ಮೈಸೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗಿಂತ ಡಿ.ಕೆ.ಶಿವಕುಮಾರ್ ದೊಡ್ಡ ನಾಯಕ ಅಲ್ಲ. ರಾಜಕೀಯ ಪ್ರೇರಿತ ದಾಳಿ ಆಗಿದ್ದರೆ ಸಿದ್ದರಾಮಯ್ಯವರನ್ನು ಟಾರ್ಗೆಟ್ ಮಾಡಬೇಕಿತ್ತು ಅಲ್ವಾ ಎಂದು ಸಚಿವ ಡಾ.ಕೆ.ಸುಧಾಕರ್ ಪ್ರಶ್ನೆ ಮಾಡಿದ್ದಾರೆ.
Advertisement
ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಸುಧಾಕರ್, ತನಿಖೆ ಮೂಲಕ ಸತ್ಯಾಂಶ ಹೊರಬೀಳಲಿ. ಇದು ಡಿ.ಕೆ.ಶಿವಕುಮಾರ್ ಅವರು ಪರಿಶುದ್ಧ ಎಂಬುದನ್ನ ಸಾಬೀತುಪಡಿಸಲು ಅವಕಾಶ. ರಾಜಕೀಯ ಪ್ರೇರಿತ ದಾಳಿಯಾಗಿದ್ರೆ ಕಾಂಗ್ರೆಸ್ ನಲ್ಲಿ ಶಿವಕುಮಾರ್ ಅವರಿಗಿಂತ ದೊಡ್ಡ ನಾಯಕರಿದ್ದಾರೆ ಎಂದರು. ಇದನ್ನೂ ಓದಿ: ಮನೆಯ ಇಟ್ಟಿಗೆಗಳನ್ನೂ ತೆಗೆದುಕೊಂಡು ಹೋಗಲಿ – ಸಿಬಿಐ ದಾಳಿಗೆ ಡಿಕೆಶಿ ತಾಯಿ ಗರಂ
Advertisement
Advertisement
ಡಿ.ಕೆ.ಶಿವಕುಮಾರ್ ನಿವಾಸದ ಮೇಲೆ ದಾಳಿ ನಡೆದಿರೋದು ಇದು ಮೊದಲಲ್ಲ. ಹಾಗಾಗಿ ಐಟಿ, ಇಡಿ ಮತ್ತು ಸಿಬಿಐ ಅಧಿಕಾರಿಗಳು ತನಿಖೆಯ ಮುಂದುವರಿದ ಶೋಧ ನಡೆಸುತ್ತಿದ್ದಾರೆ. ದಾಳಿಯ ಬಗ್ಗೆ ಹೆಚ್ಚು ಮಾಹಿತಿ ನನಗಿಲ್ಲ. ತನಿಖೆ ಪಾರದರ್ಶಕವಾಗಿ ನಡೆಯುತ್ತಿದ್ದು, ಡಿ.ಕೆ.ಶಿವಕುಮಾರ್ ಅವರ ಪ್ರಾಮಾಣಿಕತೆ ತಿಳಿದು ಬರಲಿದೆ. ರಾಜಕಾರಣಕ್ಕೂ ಮತ್ತು ಸಿಬಿಐ ದಾಳಿಗೂ ಯಾವುದೇ ಸಂಬಂಧವಿಲ್ಲ. ಬಿಜೆಪಿಗೆ ರಾಜ್ಯದಲ್ಲಿ 117 ಸ್ಥಾನಗಳಿವೆ. ಈ ಎರಡು ಉಪಚುನಾವಣೆ ಸೋಲು-ಗೆಲುವಿನಿಂದ ಬಿಜೆಪಿ ಮೇಲೆ ಯಾವುದೇ ಪರಿಣಾಮ ಬೀರಲ್ಲ ಎಂದು ಹೇಳಿದರು. ಇದನ್ನೂ ಓದಿ: ಡಿಕೆಶಿಗೆ ಮೊದಲ ಅಗ್ನಿ ಪರೀಕ್ಷೆಯಲ್ಲಿ ಬಿಗ್ ಶಾಕ್ ಕೊಟ್ಟ ಸಿಬಿಐ
