ ರಾಜಕಾರಣಿ ಅವರು. ಅವರಿಗೆ ಪಾಸಿಟಿವ್ ಬಂದಿರುವುದು ನನಗೆ ನೋವಾಗಿದೆ. ಆದಷ್ಟು ಬೇಗನೆ ಅವರು ಚೇತರಿಸಿಕೊಂಡು ಗುಣಮುಖರಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದಿದ್ದಾರೆ.
Advertisement
ವಿಪಕ್ಷನಾಯರು, ಮಾಜಿ ಮುಖ್ಯಮಂತ್ರಿ ಸನ್ಮಾನ್ಯ ಶ್ರೀ ಸಿದ್ದರಾಮಯ್ಯನವರಿಗೆ ಕೋವಿಡ್ ಪಾಸಿಟಿವ್ ಬಂದಿರುವುದು ತಿಳಿದು ಬಂದಿದೆ. ರಾಜ್ಯ ಕಂಡ ಆದರ್ಶ ರಾಜಕಾರಣಿ ಅವರು. ಅವರಿಗೆ ಪಾಸಿಟಿವ್ ಬಂದಿರುವುದು ನನಗೆ ನೋವಾಗಿದೆ.ಆದಷ್ಟು ಬೇಗನೆ ಅವರು ಚೇತರಿಸಿಕೊಂಡು ಗುಣಮುಖರಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ.
— Dr Sudhakar K (@mla_sudhakar) August 4, 2020
ಮಣಿಪಾಲ ಆಸ್ಪತ್ರೆಯ ವೈದ್ಯರೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆ. ಅವರ ಆರೋಗ್ಯದಲ್ಲಿ ಸ್ಥಿರವಾಗಿದೆ. ರಾಜ್ಯದ ಜನ ಆತಂಕ ಪಡುವ ಅಗತ್ಯವಿಲ್ಲ. ಸಿಎಂ ಬಿಎಸ್ವೈ ಮತ್ತು ಮಾಜಿ ಸಿಎಂ ಬೇಗ ಚೇತರಿಸಿಕೊಂಡು ಮತ್ತೆ ಎಂದಿನಂತೆ ಕರ್ತವ್ಯಕ್ಕೆ ಮರಳಲಿ ಎಂದು ಹಾರೈಸುತ್ತೇನೆ ಎಂದು ಸುಧಾಕರ್ ಟ್ವೀಟ್ ಮಾಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಕೂಡ ಮಾಜಿ ಮುಖ್ಯಮಂತ್ರಿಗಳು ಕೊರೊನಾದಿಂದ ಬೇಗನೇ ಗುಣಮುಖರಾಗಲಿ ಎಂದು ಟ್ವೀಟ್ ಮಾಡಿದ್ದಾರೆ.
ಮಣಿಪಾಲ ಆಸ್ಪತ್ರೆಯ ವೈದ್ಯರೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆ. ಅವರ ಆರೋಗ್ಯದಲ್ಲಿ ಸ್ಥಿರವಾಗಿದೆ. ರಾಜ್ಯದ ಜನ ಆತಂಕ ಪಡುವ ಅಗತ್ಯವಿಲ್ಲ. ಸಿಎಂ ಬಿಎಸ್ವೈ ಮತ್ತು ಮಾಜಿ ಸಿಎಂ ಬೇಗ ಚೇತರಿಸಿಕೊಂಡು ಮತ್ತೆ ಎಂದಿನಂತೆ ಕರ್ತವ್ಯಕ್ಕೆ ಮರಳಲಿ ಎಂದು ಹಾರೈಸುತ್ತೇನೆ
— Dr Sudhakar K (@mla_sudhakar) August 4, 2020
ಆರೋಗ್ಯ ಸಚಿವ ಶ್ರೀರಾಮುಲು ಟ್ವೀಟ್ ಮಾಡಿದ್ದು, ವಿರೋಧ ಪಕ್ಷದ ನಾಯಕರು ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿರುವ ಅವರು ಶೀಘ್ರವಾಗಿ ಗುಣಮುಖರಾಗಲೆಂದು ಹಾರೈಸುವುದಾಗಿ ತಿಳಿಸಿದ್ದಾರೆ. ಉಪಮುಖ್ಯಮಂತ್ರಿ ಅಶ್ವಥ್ ನಾರಾಯಣ್ ಟ್ವೀಟ್ ಮಾಡಿ, ಶೀಘ್ರಗುಣಮುಖರಾಗಿ ಸಿದ್ದರಾಮ್ಯನವರೇ, ನೀವು ಬೇಗನೆ ಚೇತರಿಸಿಕೊಳ್ಳುವಂತೆ ಪ್ರಾರ್ಥಿಸುವುದಾಗಿ ಬರೆದುಕೊಂಡಿದ್ದಾರೆ.
Wishing our CLP and Opposition leader Shri @siddaramaiah a speedy recovery from CoVID-19 and good health. https://t.co/MkScQ1g3Yx
— DK Shivakumar (@DKShivakumar) August 4, 2020
ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸೋಮವಾರ ರಾತ್ರಿ ಸಿದ್ದರಾಮಯ್ಯ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಕೊರೊನಾ ಟೆಸ್ಟ್ ಮಾಡಿಸಿದ್ದು ಪಾಸಿಟಿವ್ ಬಂದಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಪುತ್ರ ಯತೀಂದ್ರ, ನಿನ್ನೆ ಬೆಳಿಗ್ಗೆಯಿಂದ ತಂದೆಯವರಿಗೆ ಜ್ವರ ಬಂದಿದ್ದು ರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದರು. ಕೊರೊನಾ ಆಂಟಿಜೆನ್ ಟೆಸ್ಟ್ ಮಾಡಲಾಗಿದ್ದು ಕೊರೊನಾ ಸೋಂಕು ಬಂದಿರುವುದು ದೃಢಪಟ್ಟಿದೆ. ಇತ್ತೀಚೆಗೆ ಅವರ ಸಂಪರ್ಕಕ್ಕೆ ಬಂದವರು ಕ್ವಾರಂಟೈನ್ ಆಗಬೇಕೆಂದು ಕೇಳಿಕೊಳ್ಳುತ್ತೇನೆ ಎಂದು ಅವರು ಹೇಳಿದ್ದಾರೆ.
ನಿನ್ನೆ ಬೆಳಿಗ್ಗೆಯಿಂದ ತಂದೆಯವರಿಗೆ ಜ್ವರ ಬಂದಿದ್ದು ರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದರು. Corona antigen test ಮಾಡಲಾಗಿ ಅವರಿಗೆ ಕೊರೋನ ಸೋಂಕು ತಗುಲಿರುವುದು ಧೃಢಪಟ್ಟಿದೆ. ಇತ್ತೀಚೆಗೆ ಅವರ ಸಂಪರ್ಕಕ್ಕೆ ಬಂದವರು quarantine ಆಗಬೇಕೆಂದು ಕೇಳಿಕೊಳ್ಳುತ್ತೇನೆ.
— Dr Yathindra Siddaramaiah (@Dr_Yathindra_S) August 4, 2020