ಬೆಂಗಳೂರು: ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಆರೋಗ್ಯ ತಪಾಸಣೆಗಾಗಿ ಮಣಿಪಾಲ್ ಆಸ್ಪತ್ರೆಗೆ ತೆರಳಿದ್ದು, ಪುತ್ರ ಯತೀಂದ್ರ ಅವರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ.
ಸಿದ್ದರಾಮಯ್ಯನವರಿಗೆ ಜ್ವರ ಕಾಣಿಸಿಕೊಂಡ ಹಿನ್ನೆಲೆ ವೈದ್ಯರ ಸಲಹೆ ಮೇರೆಗೆ ತಪಾಸಣೆಗೆ ಒಳಗಾಗುತ್ತಿದ್ದು, ಪುತ್ರ ಡಾ.ಯಂತೀಂದ್ರ ಸಿದ್ದರಾಮಯ್ಯ ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ವೈದ್ಯಕೀಯ ತಪಾಸಣೆ ನಂತರ ಅಡ್ಮಿಟ್ ಆಗಲು ಹೇಳಿದರೆ 2 ದಿನಗಳ ಕಾಲ ಮಣಿಪಾಲ್ ಆಸ್ಪತ್ರೆಯಲ್ಲಿ ದಾಖಲಾಗುವ ಸಾಧ್ಯತೆ ಇದೆ. ಇದನ್ನೂ ಓದಿ: ಕೋವಿಡ್ ಕೇಂದ್ರದಲ್ಲಿ ಯೋಗ ಟೀಚರ್ ಆದ ರೇಣುಕಾಚಾರ್ಯ
ಮಣಿಪಾಲ್ ಆಸ್ಪತ್ರೆಯಲ್ಲಿ ವೈದ್ಯರು ಸಿಟಿ ಸ್ಕ್ಯಾನ್ ಮಾಡಲಿದ್ದು, ತಪಾಸಣೆ ನಂತರ ಆಸ್ಪತ್ರೆಗೆ ಅಡ್ಮಿಟ್ ಆಗಬೇಕೋ ಬೇಡವೋ ಎಂಬುದನ್ನು ತೀರ್ಮಾನಿಸಲಿದ್ದಾರೆ. ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಆರೋಗ್ಯ ತಪಾಸಣೆಗಾಗಿ ಮಣಿಪಾಲ್ ಆಸ್ಪತ್ರೆಗೆ ತೆರಳಿದ್ದಾರೆ. ಈ ಹಿಂದೆ ಸಿದ್ದರಾಮಯ್ಯನವರಿಗೆ ಕೊರೊನಾ ಸೋಂಕು ತಗುಲಿತ್ತು, ಬಳಿಕ ಗುಣಮುಖರಾಗಿದ್ದರು.