Advertisement
ಇಂದು ಬೆಳಗ್ಗೆಯಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮನೆಯ ಮೇಲೆ ಸಿಬಿಐ ಅಧಿಕಾರಿಗಳು ಶೋಧ ಕಾರ್ಯ ಮಾಡುತ್ತಿದ್ದಾರೆ. ಇದೀಗ ಡಿಕೆಶಿ ಮನೆಯಲ್ಲಿ ಬರೋಬ್ಬರಿ 50 ಲಕ್ಷ ಹಣ ಪತ್ತೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಇದನ್ನೂ ಓದಿ: ಮೋದಿ ಸರ್ಕಾರ ನಡೆಸಿರೋ ದಾಳಿ – ಡಿಕೆಶಿ ಮನೆ ಮೇಲಿನ CBI ರೇಡ್‍ಗೆ ಸಿದ್ದು ಖಂಡನೆ
ರಾಜ್ಯ ಸರ್ಕಾರದ ಅನುಮತಿ ಪಡೆದ ನಂತರ ಸಿಬಿಐ ಅಧಿಕಾರಿಗಳು ಡಿ.ಕೆ.ಶಿವಕುಮಾರ್ ಮನೆಯ ಮೇಲೆ ದಾಳಿ ಮಾಡಿದ್ದಾರೆ. ರೇಡ್ ವೇಳೆ ಡಿಕೆಶಿಯ ನಿವಾಸದಲ್ಲಿ 50 ಲಕ್ಷ ಹಣ ಪತ್ತೆಯಾಗಿದ್ದು, ಸಿಬಿಐ ಅಧಿಕಾರಿಗಳು ಆ ವಶವನ್ನು ಸೀಜ್ ಮಾಡಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ತಿಳಿದುಬಂದಿದೆ. ಹೀಗಾಗಿ ಹಣದ ಬಗ್ಗೆ ವಿಚಾರಣೆ ಮಾಡುವ ಸಲುವಾಗಿ ಸಿಬಿಐ ಅಧಿಕಾರಿಗಳು ಡಿಕೆಶಿಯನ್ನು ವಶಕ್ಕೆ ಪಡೆಯುವ ಸಾಧ್ಯತೆ ಇದೆ. ಇದನ್ನೂ ಓದಿ: ಡಿಕೆಶಿ ಮನೆಯಲ್ಲಿದ್ದ 50 ಲಕ್ಷ ಹಣ ಸೀಜ್?
ಸಿಬಿಐ ಅಧಿಕಾರಿಗಳು ಡಿಕೆಶಿಯನ್ನು ವಶಕ್ಕೆ ಪಡೆದು ಕಚೇರಿಗೆ ಕರೆದುಕೊಂಡು ಹೋಗಿ ವಿಚಾರಣೆ ಮಾಡುವ ಸಾಧ್ಯತೆ ಇದೆ. ಡಿಕೆಶಿ ಮನೆ ಮೇಲೆ ಮಾತ್ರವಲ್ಲದೇ ಸೋದರ ಡಿ.ಕೆ.ಸುರೇಶ್ ಮನೆಯ ಮೇಲೂ ಸಿಬಿಐ ದಾಳಿ ಮಾಡಿದೆ. ಡಿಕೆಶಿ, ಡಿ.ಕೆ.ಸುರೇಶ್ ಅವರಿಗೆ ಸಂಬಂಧಿಸಿದ ನಿವಾಸ, ಸಂಸ್ಥೆ, ಕಟ್ಟಡಗಳ ಮೇಲೆ ಸಿಬಿಐ ದಾಳಿ ಮಾಡಿದೆ. ಒಟ್ಟು 14 ವಿವಿಧ ಸ್ಥಳಗಳ ಮೇಲೆ ದಾಳಿ ಸಿಬಿಐ ತಂಡ ದಾಳಿ ಮಾಡಿದೆ.